ಚಿತ್ತಾಪುರ | ರೌಡಿಶೀಟರ್ ಮಣಿಕಂಠ ಪರ ಪ್ರಧಾನಿ ಮೋದಿ ಪ್ರಚಾರ

Date:

  • ಬಿಜೆಪಿ ಅಭ್ಯರ್ಥಿ ಮಣಿಕಂಠ ವಿರುದ್ಧ 40 ಪ್ರಕರಣ
  • ಮೇ 6ರಂದು ಚಿತ್ತಾಪುರದ ರಾವೂರದಲ್ಲಿ ಸಮಾವೇಶ

ಗಡಿಪಾರಾಗಿದ್ದ ರೌಡಿಶೀಟರ್, ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮೇ 6ರಂದು ಪ್ರಚಾರ ನಡೆಸಲಿದ್ದಾರೆ.

ಹಾಲಿ ಶಾಸಕ ಪ್ರಿಯಾಂಕ್‌ ಖರ್ಗೆ ಅವರನ್ನು ಹಣಿಯಲು ಬಿಜೆಪಿ ನಾನಾ ರಣತಂತ್ರಗಳನ್ನು ರೂಪಿಸಿದೆ. ಇದರ ಭಾಗವಾಗಿಯೇ ಅಕ್ಕಿ ಕಳ್ಳತನದ ಆರೋಪ ಹೊತ್ತಿರುವ ಮತ್ತು ಚಿತ್ತಾಪುರದಿಂದ ಗಡಿಪಾರಾಗಿದ್ದ ರೌಡಿಶೀಟರ್‌ ಮಣಿಕಂಠ ರಾಠೋಡ್‌ಗೆ ಟಿಕೆಟ್ ನೀಡಿದೆ.

ಕಮಲ ಪಾಳಯದ ಈ ನಿರ್ಧಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಇದರ ಬೆನ್ನಲ್ಲೇ ದೇಶದ ಪ್ರಧಾನ ಮಂತ್ರಿ ಮೋದಿ ಅವರೇ ಆತನ ಪರ ಪ್ರಚಾರಕ್ಕೆ ಇಳಿಯುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಕುರಿತು ಮಾತನಾಡಿರುವ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್, “ಪ್ರಧಾನಿ ಮೋದಿ ಅವರು ಮೇ 2ರಂದು ಕಲಬುರಗಿಯಲ್ಲಿ ರೋಡ್ ಶೋ ನಡೆಸಿ ವಾಪಸ್‌ ತೆರಳುತ್ತಾರೆ. ನಂತರ ಮೇ 6ರಂದು ಚಿತ್ತಾಪುರ ಕ್ಷೇತ್ರದ ರಾವೂರ ಸಮೀಪದ ಸಮಾವೇಶ ನಡೆಸುತ್ತಾರೆ” ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಪ್ರಚಾರಕ್ಕೆ ಬರುತ್ತಿರುವ ಬಿಜೆಪಿ ಅಭ್ಯರ್ಥಿಯ ಮೇಲೆ ರಾಜ್ಯದಲ್ಲಿ ಮಾತ್ರವಲ್ಲದೆ ತೆಲಂಗಾಣ ಮತ್ತು ಮಹಾರಾಷ್ಟ್ರದ ವಿವಿಧ ಪೊಲೀಸ್ ಠಾಣೆಗಳಲ್ಲಿ 40 ಪ್ರಕರಣಗಳು ದಾಖಲಾಗಿವೆ.

ಈ ಸುದ್ದಿ ಓದಿದ್ದೀರಾ? ಗೋಕಾಕ್‌ | ಕಾಂಗ್ರೆಸ್‌ ಜೊತೆ ‘ಕೈ’ ಜೋಡಿಸಿದ ಜೆಡಿಎಸ್ ಅಭ್ಯರ್ಥಿ ಉಚ್ಚಾಟನೆ?

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ್ ಖರ್ಗೆ, “ಶಿಕ್ಷೆಗೆ ಒಳಗಾದ ಕಳ್ಳನ ಪರವಾಗಿ ಪ್ರಧಾನಿ ಮೋದಿ ಅವರು ಮತ ಕೇಳಲು ಬರುತ್ತಿದ್ದಾರೆ. ಅವರಲ್ಲಿ ಯಾವ ನೈತಿಕತೆಯಿದೆ?” ಎಂದು ಪ್ರಶ್ನಿಸಿದ್ದಾರೆ.

ಟ್ವೀಟ್ ಮಾಡಿ ಪ್ರಧಾನಿ ವಿರುದ್ಧ ಕುಟುಕಿರುವ ಕಾಂಗ್ರೆಸ್, “ಗಡಿಪಾರಾಗಿದ್ದ ರೌಡಿಶೀಟರ್ ಹಾಗೂ ಸರ್ಕಾರದ ಅಕ್ಕಿ ಕಳ್ಳತನದ ಆರೋಪಿಗೆ ಟಿಕೆಟ್ ನೀಡಿರುವುದು ಬಿಜೆಪಿಯ ನೈತಿಕ ದಿವಾಳಿತನಕ್ಕೆ ಸಾಕ್ಷಿಯಾಗಿತ್ತು” ಎಂದು ಹೇಳಿದೆ.

“ಈಗ ಪ್ರಧಾನಿ ಮೋದಿ ಕಳ್ಳಕಾಕರ ಪರ ಮತ ಕೇಳಲು ಬರುವ ಮೂಲಕ ಈ ದೇಶಕ್ಕೆ ಕಳಂಕ ತರುತ್ತಿದ್ದಾರೆ. ರೌಡಿಗಳಿಗೆ ಕೈಮುಗಿಯುವ ಹಾಗೂ ಮತ ಕೇಳುವ ಮೂಲಕ ಪ್ರಧಾನಿ ಹುದ್ದೆಯ ಘನತೆ ಕಳೆದಿದ್ದಾರೆ” ಎಂದು ವ್ಯಂಗ್ಯವಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹರಿಯಾಣ ಚುನಾವಣೆ | ಉಚಿತ ವಿದ್ಯುತ್, ವೈದ್ಯಕೀಯ ಚಿಕಿತ್ಸೆ ಸೇರಿ 5 ಗ್ಯಾರಂಟಿ ಘೋಷಿಸಿದ ಎಎಪಿ

ಈ ವರ್ಷದ ಅಕ್ಟೋಬರ್‌ನಲ್ಲಿ ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲ...

ಶಿರೂರು ಗುಡ್ಡ ಕುಸಿತ | ನೊಂದ ಕುಟುಂಬಗಳ ಜತೆ ಸರಕಾರ ನಿಲ್ಲಬೇಕು: ಎಚ್‌ ಡಿ ಕುಮಾರಸ್ವಾಮಿ

ರಾಜ್ಯ ಸರಕಾರವು ಗುಡ್ಡ ಕುಸಿತದಲ್ಲಿ ಜೀವ ಕಳೆದುಕೊಂಡಿರುವ ಕುಟುಂಬಗಳ ಜತೆ ನಿಲ್ಲಬೇಕು...

ಕಾವಡ್ ಯಾತ್ರೆ ವೇಳೆ ಅಂಗಡಿ ಮಾಲೀಕರ ಹೆಸರುಳ್ಳ ಫಲಕ ಹಾಕಲು ಆದೇಶ; ‘ಸಂವಿಧಾನದ ಮೇಲಿನ ದಾಳಿ’ ಎಂದ ಪ್ರಿಯಾಂಕಾ

ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಜುಲೈ 22ರಿಂದ ನಡೆಯುವ ಕಾವಡ್ ಯಾತ್ರೆ ನಡೆಯಲಿದೆ....

ನಮ್ಮ ಬಗ್ಗೆಯೂ ತನಿಖೆ ಮಾಡಿ, ಆದರೆ ಮೊದಲು ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ: ಬಿ ವೈ ವಿಜಯೇಂದ್ರ

ಮುಖ್ಯಮಂತ್ರಿಗಳೇ ನೀವು ಅಹಿಂದ ಹೆಸರು ಹೇಳಿ ಅಧಿಕಾರಕ್ಕೆ ಬಂದವರು. ವಾಲ್ಮೀಕಿ ನಿಗಮದಲ್ಲಿ...