ಬಳ್ಳಾರಿ ಕಾಂಗ್ರೆಸ್ ಕ್ಲೀನ್ ಸ್ವೀಪ್; ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರದಲ್ಲಿ ಕಮಲ ಶೂನ್ಯ ಸಾಧನೆ

Date:

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಚುನಾವಣಾ ಆಯೋಗದ ಇತ್ತೀಚಿನ ವರದಿಗಳಂತೆ 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ 126, ಬಿಜೆಪಿ 60, ಜೆಡಿಎಸ್ 19ರಲ್ಲಿ ಜಯಗಳಿಸಿವೆ. ಉಳಿದಂತೆ ಕರ್ನಾಟಕ ಸರ್ವೋದಯ ಪಕ್ಷದ ದರ್ಶನ್‌ ಪುಟ್ಟಣಯ್ಯ, ಕೆಆರ್‌ಪಿಪಿಯಿಂದ ಗಾಲಿ ಜನಾರ್ದನ ರೆಡ್ಡಿ ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ.

ಬಳ್ಳಾರಿಯ ಎಂಟೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕ್ಲೀನ್‌ ಸ್ವೀಪ್ ಮಾಡಿದೆ. ಹಡಗಲಿ, ಹಗರಿಬೊಮ್ಮನಹಳ್ಳಿ, ವಿಜಯನಗರ, ಕಂಪ್ಲಿ, ಬಳ್ಳಾರಿ, ಬಳ್ಳಾರಿ ನಗರ, ಸಂಡೂರು ಹಾಗೂ ಕೂಡ್ಲಗಿ ಕ್ಷೇತ್ರಗಳಲ್ಲಿ ಕೈ ಅಭ್ಯರ್ಥಿಗಳು ವಿಜಯ ಸಾಧಿಸಿದ್ದಾರೆ.

ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಬಿಜೆಪಿ ಶೂನ್ಯ ಸಾಧನೆ ಮಾಡಿದೆ. ಬಿಜೆಪಿ ಸರ್ಕಾರದ 13 ಸಚಿವರು ಸೋಲು ಕಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ. ಬಸವರಾಜ ಬೊಮ್ಮಾಯಿ ಮಾತ್ರ ಗೆಲುವು ಸಾಧಿಸಲು ಶಕ್ತರಾಗಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೆಡಿಎಸ್‌ ಟಿಕೆಟ್‌ ಫೈನಲ್ | ಮಂಡ್ಯಕ್ಕೆ ಎಚ್‌ಡಿಕೆ, ಹಾಸನಕ್ಕೆ ಪ್ರಜ್ವಲ್‌, ಕೋಲಾರಕ್ಕೆ ಮಲ್ಲೇಶ್‌ ಬಾಬು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ಗೆ 28...

ಮುಖ್ತಾರ್ ಅನ್ಸಾರಿಗೆ ಜೈಲಿನಲ್ಲಿ ‘ಸ್ಲೋ ಪಾಯ್ಸನ್’ ನೀಡಲಾಗಿದೆ; ಪುತ್ರ ಉಮರ್ ಅನ್ಸಾರಿ ಆರೋಪ

ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ಸಂಜೆ ಜೈಲಿನಲ್ಲಿ...