- ಐದು ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ
- ಬೊಮ್ಮಾಯಿ, ಡಿಕೆಶಿ, ಸಿದ್ದರಾಮಯ್ಯರ ಅಬಾಧಿತ ಓಟ
ರಾಜ್ಯ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ನಿರೀಕ್ಷೆಯಂತೆ ಕಾಂಗ್ರೆಸ್ ಪಕ್ಷ ಮುನ್ನಡೆ ಕಾಯ್ದುಕೊಂಡಿದೆ.
ಅಚ್ಚರಿ ಎನ್ನುವಂತೆ ಪ್ರಸಕ್ತ ಚುನಾವಣೆಯಲ್ಲಿ ಹಾಲಿ ಸಚಿವರುಗಳಿಗೆ ಮೊದಲ ಬಾರಿ ಭಾರೀ ಹಿನ್ನಡೆಯಾಗಿದೆ. ಐದು ಸುತ್ತುಗಳ ಮತ ಎಣಿಕೆ ಕಾರ್ಯ ಮುಕ್ತಾಯವಾಗುವ ಹೊತ್ತಿನಲ್ಲೂ ಬಹುಪಾಲು ಹಾಲಿಗಳು ಮತಗಳಿಕೆಯಲ್ಲಿ ಹಿಂದೆ ಬಿದ್ದಿದ್ದಾರೆ.
ಇದ್ದುದರಲ್ಲಿ ಸಿಎಂ ಬೊಮ್ಮಾಯಿ, ಒಬ್ಬರೇ ಎರಡು ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನುಳಿದಂತೆ 9:30 ವೇಳೆಗೆ ಬಂದ ಮಾಹಿತಿ ಅನ್ವಯ ಕಾಂಗ್ರೆಸ್ 85 ಕ್ಷೇತ್ರಗಳಲ್ಲಿ, ಬಿಜೆಪಿ 70 ಕ್ಷೇತ್ರಗಳಲ್ಲಿ, ಜೆಡಿಎಸ್ 22 ಕ್ಷೇತ್ರಗಳಲ್ಲಿ, ಇತರೇ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಹಾಲಿ ಸಚಿವರಾದ ಡಾ.ಕೆ.ಸುಧಾಕರ್, ಸಿ. ಸಿ ಪಾಟೀಲ್. ನಾರಾಯಣಗೌಡ, ಬಿ ಸಿ ನಾಗೇಶ್, ವಿ. ಸೋಮಣ್ಣ, ಶ್ರೀರಾಮುಲು ಬಿ. ಸಿ ಪಾಟೀಲ್, ಎಂಟಿಬಿ ನಾಗರಾಜ್, ಗೋವಿಂದ ಕಾರಜೋಳ ಹಿನ್ನಡೆ ಅನುಭವಿಸಿದ್ದಾರೆ.
ಹಾಗೆಯೇ ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ 3 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಚನ್ನಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಗೆ ಮುನ್ನಡೆ ಸಿಕ್ಕಿದ್ದರೆ, ಜೆಡಿಎಸ್ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹಿನ್ನೆಡೆ ಅನುಭವಿಸಿದ್ದಾರೆ.
ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ನಾಲ್ಕು ಸುತ್ತುಗಳಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇವರ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯನವರೂ ಮುನ್ನಡೆಯೊಂದಿಗೆ ಸಾಗುತ್ತಿದ್ದಾರೆ