ಕಾಂಗ್ರೆಸ್‌ಗೆ ಅವರ ಶಾಸಕರ ಮೇಲೆ ನಂಬಿಕೆ ಇಲ್ಲ: ಸಿಎಂ ಬೊಮ್ಮಾಯಿ

Date:

Advertisements
  • ಕಾಂಗ್ರೆಸ್‌ನವರಿಗೆ ಬಹುಮತ ಬರಲ್ಲ
  • ನಾವು ಬಹುಮತದ ಗಡಿ ದಾಟುತ್ತೇವೆ

“ಕಾಂಗ್ರೆಸ್‌ನವರಿಗೆ ಬಹುಮತ ಬರಲ್ಲ. ಹಾಗಾಗಿ ಬೇರೆ ಪಕ್ಷದವರ ಜತೆ ಮಾತನಾಡುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನ ಆರ್.ಟಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಾನು ಮೊದಲಿಂದಲೂ ಒಂದೇ ಮಾತು ಹೇಳುತ್ತ ಬಂದಿದ್ದೇನೆ. ನಮಗೆ ಸ್ಪಷ್ಟ ಬಹುಮತ ಬರುತ್ತದೆ. ನಾವು ಗೆಲ್ಲುವ ವಿಶ್ವಾಸ ಇದ್ದು, ಬಹುಮತದ ಗಡಿ ದಾಟುತ್ತೇವೆ. ಮ್ಯಾಜಿಕ್ ನಂಬರ್ ತಲುಪುತ್ತೇವೆ. ಎಲ್ಲ ಕ್ಷೇತ್ರ, ಬೂತ್‌ಗಳಿಂದ ಗ್ರೌಂಡ್ ಮಾಹಿತಿ ತರಿಸಿದ್ದೇವೆ” ಎಂದರು.

“ನಾನೇ ಕರೆ ಮಾಡಿ ಇಲ್ಲಿನ ವಸ್ತುಸ್ಥಿತಿ ಬಗ್ಗೆ ಹೈಕಮಾಂಡ್ ನಾಯಕರಿಗೆ ತಿಳಿಸಿದ್ದೇನೆ. ಹೈಕಮಾಂಡ್ ನಾಯಕರು ಸಹ ಗೆಲ್ಲುವ ವಿಶ್ವಾಸದಲ್ಲಿದ್ದು, ಬಿಜೆಪಿ ಸರ್ಕಾರ ರಚಿಸುವ ವಿಶ್ವಾಸವಿದೆ” ಎಂದು ಬೊಮ್ಮಾಯಿ ಹೇಳಿದರು.

ಈ ಸುದ್ದಿ ಓದಿದ್ದೀರಾ?:ಷರತ್ತು ಒಪ್ಪಿಕೊಳ್ಳುವ ಪಕ್ಷಕ್ಕೆ ಬೆಂಬಲ; ಬಿಜೆಪಿ, ಕಾಂಗ್ರೆಸ್‌ಗೆ ಆಹ್ವಾನ ನೀಡಿದ ಎಚ್‌ ಡಿ ಕುಮಾರಸ್ವಾಮಿ

“ಈಗ ನಮ್ಮ ಮುಂದೆ ಮೈತ್ರಿಯ ಪ್ರಶ್ನೆ ಇಲ್ಲ. ನಾವು ಬಹುಮತ ದಾಟುತ್ತೇವೆ. ಕಾಂಗ್ರೆಸ್‌ನವರು ಏನೇ ಸಭೆ ಮಾಡಲಿ. ಅವರಿಗೆ ಸಭೆ ಮಾಡುವ ಹಕ್ಕಿದೆ. ಎಲ್ಲ ಪಕ್ಷಗಳೂ ಸಭೆ ಮಾಡುತ್ತಾರೆ. ಅದನ್ನು ದೊಡ್ಡದಾಗಿ ಬಿಂಬಿಸುವ ಅವಶ್ಯಕತೆ ಇಲ್ಲ” ಎಂದರು.

ಇದಾದ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ನಿವಾಸದಲ್ಲಿ ಸಭೆ ಸೇರಿದ ಸಿಎಂ, ಮುಂದಿನ ರಾಜಕೀಯ ನಡೆಗಳ ಬಗ್ಗೆ ಚರ್ಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಕೀಯ ವಿಕೃತಿ | ಖರ್ಗೆ ಅವರ ಅನಾರೋಗ್ಯ – ನಂಜು ಕಾರುತ್ತಿರುವ ಬಿಜೆಪಿಗರು

ಖರ್ಗೆ ಅವರು ದಲಿತ ಸಮುದಾಯದಿಂದ ಬಂದವರು. ಆ ಕಾರಣಕ್ಕಾಗಿಯೇ ಬಿಜೆಪಿ ಮತ್ತು...

ಚಿತ್ರದುರ್ಗ | ನಿಗಮ ಮಂಡಳಿಗೆ ಪರಿಗಣಿಸದೇ ಅನ್ಯಾಯ: ಕಾಂಗ್ರೆಸ್ಸಿನ ಆರ್ ಕೆ ಸರ್ದಾರ್ ಬೆಂಬಲಿಗರ ಆಕ್ರೋಶ

ʼʼಕರ್ನಾಟಕ ಪ್ರದೇಶ ಕಾಂಗ್ರೆಸ್ಸಿನ ಹಾಗೂ ಚಿತ್ರದುರ್ಗದ ಹಿರಿಯ ಮುಖಂಡರು ಮುಸ್ಲಿಂ ನಾಯಕರಾದ...

ಮಳೆ ಹಾನಿ ಪ್ರದೇಶಗಳಿಗೆ ಸಚಿವರು, ಅಧಿಕಾರಿಗಳು ಭೇಟಿ ನೀಡುತ್ತಿಲ್ಲ: ಪ್ರತಿಪಕ್ಷ ನಾಯಕ ಆರ್‌ ಅಶೋಕ

ಮಳೆ ಹಾನಿ ಪ್ರದೇಶಗಳಿಗೆ ಸಚಿವರು, ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಎಲ್ಲರೂ ಜಾತಿ...

ಈದಿನ ಗ್ರೌಂಡ್‌ ರಿಪೋರ್ಟ್‌ | ಪ್ರವಾಹ ಇಳಿದುಹೋದ ಮೇಲೆ… ಬದುಕೆಲ್ಲ ಬರಿದಾಗಿದೆ!

ಕಲಬುರಗಿ ಜಿಲ್ಲೆಯಲ್ಲಿ ಭೀಮಾ ನದಿಯ ಪ್ರವಾಹ ತಗ್ಗಿದೆ. ಇಷ್ಟು ದಿನ ಆರ್ಭಟಿಸಿದ...

Download Eedina App Android / iOS

X