ಶೆಟ್ಟರ್-ಸವದಿ ಬಿಜೆಪಿ ತೊರೆದ ಬೆನ್ನಲ್ಲೇ ಕಾಂಗ್ರೆಸ್‌ನ ಲಿಂಗಾಯತ ನಾಯಕನಿಗೆ ಬಿಜೆಪಿ ಗಾಳ

Date:

  • ಕಾಂಗ್ರೆಸ್​ ಲಿಂಗಾಯತ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಪ್ರಯೋಗಿಸಲು ಮುಂದಾದ ಬಿಜೆಪಿ
  • ಎಸ್ ​ಆರ್​ ಪಾಟೀಲ್​ ಅವರನ್ನು ಬಿಜೆಪಿಗೆ ಸೆಳೆಯಲು ಸಿಎಂ ಬೊಮ್ಮಾಯಿ ತಂತ್ರ

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಬಿಜೆಪಿ ಕೂಡ ಕಾಂಗ್ರೆಸ್‌ ಒಳಗಿನ ಲಿಂಗಾಯತ ನಾಯಕರಿಗೆ ಗಾಳ ಹಾಕಿದೆ.

ಟಿಕೆಟ್‌ ವಂಚಿತರನ್ನು ತಮ್ಮತ್ತ ಸೆಳೆದುಕೊಳ್ಳಲು ಎಲ್ಲ ಪಕ್ಷದ ನಾಯಕರು ಒಳಗೊಳಗೆ ಕಸರತ್ತು ನಡೆಸಿದ್ದಾರೆ. ಕಾಂಗ್ರೆಸ್‌ನಲ್ಲಿ ವಿಧಾನ ಪರಿಷತ್‌ನ ಮಾಜಿ ಪ್ರತಿಪಕ್ಷ ನಾಯಕ ಎಸ್‌ ಆರ್‌ ಪಾಟೀಲ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನಿರಾಕರಿಸಿದೆ. ಬಿಜೆಪಿ ಈ ಲಿಂಗಾಯತ ನಾಯಕನನ್ನು ಸೆಳೆಯಲು ಮುಂದಾಗಿದೆ.

ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನಗೊಂಡಿರುವ ಮಾಜಿ ಸಚಿವ ಉತ್ತರ ಕರ್ನಾಟಕದ ಹಿರಿಯ ಲಿಂಗಾಯತ ನಾಯಕ ಎಸ್​ ಆರ್ ಪಾಟೀಲ್​ ಅವರನ್ನು ಸಚಿವರೊಬ್ಬರ ಮೂಲಕ ಸೆಳೆಯಲು ಸಿಎಂ ಬಸವರಾಜ ಬೊಮ್ಮಾಯಿ ತಂತ್ರ ರೂಪಿಸಿದ್ದಾರೆ. ಈಗಾಗಲೇ ಒಂದು ಸುತ್ತಿನ ಮಾತುಕತೆ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಧಾನ ಪರಿಷತ್‌ಗೆ ಪುನರಾಯ್ಕೆ ಮಾಡದಿದ್ದಕ್ಕೆ ಮೊದಲೇ ಕಾಂಗ್ರೆಸ್​ ನಾಯಕರ ವಿರುದ್ಧ ಎಸ್​ ಆರ್ ಪಾಟೀಲ್ ಮುನಿಸಿಕೊಂಡಿದ್ದರು. ಅಲ್ಲದೇ ಪಕ್ಷದ ಕಾರ್ಯಚಟುವಟಿಕೆಗಳಿಂದ ಪಾಲ್ಗೊಳ್ಳದೇ ದೂರ ಉಳಿದುಕೊಂಡಿದ್ದರು.

ನಂತರದಲ್ಲಿ ಮುನಿಸು ಮರೆತ ಎಸ್‌ ಆರ್‌ ಪಾಟೀಲ್ ಅವರು ಬೀಳಗಿ ಅಥವಾ ದೇವರ ಹಿಪ್ಪರಗಿ ಕ್ಷೇತ್ರದ ಟಿಕೆಟ್ ಕೇಳಿದ್ದರು. ಆದ್ರೆ, ಕಾಂಗ್ರೆಸ್​ ಈಗ ಮಣೆ ಹಾಕಿಲ್ಲ. ಇದರಿಂದ ಎಸ್ ​ಆರ್​​ ಪಾಟೀಲ್​ ಕಾಂಗ್ರೆಸ್ ನಾಯಕರ ವಿರುದ್ಧ ಮತ್ತಷ್ಟು ಆಕ್ರೋಶಗೊಂಡಿದ್ದಾರೆ.

ಸೋಮವಾರ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಈ ಕುರಿತು ಚರ್ಚಿಸಿದ್ದಾರೆ. ಈ ಭೇಟಿ ಯಾವುದು ಫಲ ನೀಡದ ಹಿನ್ನೆಲೆಯಲ್ಲಿ ಇದೀಗ ಪಕ್ಷ ತೊರೆಯಲು ಪಾಟೀಲರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಇದನ್ನೇ ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ಸಚಿವರೊಬ್ಬರ ಮೂಲಕ ಎಸ್ ​ಆರ್​ ಪಾಟೀಲ್​ ಅವರನ್ನು ಬಿಜೆಪಿಗೆ ಸೆಳೆಯಲು ಬೊಮ್ಮಾಯಿ ಮುಂದಾಗಿದ್ದಾರೆ. ಈ ಮೂಲಕ ಕಾಂಗ್ರೆಸ್​ ಲಿಂಗಾಯತ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಪ್ರಯೋಗಕ್ಕೆ ಮುಂದಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಐಟಿ, ಬಿಟಿ ಕಂಪನಿಗಳಿಗೆ ಸಮರ್ಪಕ ನೀರು ಪೂರೈಕೆಗೆ ಬದ್ಧ: ಜಲಮಂಡಳಿ ಅಧ್ಯಕ್ಷ

“ಬೆಂಗಳೂರಿನ ಇತರೆ ಪ್ರದೇಶಗಳಂತೆಯೇ, ನಗರದ ಹೊರವಲಯದಲ್ಲಿರುವ ಐಟಿ-ಬಿಟಿ ಕಂಪನಿಗಳಿಗೂ ನೀರಿನ ಕೊರತೆಯಾಗದಂತೆ...

ಜೆಡಿಎಸ್‌ ಟಿಕೆಟ್‌ ಫೈನಲ್ | ಮಂಡ್ಯಕ್ಕೆ ಎಚ್‌ಡಿಕೆ, ಹಾಸನಕ್ಕೆ ಪ್ರಜ್ವಲ್‌, ಕೋಲಾರಕ್ಕೆ ಮಲ್ಲೇಶ್‌ ಬಾಬು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ಗೆ 28...

ಮುಖ್ತಾರ್ ಅನ್ಸಾರಿಗೆ ಜೈಲಿನಲ್ಲಿ ‘ಸ್ಲೋ ಪಾಯ್ಸನ್’ ನೀಡಲಾಗಿದೆ; ಪುತ್ರ ಉಮರ್ ಅನ್ಸಾರಿ ಆರೋಪ

ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ಸಂಜೆ ಜೈಲಿನಲ್ಲಿ...