ಬಹುಮತದತ್ತ ಕಾಂಗ್ರೆಸ್‌, ಶಾಸಕರ ರಕ್ಷಣೆಗೆ ಮುಂದಾದ ʼಕೈʼ ಪಾಳಯ

Date:

ಬಿಜೆಪಿಯಿಂದ ʼಆಪರೇಷನ್‌ ಕಮಲʼ ನಡೆಯಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ ಗೆಲ್ಲುವ ಶಾಸಕರ ರಕ್ಷಣೆಗೆ ಮುಂದಾಗಿದೆ.

- Advertisement -

ಮತ ಎಣಿಕೆಯಲ್ಲಿ ಕಾಂಗ್ರೆಸ್‌ ಬಹುಮತದತ್ತ ದಾಪುಗಾಲಿಟ್ಟಿದ್ದು, ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ತನ್ನ ಗೆಲ್ಲುವ ಶಾಸಕರನ್ನು ಗುರುತಿಸಿ, ಅವರನ್ನು ರಕ್ಷಿಸಿಕೊಳ್ಳಲು ಕಾರ್ಯತಂತ್ರ ರೂಪಿಸಿದೆ. ಇದಕ್ಕಾಗಿ ಪ್ರತಿ ಜಿಲ್ಲೆಗೆ ಮೂವರು ಉಸ್ತುವಾರಿಗಳನ್ನು ನೇಮಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಆಯಾ ಜಿಲ್ಲೆಯಲ್ಲಿ ಕಾಂಗ್ರೆಸ್‌ ಹುರಿಯಾಳುಗಳು ಗೆಲ್ಲುತ್ತಿದ್ದಂತೆ ಅವರನ್ನು ಬೆಂಗಳೂರಿಗೆ ಕರೆತರುವ ಜವಾಬ್ದಾರಿಯನ್ನು ಈ ಉಸ್ತುವಾರಿಗಳಿಗೆ ವಹಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಕಾಂಗ್ರೆಸ್‌ಗೆ ಸಂಪೂರ್ಣ ಬಹುಮತ ಬಂದಲ್ಲಿ ಶನಿವಾರ ಇಲ್ಲವೇ ಭಾನುವಾರವೇ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ.

ಬಹುಮತಕ್ಕೆ ಕೆಲ ಸ್ಥಾನಗಳ ಕೊರತೆ ಕಂಡು ಬಂದರೆ ಸರ್ಕಾರ ರಚನೆಗೆ ಬೇಕಾದ ಯೋಜನೆಗಳನ್ನು ರೂಪಿಸಿದ್ದು, ಮತ ಎಣಿಕೆ ನೋಡುತ್ತ ಗೆಲ್ಲುವ ಪಕ್ಷೇತರ ಅಭ್ಯರ್ಥಿಗಳ ಸಂಪರ್ಕ ಸಾಧಿಸಲು ಪ್ರತ್ಯೇಕ ತಂಡ ರಚಿಸಲಾಗಿದೆ ಎನ್ನುವ ಮಾತುಗಳು ಕೇಳಿಬಂದಿದೆ.

ಈ ಎಲ್ಲ ವಿಚಾರಗಳ ಬಗ್ಗೆ ಈಗಾಗಲೇ ವೇಣುಗೋಪಾಲ್‌ ಮತ್ತು ಸುರ್ಜೇವಾಲಾ ಅವರು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಈ ಸಭೆಯಲ್ಲಿ ರಾಜಕೀಯ ತಂತ್ರಗಾರ ಸುನೀಲ್‌ ಕನುಗೋಲು ಕೂಡ ಭಾಗಿಯಾಗಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...