ಚಿತ್ತಾಪುರ | ಪ್ರಿಯಾಂಕ್ ಖರ್ಗೆಯವರನ್ನು ಕಟ್ಟಿ ಹಾಕುವ ಬಿಜೆಪಿ ತಂತ್ರಗಾರಿಕೆ ಫಲ ನೀಡುವುದೇ?

Date:

ಸಂಘಪರಿವಾರದ ನೂರಾರು ಕಾರ್ಯಕರ್ತರು ಖರ್ಗೆಗೆ ಸೋಲಿಸಲು ಚಿತ್ತಾಪುರದಲ್ಲಿ ಬೀಡು ಬಿಟ್ಟಿದ್ದಾರೆ. ಜಾರ್ಖಂಡ್ ಬಿಜೆಪಿ ಸಂಸದರಾದ ಆದಿತ್ಯ ಪ್ರಸಾದ್ ಸಾಹು, ನಿಶಿಕಾಂತ್ ದುಬೆ, ಸುನೀಲ್ ಕುಮಾರ್ ಸಿಂಗ್ ಕ್ಷೇತ್ರದಲ್ಲೇ ಬೀಡುಬಿಟ್ಟಿದ್ದಾರೆ. ಕೋಲಿ ಸಮಾಜದ ಮತಗಳನ್ನು ಸೆಳೆಯಲು ಬಿಜೆಪಿ ನಾಯಕರು ಯತ್ನಿಸುತ್ತಿದ್ದಾರೆ.

ಎಸ್‌ಸಿ ಮೀಸಲು ಕ್ಷೇತ್ರವಾದ ಚಿತ್ತಾಪುರ ಕಾಂಗ್ರೆಸ್ಸಿನ ಭದ್ರಕೋಟೆಯಾಗಿದೆ. ಈವರೆಗೆ ಕ್ಷೇತ್ರದಲ್ಲಿ ಒಂದು ಉಪಚುನಾವಣೆ ಸೇರಿ 13ಕ್ಕೂ ಹೆಚ್ಚು ಚುನಾವಣೆಗಳು ನಡೆದಿವೆ. ಇದರಲ್ಲಿ ಕಾಂಗ್ರೆಸ್ ಹತ್ತು ಸಲ ನಗೆ ಬೀರಿದರೆ, ಬಿಜೆಪಿ ಒಮ್ಮೆ ಮಾತ್ರ ಗೆದ್ದಿದೆ. ಅದು ಉಪಚುನಾವಣೆಯಲ್ಲಿ. ಇಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ನೇರಾನೇರ ಹಣಾಹಣಿ ಏರ್ಪಟ್ಟು, ರಾಜ್ಯ- ದೇಶದಾದ್ಯಂತ ಸದ್ದು ಮಾಡುತ್ತಿದೆ. 

- Advertisement -

ಸತತವಾಗಿ ಎರಡು ಸಲ ಗೆದ್ದು ಮೂರನೆ ಬಾರಿಗೂ ಗೆಲ್ಲುವ ಉಮೇದಿನಲ್ಲಿರುವ ಪ್ರಿಯಾಂಕ್ ಖರ್ಗೆಗೆ ಕಟ್ಟಿ ಹಾಕಲು ಬಿಜೆಪಿ ಹರಸಾಹಸ ಪಡುತ್ತಿದೆ. ಇಲ್ಲಿ ಬಿಜೆಪಿಯ ಮಣಿಕಂಠ ರಾಠೋಡ್‌ ಸ್ಪರ್ಧೆ ನೆಪ ಮಾತ್ರ. ಸಂಘಪರಿವಾರದ ನೂರಾರು ಕಾರ್ಯಕರ್ತರು ಖರ್ಗೆಗೆ ಸೋಲಿಸಲು ಚಿತ್ತಾಪುರದಲ್ಲಿ ಬೀಡು ಬಿಟ್ಟಿದ್ದಾರೆ. ಜಾರ್ಖಂಡ್ ಬಿಜೆಪಿ ಸಂಸದರಾದ ಆದಿತ್ಯ ಪ್ರಸಾದ್ ಸಾಹು, ನಿಶಿಕಾಂತ್ ದುಬೆ, ಸುನೀಲ್ ಕುಮಾರ್ ಸಿಂಗ್ ಕ್ಷೇತ್ರದಲ್ಲೇ ತಳವೂರಿದ್ದಾರೆ ಮತ್ತು ರಾಜ್ಯದ ವಿಧಾನ ಪರಿಷತ್ ಸದಸ್ಯರಾದ ಎನ್ ರವಿಕುಮಾರ್ ಅವರು ಕ್ಷೇತ್ರಾದ್ಯಂತ ಕಾಲಿಗೆ ಚಕ್ರ ಕಟ್ಟಿಕೊಂಡು ಕೋಲಿ ಸಮಾಜದ ಮತಗಳನ್ನು ಸೆಳೆಯಲು ಯತ್ನಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದು ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಪಾಲಿಗೆ ಬಹುಮುಖ್ಯ ಕ್ಷೇತ್ರವಾಗಿದೆ. ಇದವರ ಸ್ವಕ್ಷೇತ್ರ. ಕಾಂಗ್ರೆಸ್ ಈ ಕ್ಷೇತ್ರ ಉಳಿಸಿಕೊಳ್ಳಲು ಸೋತರೆ ದೇಶದಾದ್ಯಂತ ಖರ್ಗೆ ಮೇಲೆ ದಾಳಿ ಮಾಡಲು ಬಿಜೆಪಿಗೆ ಒಂದು ಅಸ್ತ್ರ ಸಿಕ್ಕಂತಾಗುತ್ತದೆ. ಹಾಗಾಗಿಯೇ ಸಮಬಲದ ಹೋರಾಟ ನೀಡಬೇಕೆಂದು ರೌಡಿ ಶೀಟರ್ ಮಣಿಕಂಠ ರಾಠೋಡ್‌ಗೆ ಇಲ್ಲಿ ಬಿಜೆಪಿ ಮಣೆ ಹಾಕಿದೆ. ಪಕ್ಷದ ಈ ನಡೆ ಬಿಜೆಪಿಗೆ ವರವಾಗುತ್ತದೆಯೋ ಅಥವಾ ಉರುಳಾಗುತ್ತದೆಯೋ ಎಂಬುವುದು ಫಲಿತಾಂಶದ ದಿನವೇ ಗೊತ್ತಾಗುತ್ತದೆ.

ಮಾಧ್ಯಮಗಳು ಬಿಜೆಪಿ ಅಭ್ಯರ್ಥಿಗೆ ರೌಡಿ ಶೀಟರ್ ಎಂದೇ ಸಂಬೋಧಿಸುತ್ತಿರುವುದು ಮತ್ತು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುತ್ತಿರುವುದು ಬಿಜೆಪಿಗೆ ಅದರಲ್ಲೂ ಪ್ರಧಾನಿ ಮೋದಿಯವರಿಗೆ ಮುಜುಗರಕ್ಕೆ ದೂಡಿದಂತಾಗಿದೆ. ಪ್ರಧಾನಿ ಮಣಿಕಂಠ ರಾಠೋಡ್‌ ಪರ ಮತಯಾಚಿಸಲು ಕ್ಷೇತ್ರಕ್ಕೆ ಬರಲು ದಿನಾಂಕವೂ ನಿಗದಿಯಾಗಿತ್ತು. ಆದರೀಗ ಏಕಾಏಕಿ ರದ್ದು ಪಡಿಸಿದ್ದಾರೆ. ಇದು ಕಾಂಗ್ರೆಸ್ ಕಾರ್ಯಕರ್ತರಿಗೆ ನೈತಿಕ ಬಲ ತಂದುಕೊಟ್ಟಿದೆ. ರಾಠೋಡ ಅವರು ಕಳೆದ ಎರಡ್ಮೂರು ವರ್ಷಗಳಿಂದ ಕ್ಷೇತ್ರದ ಮೇಲೆ ಕಣ್ಣಿಟ್ಟು ಅನ್ನದಾಸೋಹ, ಕೆಲವು ಅಂಗವಿಕಲರಿಗೆ ದ್ವಿಚಕ್ರ ವಾಹನ ನೀಡುವುದು, ಎರಡ್ಮೂರು ಕಡೆ ಸ್ವಂತ ಹಣದಿಂದ ಬೋರವೆಲ್ ಹಾಕಿಸುವುದು… ಎಂಬಿತ್ಯಾದಿ ಕೆಲಸಗಳ ಮತ್ತು ಮುಖ್ಯವಾಗಿ ಪ್ರಿಯಾಂಕ್ ಖರ್ಗೆ ಮೇಲೆ ನೇರವಾಗಿ ವಾಕ್ಸಮರ ನಡೆಸುವ ಮೂಲಕ ಕ್ಷೇತ್ರದ ಜನರ ಗಮನ ಸೆಳೆದಿದ್ದಾರೆ. ಅವರಿಗೆ ಬಿಜೆಪಿ ಟಿಕೆಟ್ ನೀಡಲು ಇದೊಂದು ಕಾರಣವಾಗಿದೆ.

ಪ್ರಸಕ್ತ ಪ್ರಿಯಾಂಕ್ ಖರ್ಗೆ ಬಿಜೆಪಿ ಪಾಲಿಗೆ ಸಿಂಹಸ್ವಪ್ನವಾಗಿದ್ದಾರೆ. ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಸಾಲುಸಾಲು ಹಗರಣಗಳು ಮುನ್ನೆಲೆಗೆ ತರುವಲ್ಲಿ ಪ್ರಿಯಾಂಕ್ ಅವರ ಪಾತ್ರ ದೊಡ್ಡದಿದೆ. ಜತೆಗೆ ಮೋದಿಯವರಿಗೂ ಆಗಾಗ್ಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಳುತ್ತಿದ್ದಾರೆ. ಇದು ಬಿಜೆಪಿ ಹೈಕಮಾಂಡ್ ಕಣ್ಣು ಕೆಂಪಾಗಿಸಿದೆ. ಹಾಗಾಗಿಯೇ ಅವರನ್ನು ಸೋಲಿಸಲು ಪಕ್ಷದ ಹೈಕಮಾಂಡ್ ತಂತ್ರಗಾರಿಕೆ ಹೆಣೆದಿದೆ.

ತನ್ನ ಕೈ ಹಿಡಿದ ಧರ್ಮಪತ್ನಿ ಮತ್ತು ಒಡಹುಟ್ಟಿದ ಸಹೋದರ ಗಂಭೀರ ಕಾಯಿಲೆಗೆ ತುತ್ತಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಇದು ಪ್ರಿಯಾಂಕ್ ಅವರಿಗೆ ಅಕ್ಷರಶಃ ಹಿಂಡಿ ಹಿಪ್ಪೆ ಮಾಡಿದೆ. ಹೀಗಿದ್ದರೂ ಅನಿವಾರ್ಯವಾಗಿ ಕ್ಷೇತ್ರದಲ್ಲಿ ಸುತ್ತಾಡುತ್ತಿದ್ದಾರೆ. ಇದು ಅವರಿಗೆ ಅನುಕಂಪವಾಗಿ, ಮತಗಳಾಗಿ ಪರಿವರ್ತನೆಯಾಗುವ ಸಾಧ್ಯತೆಯೂ ಇದೆ. 

ಪ್ರಿಯಾಂಕ್ ಖರ್ಗೆ ತಕ್ಕಮಟ್ಟಿಗೆ ತಮ್ಮ ಕ್ಷೇತ್ರದಲ್ಲಿ ವಿಕಾಸ ಮಾಡಿದ್ದಾರೆ. ಅಂತಹ ಆಡಳಿತ ವಿರೋಧಿ ಅಲೆ ಕ್ಷೇತ್ರದಲ್ಲೇನು ಇಲ್ಲ. ಆದರವರು ಚಿತ್ತಾಪುರಕ್ಕಿಂತ ಹೆಚ್ಚಾಗಿ ಬೆಂಗಳೂರಿನ ಸದಾಶಿವ ನಗರದಲ್ಲೇ ಇರುತ್ತಾರೆಂಬ ಜನರ ಆರೋಪ ಅವರ ಮೇಲಿದೆ. ‘ಅಪರೂಪಕ್ಕೆ ಬಂದರೂ ಜನಸಾಮಾನ್ಯರ ಕೈಗೆ ಸಿಗುವುದಿಲ್ಲ. ಅವರ ಸುತ್ತ ಮುತ್ತಲೂ ಯಾವಾಗಲೂ ವೈಟ್ ಕಾಲರ್ ಜನರೆ ಸುತ್ತುವರೆದಿರುತ್ತಾರೆ’ ಎಂದು ಚಿತ್ತಾಪುರದ ಕಲ್ಯಾಣಿ ಅಂಬಲಗಿ ಈ ದಿನ.ಕಾಮ್‌ ಮುಂದೆ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ.

ಇದನ್ನು ಓದಿ ಚುನಾವಣೆ 2023 | ಮತ ಎಣಿಕೆ ದಿನ ಸಂಭ್ರಮಾಚರಣೆಯಲ್ಲಿ ಪಟಾಕಿ ನಿಷೇಧ

‘ಚಿತ್ತಾಪುರ ಕ್ಷೇತ್ರದ ಸರ್ವಾಂಗೀಣ ವಿಕಾಸಕ್ಕಾಗಿ ನನ್ನನ್ನು ಗೆಲ್ಲಿಸಿ’ ಎಂದು ರಾಠೋಡ್‌ ಮತಯಾಚನೆ ಮಾಡುತ್ತಿದ್ದಾರೆ. ಆರೆಸ್ಸೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪ್ರಿಯಾಂಕ್ ಹಿರಿಯರು – ಕಿರಿಯರು ಎನ್ನದೆ ಎಲ್ಲರಿಗೂ ಒರಟಾಗಿಯೇ ಮಾತನಾಡುತ್ತಾರೆಂದು ಹೇಳಿ ಮತದಾರರ ಮೇಲೆ ಅವರ ಬಗ್ಗೆ ನೆಗೆಟಿವ್ ಬಿತ್ತಲು ಯತ್ನಿಸುತ್ತಿದ್ದಾರೆ. ಇದು ನಿಜವೇ ಆಗಿದ್ದರೆ ಮೇಲ್ಜಾತಿಯ ಮತದಾರರ ಮೇಲೆ ಪರಿಣಾಮ ಬೀರಿ, ಅವರ ಮತಗಳು ಬಿಜೆಪಿ ಕಡೆಗೆ ವಾಲುವ ಸಾಧ್ಯತೆ ಇದೆ.

ಮಣಿಕಂಠ ೧
ಮಣಿಕಂಠ ಪರ ಪ್ರಚಾರ ನಡೆಸಿದ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ

ಪ್ರಿಯಾಂಕ್ ಕ್ಷೇತ್ರದುದ್ದಕ್ಕೂ ಸುತ್ತಾಡಿ ‘ಕ್ಷೇತ್ರದಲ್ಲಿ ನನ್ನ ಅವಧಿಯಲ್ಲಿ ಆದಂತಹ ಅಭಿವೃದ್ಧಿ ನೋಡಿ ಮತ ನೀಡಿ’ ಎಂದು ಮತಯಾಚನೆ ಮಾಡುತ್ತಿದ್ದಾರೆ. ಜತೆಗೆ ಮಣಿಕಂಠ ರಾಠೋಡ್‌ ರೌಡಿ ಶೀಟರ್ ಎಂಬ ವಿಷಯ ಮುನ್ನೆಲೆಗೆ ತರಲು ಯತ್ನಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ‘ರೌಡಿ ಶೀಟರ್’ಎಂಬುದು ಚುನಾವಣಾ ವಿಷಯವೇ ಆಗಿಲ್ಲ. ಆದರವರ ಈ ಮಾತು ತಮ್ಮ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬುತ್ತಿದೆ. ಇಡೀ ಕಲಬುರ್ಗಿ ಜಿಲ್ಲೆಯ 9 ಮತ ಕ್ಷೇತ್ರದಲ್ಲಿ ಆಳಂದ ಹೊರತು ಪಡಿಸಿದರೆ ಚಿತ್ತಾಪುರದಲ್ಲೇ ಬಹಳ ವ್ಯವಸ್ಥಿತವಾಗಿ ಕಾಂಗ್ರೆಸ್ ಕಾರ್ಯಕರ್ತರು ಡೋರ್ ಟು ಡೋರ್ ಪ್ರಚಾರ ಮಾಡುತ್ತಿದ್ದಾರೆ. ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಹೆಬ್ಬಾಳ ಮತ್ತು ಬಿಜೆಪಿ ಟಿಕೆಟ್ ಆಕಾಂಕ್ಷಿ ಅರವಿಂದ್ ರಾಠೋಡ್‌ಗೆ ಬಿಜೆಪಿಯಿಂದ ಕಾಂಗ್ರೆಸ್ ಕಡೆಗೆ ಸೆಳೆದದ್ದು ಕಾಂಗ್ರೆಸಿಗೆ ಬಲ ತಂದು ಕೊಟ್ಟಿದೆ. ‌

ಕ್ಷೇತ್ರದ ರಾವೂರು, ನಾಲವಾರ ಹೋಬಳಿಯಲ್ಲಿ ಬಿಜೆಪಿ ಹಾಗೂ ವಾಡಿ, ಚಿತ್ತಾಪುರದಲ್ಲಿ ಕಾಂಗ್ರೆಸ್ ಬಲವಾಗಿದ್ದರೆ, ಗುಂಡಗುರ್ತಿ ಹೋಬಳಿಯಲ್ಲಿ ಸಮಬಲದ ಫೈಟ್ ಇದೆ. ಕ್ಷೇತ್ರದಲ್ಲಿ ಕೋಲಿ ಮತ್ತು ಲಿಂಗಾಯತ ಸಮಾಜದ ಮತಗಳೆ ನಿರ್ಣಾಯಕವಾಗಿವೆ. ದಲಿತ ಸಮುದಾಯದ ಎಡಗೈ ಜತೆಗೆ ಬಲಗೈ ಸಮುದಾಯದ ಮತಗಳೂ ಪ್ರಿಯಾಂಕ್ ಜತೆ ಗಟ್ಟಿಯಾಗಿ ನಿಲ್ಲುವ ಸಾಧ್ಯತೆಯಿದೆ. ಲಿಂಗಾಯತ ಸಮುದಾಯದ ಮುಖಂಡರು ಪ್ರಿಯಾಂಕ್ ಜತೆ ಇದ್ದಾರೆ. ಇವರು ಎಷ್ಟು ಪ್ರಮಾಣದಲ್ಲಿ ತಮ್ಮ ಸಮುದಾಯದಿಂದ ಮತ ತರುತ್ತಾರೆಯೇ ಹಾಗೂ ಕೋಲಿ ಸಮಾಜದ ಮತಗಳು ಯಾವ ಕಡೆ ವಾಲುತ್ತವೆ ಎಂಬುವುದರ ಮೇಲೆ ಅಭ್ಯರ್ಥಿಗಳ ಸೋಲು – ಗೆಲುವು ನಿರ್ಧಾರವಾಗುತ್ತದೆ. ‘ಆಪರೇಷನ್ ಹಸ್ತ’ ಮೂಲಕ ಮರಳಿ ಕಾಂಗ್ರೆಸ್ ಗೂಡಿಗೆ ಸೇರಿರುವ ಕೋಲಿ ಸಮಾಜದ ಪ್ರಭಾವಿ ನಾಯಕ ಬಾಬುರಾವ್ ಚಿಂಚನಸೂರ್ ಅಪಘಾತಕ್ಕೆ ತುತ್ತಾಗಿ ಮನೆ ಸೇರಿರುವುದು ಕಾಂಗ್ರೆಸ್ಸಿಗೆ ಚಿಂತೆಗೀಡು ಮಾಡಿದೆ.

ಬಿಜೆಪಿಗೆ ಲಂಬಾಣಿ ಹಾಗೂ ಲಿಂಗಾಯತ ಮತಗಳು ಸಾಲಿಡ್ ಆಗಿ ಅಲ್ಲದಿದ್ದರೂ ಬಹುತೇಕ ಮತಗಳು ಹೋಗುವ ಸಾಧ್ಯತೆಯಿದೆ ಕಾಂಗ್ರೆಸಿಗೆ ಲಂಬಾಣಿ ಸಮುದಾಯದ 20% ಮತಗಳು ಬರುತ್ತಿರುವುದು ಪ್ಲಸ್ ಪಾಯಿಂಟ್ ಆಗಿದೆ. ಜೆಡಿಎಸ್ ಅಭ್ಯರ್ಥಿ ಸುಭಾಶ್ಚಂದ್ರ ರಾಠೋಡ್‌ ಕಣದಲ್ಲಿ ಇದ್ದರೂ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಒಂದು ವೇಳೆ ಅವರು ತಮ್ಮ ಸಮುದಾಯದ ಮತಗಳು ಸೆಳೆಯುವಲ್ಲಿ ಯಶಸ್ವಿಯಾದರೆ ಅದು ಬಿಜೆಪಿಗೆ ದುಬಾರಿ ಆಗಬಹುದು.

ಸದ್ಯ ಸಮಬಲದ ಹೋರಾಟ ನಡೆಯುತ್ತಿದೆ. ಪ್ರಿಯಾಂಕ್ ವಿರುದ್ಧ ಆಡಳಿತ ವಿರೋಧಿ ಅಲೆ ಎಬ್ಬಿಸಲು ಎಷ್ಟೇ ಪ್ರಯತ್ನಿಸಿದರು, ಅದಾಗದಿರುವುದು ಬಿಜೆಪಿಗೆ ಇಕ್ಕಟ್ಟಿಗೆ ಸಿಲುಕಿಸಿದೆ. ದಿನದಿಂದ ದಿನಕ್ಕೆ ಮಣಿಕಂಠ ಸೊರಗುತ್ತಿದ್ದಾರೆ. ಬಿಜೆಪಿಯ ಅಬ್ಬರದ ಪ್ರಚಾರ ಮಣಿಕಂಠ ಕೈ ಹಿಡಿದರೆ, ಪ್ರಿಯಾಂಕ್ ರಾಜಕೀಯ ಭವಿಷ್ಯ ಅತಂತ್ರವಾಗಲಿದೆ.

ಮಣಿಕಂಠ ರಾಥೋಡ್‌ ಬಿಜೆಪಿ ಕಾರ್ಯಕರ್ತನೊಂದಿಗೆ ಮಾತನಾಡಿರುವ ಆಡಿಯೊವೊಂದು ಇಂದು ವೈರಲ್‌ ಆಗಿದೆ. ಖರ್ಗೆ ಅವರ ಹೆಂಡತಿ ಮಕ್ಕಳನ್ನು ಕತ್ತರಿಸಿ ಹಾಕುತ್ತೇನೆ ಎಂದು ಬೆದರಿಕೆ ಹಾಕಿರುವ ಈ ಆಡಿಯೊವನ್ನು ಕಾಂಗ್ರೆಸ್‌ ಉಸ್ತುವಾರಿ ರಣ್‌ದೀಪ್‌ ಸುರ್ಜೇವಾಲರು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಈ ದಿಢೀರ್‌ ಬೆಳವಣಿಗೆ ಕಾಂಗ್ರೆಸ್‌ಗೆ ಇನ್ನಷ್ಟು ಮತ ತಂದುಕೊಡುವುದರಲ್ಲಿ ಅನುಮಾನವಿಲ್ಲ.

49661542 294235811438250 5384525710729674752 n
ಸಿದ್ದಪ್ಪ ಮೂಲಗೆ
+ posts

ಪತ್ರಕರ್ತರು

ಪೋಸ್ಟ್ ಹಂಚಿಕೊಳ್ಳಿ:

ಸಿದ್ದಪ್ಪ ಮೂಲಗೆ
ಸಿದ್ದಪ್ಪ ಮೂಲಗೆ
ಪತ್ರಕರ್ತರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನದ ಶಾಸಕನಾದ ಬೆಂಗಳೂರಿನ ಬಟ್ಟೆ ವ್ಯಾಪಾರಿ

ಬೆಂಗಳೂರಿನಲ್ಲಿ ವಾಸವಿರುವ ಬಟ್ಟೆ ವ್ಯಾಪಾರಿಯೊಬ್ಬರು ರಾಜಸ್ಥಾನ ರಾಜ್ಯದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜಾಜಿನಗರದಲ್ಲಿ ವಾಸವಿರುವ...

ಮಿಜೋರಾಂ ಮತ ಎಣಿಕೆ: ಬಹುಮತದತ್ತ ಝೆಡ್‌ಪಿಎಂ

ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಒಟ್ಟು...

ಮಧ್ಯಪ್ರದೇಶ ಚುನಾವಣೆ | ಆಡಳಿತ ವಿರೋಧಿ ಅಲೆಯ ನಡುವೆಯೂ ಬಿಜೆಪಿ ಜಯಭೇರಿ

ಮಧ್ಯಪ್ರದೇಶದಲ್ಲಿ ಬಿಜೆಪಿ ಉಗ್ರ ಹಿಂದುತ್ವ ಪ್ರತಿಪಾದಿಸಿದರೆ, ಕಾಂಗ್ರೆಸ್‌ನ ಕಮಲನಾಥ್ ಸಾಫ್ಟ್ ಹಿಂದುತ್ವದ...

ಛತ್ತೀಸ್‌ಗಡ: ಹಗರಣಗಳ ಆರೋಪಕ್ಕೆ ಸಿಲುಕಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್

ಛತ್ತೀಸ್‌ಗಢ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರ...