ಗದಗ | ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಿ: ಪಿಡಿಓ ಶೈನಾಜ್

Date:

Advertisements
  • ನರೇಗಾ ಕೂಲಿಕಾರರಿಗೆ ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿ ಬೋಧನೆ
  • ವೃದ್ಧರು, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ

ಭಾರತ ಸಂವಿಧಾನ ನಮಗೆ ನೀಡಿರುವ ಈ ಹಕ್ಕನ್ನು ಮರೆಯದೇ ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಸುವ್ಯವಸ್ಥಿತ ಆಡಳಿತ ರಚನೆಗೆ ಕಾರಣರಾಗೋಣ ಎಂದು ಚಿಕ್ಕನರಗುಂದ ಗ್ರಾಮ ಪಂಚಾಯಿತಿ ಪಿಡಿಓ ಶೈನಾಜ್ ಮುಜಾವರ ಹೇಳಿದರು.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕನರಗುಂದ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆದ ಸಮುದಾಯ ಕಾಮಗಾರಿಯ ಬದು ನಿರ್ಮಾಣ ಕೆಲಸದ ಸಂದರ್ಭದಲ್ಲಿ ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.

ಮೇ 10 ರಂದು ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಮತದಾನದ ದಿನ ನಿಮ್ಮ ಮಕ್ಕಳ ಭವಿಷ್ಯದ ದೃಷ್ಟಿಕೋನದಿಂದ ಕಡ್ಡಾಯವಾಗಿ ಮತದಾನ ಮಾಡಿ ಎಂದು ತಿಳಿಸಿದರು.

Advertisements

ನಮ್ಮ ಮತ ಮಾರಿಕೊಂಡರೇ ನಮ್ಮ ಆತ್ಮಸಾಕ್ಷಿಗೆ ನಾವು ದ್ರೋಹ ಬಗೆದಂತೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಆಮಿಷಗಳಿಗೆ ಬಲಿಯಾಗದೆ ನಿರ್ಭೀತಿಯಿಂದ ಮತದಾನ ಮಾಡಿ ಎಂದು ಸಲಹೆ ನೀಡಿದರು.

ಬೇಸಿಗೆ ಅವಧಿಯಲ್ಲಿ ಚುನಾವಣೆ ಬಂದಿರುವುದರಿಂದ ಹಿರಿಯ ನಾಗರಿಕರಿಗೆ ಮತ್ತು ವಿಶೇಷ ಚೇತನರಿಗೆ ಇದೇ ಮೊದಲ ಬಾರಿ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಮಾಡಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಮತದಾರರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಸ್ಪರ್ಧೆಯಿಂದ ಹಿಂದೆ ಸರಿದ ಬಿಜೆಪಿ ಶಾಸಕ ಶ್ರೀನಿವಾಸ್‌ ಶೆಟ್ಟಿ

ನರೇಗಾ ಕೂಲಿಕಾರರಿಗೆ ಮತದಾನದ ಪ್ರತಿಜ್ಞಾ ವಿಧಿಯನ್ನು ತಾಲೂಕು ಪಂಚಾಯಿತಿ ನರೇಗಾ ವಿಭಾಗದ ಮಾಹಿತಿ ಮತ್ತು ಶಿಕ್ಷಣ ಸಂಯೋಜಕ ಸುರೇಶ ಬಾಳಿಕಾಯಿ ಬೋಧಿಸಿದರು. ಬಳಿಕ ಮಾತನಾಡಿದ ಅವರು, ನರೇಗಾ ಯೋಜನೆಯಲ್ಲಿ ಕೆಲಸ ಮಾಡುವ ಕೂಲಿಕಾರರಿಗೆ ದಿನವೊಂದಕ್ಕೆ 316 ರೂಪಾಯಿ ನೀಡಲಾಗುತ್ತದೆ ಎಂದು ಹೇಳಿದರು.

ಬೇಸಿಗೆಯ ಅವಧಿಯಲ್ಲಿ ಕನಿಷ್ಟ 60 ದಿನಗಳವರೆಗೆ ನರೇಗಾದಲ್ಲಿ ಕೆಲಸ ಮಾಡಿದ ಕುಟುಂಬಕ್ಕೆ 18,960 ರೂಪಾಯಿ ಕೂಲಿಮೊತ್ತ ಸಿಗುತ್ತದೆ. ಈ ಹಣವನ್ನು ಕೂಲಿಕಾರರು ಮುಂಗಾರು ಆರಂಭದಲ್ಲಿ ಕೃಷಿ ಚಟುವಟಿಕೆಗಳ ಬಳಕೆಗೆ ಸಹಾಯಕವಾಗಿತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಚಿಕ್ಕನರಗುಂದ ಗ್ರಾಮ ಪಂಚಾಯಿತಿ ಸಿಬ್ಬಂದಿ, ನರೇಗಾ ಸಿಬ್ಬಂದಿ, ಗ್ರಾಮಸ್ಥರು ಹಾಗೂ ನರೇಗಾ ಕೂಲಿಕಾರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X