ಬೀದರ್ | ಅಂಬೇಡ್ಕರರನ್ನು ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿ ಮಾಡಿದ್ದೇ ಕಾಂಗ್ರೆಸ್: ಮಲ್ಲಿಕಾರ್ಜುನ ಖರ್ಗೆ

Date:

  • ಆರ್‌ಎಸ್‌ಎಸ್‌, ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಫೋಟೊ ಇಡುವುದಿಲ್ಲ
  • ಅಂಬೇಡ್ಕರ್ ತತ್ವ ಆದರ್ಶ ಬಿಜೆಪಿಗೆ ಗೊತ್ತಿಲ್ಲ, ನಮಗೆ ಹೇಳಲು ಹೊರಟಿದೆ

ಕಾಂಗ್ರೆಸ್ಸಿನವರು ಅಂಬೇಡ್ಕರ್ ಅವರಿಗೂ ಅವಮಾನ ಮಾಡಿದ್ದಾರೆ ಎಂದು ಮೋದಿ ಹೋದಲ್ಲೆಲ್ಲಾ ಹೇಳುತ್ತಿದ್ದಾರೆ. ಅಂಬೇಡ್ಕರ್ ಅವರ ಬುದ್ಧಿವಂತಿಕೆ ನೋಡಿ ಜವಹರಲಾಲ್ ನೆಹರು, ಮಹಾತ್ಮಗಾಂಧಿ, ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

- Advertisement -

ಭಾಲ್ಕಿ ಪಟ್ಟಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾಂಗ್ರೆಸ್ ಬಹಿರಂಗ ಪ್ರಚಾರ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದರು. “ಅಂಬೇಡ್ಕರರನ್ನು ಸಂವಿಧಾನ ರಚನಾ ಸಭೆಯ ಅಧ್ಯಕ್ಷರನ್ನಾಗಿ ಮಾಡಿದ ಸಮಯದಲ್ಲಿ ಜನಸಂಘ, ಬಿಜೆಪಿ ಇರಲಿಲ್ಲ.ಅಂಬೇಡ್ಕರ್‌ ಬರೆದ ಸಂವಿಧಾನವನ್ನು ಜನಸಂಘ, ಬಿಜೆಪಿಯವರು ಒಪ್ಪುತ್ತಿಲ್ಲ. ಈ ಪಕ್ಷಗಳ ನಾಯಕರು ಬರೆದ ಪುಸ್ತಕದಲ್ಲಿ ‘ಅಂಬೇಡ್ಕರ್ ಅವರ ಸಂವಿಧಾನ ಸರಿಯಿಲ್ಲ. ಮನುವಿನ ವಿಚಾರಗಳು ಸಂವಿಧಾನದಲ್ಲಿ ಇಲ್ಲ. ಹಾಗಾಗಿ, ಸಂವಿಧಾನ ಒಪ್ಪುವುದಿಲ್ಲ’ವೆಂದು ಹೇಳಿದ್ದರು” ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

“ಶೂದ್ರ ಸಮಾಜಕ್ಕೆ ಶಿಕ್ಷಣ ಕೊಡಬಾರದು ಎಂದು ಮನು ಹೇಳಿದ್ದರು. ಮನುಸ್ಮೃತಿಯಲ್ಲಿ ಹೆಣ್ಣುಮಕ್ಕಳಿಗೆ, ಶೂದ್ರರಿಗೆ ಸ್ವಾತಂತ್ರ್ಯವಿಲ್ಲ. ಮನುವಿನ ವಿಚಾರಗಳು ಬಿಜೆಪಿಯವರಿಗೆ ಬೇಕು. ಸಂವಿಧಾನದ ಆಶಯಗಳಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬುದ್ಧ, ಬಸವ, ಅಂಬೇಡ್ಕರ್ ಫುಲೆ ಕಾಂಗ್ರೆಸ್ಸಿಗೆ ಆದರ್ಶ

“ಸಂವಿಧಾನವು ಜಾತಿ, ಮತ, ಪಂಥ ನೋಡದೆ ಎಲ್ಲರಿಗೂ ಸಮನಾದ ಹಕ್ಕು ನೀಡಿದೆ. ಅಂಬೇಡ್ಕರ್ ಬರೆದ ಸಂವಿಧಾನ ಶ್ರೇಷ್ಠ. ಬುದ್ಧ, ಬಸವಣ್ಣ, ಅಂಬೇಡ್ಕರ್, ಮಹಾತ್ಮ ಫುಲೆ ಅವರನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಈ ಮಹಾತ್ಮರು ನಮ್ಮೆಲ್ಲರಿಗೆ ಮನುಷ್ಯರನ್ನಾಗಿ ಮಾಡಿ, ಮನುಷ್ಯರಂತೆ ಬಾಳಲು ಬದುಕಿನ ಮಂತ್ರ ನೀಡಿದವರು. ಇವರ ತತ್ವಗಳ ಮೇಲೆ ಕಾಂಗ್ರೆಸ್ ನಡೆದಿದೆ” ಎಂದು ತಿಳಿಸಿದರು.

“ಆರ್‌ಎಸ್‌ಎಸ್‌, ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಫೋಟೊ ಇಡುವುದಿಲ್ಲ. ಕೇವಲ ಚುನಾವಣೆ ಬಂದಾಗ ಮಾತ್ರ ಫೋಟೊ ಇಡುತ್ತಾರೆ. ಬಿಜೆಪಿಯವರು ಕೇವಲ ಓಟಿಗಾಗಿ ಅಂಬೇಡ್ಕರ್ ಅವರಿಗೆ ನಮಸ್ಕರಿಸುತ್ತಾರೆ. ಅಂಬೇಡ್ಕರ್ ನಮ್ಮ ಭಾಗ್ಯದಾತಾ, ನಾವು ಅವರನ್ನು ತಂದೆಯಂತೆ ಪೂಜಿಸುತ್ತೇವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಂಬೇಡ್ಕರ್ ಅವರ ಮೂರ್ತಿ, ಭಾವಚಿತ್ರಗಳು ಇವೆ. ಮೋದಿ, ಅಮಿತ್ ಶಾ ಅವರ ಕ್ಷೇತ್ರದಲ್ಲಿ ಇವೆಯಾ” ಎಂದು ಪ್ರಶ್ನಿಸಿದರು.

“ಅಂಬೇಡ್ಕರ್ ಅವರ ಆದರ್ಶ, ತತ್ವಗಳು ಬಿಜೆಪಿಗೆ ಗೊತ್ತಿಲ್ಲ. ಆದರೆ, ನಮಗೆ ಹೇಳಲು ಹೊರಟಿದ್ದಾರೆ. ನಿಮಗೆ ಓಟ್ ಬೇಕಾದರೆ ತೆಗೆದುಕೊಳ್ಳಿ. ಸುಳ್ಳು ಹೇಳಿ ತೆಗೆದುಕೊಳ್ಳಬೇಡಿ” ಎಂದು ಬಿಜೆಪಿಯವರಿಗೆ ತಿರುಗೇಟು ನೀಡಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಜನರ ಸಮಸ್ಯೆಗಳ ಬಗ್ಗೆ ಯೋಚಿಸುವ ಪ್ರಜ್ಞಾವಂತ ಅಭ್ಯರ್ಥಿಗಳೇ ಇಲ್ಲ : ಕೆ ಉಮಾ

ಕರ್ನಾಟಕದ ಭವಿಷ್ಯ ಬದಲಿಸುವ ಚುನಾವಣೆ

ಇದು ಕರ್ನಾಟಕದ ಭವಿಷ್ಯವನ್ನು ಬದಲಾಯಿಸುವ ಚುನಾವಣೆ ಆಗಿದೆ. ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ಇಲ್ಲದೆ ಯಾವುದೇ ಕೆಲಸ ಆಗುವುದಿಲ್ಲ. ನನ್ನ ಅವಿರತ ಪ್ರಯತ್ನದಿಂದ ಅಸಾಧ್ಯವಾಗಿದ್ದ 371 ಜೆ ಸ್ಥಾನಮಾನವನ್ನು ಕಲ್ಯಾಣ ಕರ್ನಾಟಕಕ್ಕೆ ನೀಡಲಾಗಿದೆ. ಇಷ್ಟೆಲ್ಲಾ ಕೆಲಸ ಮಾಡಿದವರಿಗೆ ಓಟು ಕೊಡದೆ ಮೋದಿ ನೋಡಿ ಕೊಡುತ್ತೀರಿ ಎಂದರೆ ಏನು ಹೇಳಬೇಕು ಎಂದು ಜನರನ್ನು ಪ್ರಶ್ನಿಸಿದರು.

ಡಬಲ್ ಎಂಜಿನ್ ಸರ್ಕಾರದಿಂದ ಕರ್ನಾಟಕಕ್ಕೆ ಲಾಭ ಆಗಿಲ್ಲ. ಯಾವುದೇ ದೊಡ್ಡ ಕಾರ್ಖಾನೆ, ಉದ್ದಿಮೆ ಬರಲಿಲ್ಲ. ಉದ್ಯೋಗಗಳು ದೊರಕಲಿಲ್ಲ. 2.58 ಲಕ್ಷ ಖಾಲಿ ಹುದ್ದೆಗಳನ್ನು ಬಿಜೆಪಿ ಸರ್ಕಾರ ತುಂಬಿಲ್ಲ ಎಂದು ದೂರಿದರು.

ಕಾಂಗ್ರೆಸ್ ಗ್ಯಾರಂಟಿಗಳಿಗೆ ನಾನೇ ಜವಾಬ್ದಾರ

ಕಾಂಗ್ರೆಸ್ಸಿನ ಐದು ಗ್ಯಾರಂಟಿಗಳನ್ನು ಮೊದಲನೇ ಕ್ಯಾಬಿನೆಟ್‌ನಲ್ಲಿಯೇ ಜಾರಿಗೆ ತರಲಾಗುವುದು. ಅದಕ್ಕೆ ನಾನೇ ಜವಾಬ್ದಾರ. ಮೋದಿ, ಬೊಮ್ಮಾಯಿ ಸುಳ್ಳಿನ ಮಾತಿಗೆ ಮರುಳಾಗಬೇಡಿ. ಮೋದಿ ಅವರು ಗುಜರಾತಿನಲ್ಲಿ ತಮ್ಮ ಹೆಸರಿನ ಮೇಲೆ ಮತ ಕೇಳಿದಂತೆ ನನಗೆ ಕರ್ನಾಟಕದಲ್ಲಿ ಮತ ಕೇಳಲು ಹಕ್ಕಿದೆ. ನೀವು ಯಾಕೆ ರಾಜ್ಯಕ್ಕೆ ಕಾಲಿಡುತ್ತಿದ್ದೀರಿ ಎಂದು ಮೋದಿ ಅವರನ್ನು ಪ್ರಶ್ನಿಸಿದರು.

ಈಶ್ವರ ಖಂಡ್ರೆ ರಿಪೋರ್ಟ್ ಕಾರ್ಡ್ ಬಿಡುಗಡೆ

ಕಾರ್ಯಕ್ರಮದಲ್ಲಿ ಭಾಲ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಈಶ್ವರ ಖಂಡ್ರೆ ಅವರು ಮಾಡಿರುವ ಕೆಲಸಗಳ ರಿಪೋರ್ಟ್ ಕಾರ್ಡ್ ಮತ್ತು ಮುಂದಿನ ಯೋಜನೆಗಳ ಕುರಿತಾದ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ  ಶ್ರೀಹರಿಬಾಬು, ತೆಲಂಗಾಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೇವಂತರೆಡ್ಡಿ, ಹರಿಯಾಣದ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಉದಯಭಾನು, ಭೀಮಸೇನರಾವ್ ಶಿಂಧೆ, ಜಿಲ್ಲಾ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಎಂಎಲ್‌ಸಿ ಅರವಿಂದ ಅರಳಿ, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಸುರೇಶ ಶೆಟಕಾರ್, ಮೀನಾಕ್ಷಿ ಸಂಗ್ರಾಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದತ್ತಾತ್ರಿ ಮೂಲಗೆ, ಮಲ್ಲಿಕಾರ್ಜುನ ಪಾಟೀಲ ಮುಗನೂರ, ಪ್ರಕಾಶ ಮಾಶೆಟ್ಟೆ ಇದ್ದರು. ದೀಪಕ ಠಮಕೆ ನಿರೂಪಿಸಿ, ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | 20 ಪ್ರಕರಣಗಳ ಆರೋಪಿಗೆ ಗುಂಡಾ ಕಾಯ್ದೆ ಅಡಿ ಬಂಧನ

ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ಹಲ್ಲೆ ಸೇರಿದಂತೆ...

ವಿಜಯಪುರ |ಆಲಮಟ್ಟಿಯಿಂದ ನೀರು ಹರಿಸುವುದನ್ನು ನಿಲ್ಲಿಸಿ; ಇಲ್ಲದಿದ್ದರೆ ಜಲಾಶಯಕ್ಕೆ ಇಳಿದು ಪ್ರತಿಭಟನೆ:ಅರವಿಂದ ಕುಲಕರ್ಣಿ ಎಚ್ಚರಿಕೆ

ಆಲಮಟ್ಟಿ ಲಾಲಬಹದ್ದೂರ ಶಾಸ್ತ್ರಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಪ್ರತಿದಿನ...

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...