ಲಿಂಗಾಯತರಿಗೆ ಕಾಂಗ್ರೆಸ್ ಮನ್ನಣೆ : ಬಸವ ಜಯಂತಿ ದಿನದಂದು ರಾಹುಲ್ ಗಾಂಧಿ ಕಾರ್ಯಕ್ರಮ

Date:

  • ಕೂಡಲಸಂಗಮದಲ್ಲಿ ರಾಹುಲ್ ಗಾಂಧಿ ಬಸವ ಜಯಂತಿ
  • ಲಿಂಗಾಯತ ಜಪ ಮಾಡುತ್ತಿದ್ದ ಬಿಜೆಪಿಗೆ ಕಾಂಗ್ರೆಸ್ ಕೌಂಟರ್

ಲಿಂಗಾಯತ ಸಮುದಾಯ ಕಡೆಗಣಿಸಿ ಸಂಕಷ್ಟಕ್ಕೆ ಸಿಲುಕಿರುವ ಬಿಜೆಪಿಗೆ ಮತ್ತೊಂದು ಹೊಡೆತ ನೀಡಲು ಕರ್ನಾಟಕ ಕಾಂಗ್ರೆಸ್ ಮುಂದಾಗಿದೆ.

ಕೈ ಪಕ್ಷ ಲಿಂಗಾಯತ ಸಮುದಾಯದೊಂದಿಗಿದೆ ಎನ್ನುವುದನ್ನು ಬಹಿರಂಗವಾಗಿ ತೋರಿಸಲು ಕಾಂಗ್ರೆಸ್ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಮುಖ ರಾಹುಲ್ ಗಾಂಧಿ ಅವರ ಮೂಲಕವೇ ಲಿಂಗಾಯತ ಸಮುದಾಯಕ್ಕೊಂದು ಸಂದೇಶ ಕೊಡಿಸಲು ರಾಜ್ಯ ಕಾಂಗ್ರೆಸ್ ಸಿದ್ದವಾಗಿದೆ.

ಇದಕ್ಕಾಗಿ ಏಪ್ರಿಲ್ 23ರ ಬಸವ ಜಯಂತಿ ಕಾರ್ಯಕ್ರಮದ ದಿನದಂದು ಬಸವಣ್ಣನವರ ಐಕ್ಯಸ್ಥಳ ಕೂಡಲ ಸಂಗಮದಲ್ಲಿ ರಾಹುಲ್ ಗಾಂಧಿಯವರಿಂದ ಕಾರ್ಯಕ್ರಮವನ್ನು ಪಕ್ಷ ಆಯೋಜಿಸಿದೆ. ಆದರೆ ರಾಹುಲ್ ಇದನ್ನು ಸ್ವಂತ ಕಾರ್ಯಕ್ರಮವನ್ನಾಗಿಸಲು ಬಯಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಏಪ್ರಿಲ್ 23ರಂದು ಕೂಡಲಸಂಗಮಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ, ಸಂಗಮೇಶ್ವರ ದೇವಸ್ಥಾನ, ಅಣ್ಣ ಬಸವಣ್ಣನ ಐಕ್ಯ ಮಂಟಪ ದರ್ಶನ ಪಡೆಯಲಿದ್ದಾರೆ. ಬಳಿಕ ಸಭಾಭವನದಲ್ಲಿ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಕೂಡಲ ಸಂಗಮ ಮತ್ತದರ ಸುತ್ತಲಿನ ಸ್ಥಳ ಪರಿಶೀಲನೆ ನಡೆಸಿ, ಕಾರ್ಯಕ್ರಮ ಆಯೋಜನೆ ಬಗೆಗೂ ಸಭೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? :ಈ ದಿನ ಸಂಪಾದಕೀಯ | ಮೋದಿಯವರ ಸೇಡಿನ ಕ್ರಮ ರಾಹುಲ್‌ಗೆ ವರವಾಗುವುದೇ?

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಶಾಸಕ ವಿಜಯಾನಂದ ಕಾಶಪ್ಪ, ಜಿಲ್ಲಾ ಅಧ್ಯಕ್ಷ ಎಸ್ ಜಿ ನಂಜಯ್ಯನ ಮಠ ಜೊತೆ ಕೆಪಿಸಿಸಿ ಹಾಗೂ ಎಐಸಿಸಿ ಪ್ರತಿನಿಧಿಗಳು ಸಭೆ ನಡೆಸಿದ್ದಾರೆ.

ಬಸವ ಸಂಘಟನೆಯ ಹೆಸರಿನಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ಅಂದಿನ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಜೊತೆ ಕಾಂಗ್ರೆಸ್‌ನ ಮತ್ಯಾವ ಗಣ್ಯರು ಭಾಗವಹಿಸುತ್ತಾರೆನ್ನುವುದರ ಬಗ್ಗೆ ಪಕ್ಷ ಇನ್ನೂ ಮಾಹಿತಿ ಒದಗಿಸಿಲ್ಲ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡಿಗರ ಎದುರು ಚರ್ಚೆಗೆ ಬನ್ನಿ; ನಿರ್ಮಲಾ ಸೀತಾರಾಮನ್‌ಗೆ ಸಿದ್ದರಾಮಯ್ಯ ಪಂಥಾಹ್ವಾನ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಹಿರಂಗ ಚರ್ಚೆಗೆ ಸಿಎಂ ಸಿದ್ದರಾಮಯ್ಯ...

ಯಡಿಯೂರಪ್ಪ – ಈಶ್ವರಪ್ಪ | ಬಿಜೆಪಿಯ ಜೋಡೆತ್ತುಗಳ ಜೂಟಾಟ

ಈಶ್ವರಪ್ಪನವರು ಈಗಲೂ ಯಡಿಯೂರಪ್ಪನವರ ಮಿತ್ರರಾಗಿರಬಹುದು. ಹಾಗೆಯೇ ಕಾಂಗ್ರೆಸ್ಸಿನ ಸಿದ್ದರಾಮಯ್ಯನವರ ಮಾತಿಗೂ ಮಣೆ...

‘ಬೆಂಗಳೂರು ಕೇಂದ್ರ’ ಮರಳಿ ಕಾಂಗ್ರೆಸ್ ವಶಕ್ಕೆ : ಸಚಿವ ಜಮೀರ್ ವಿಶ್ವಾಸ

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಯಾವಾಗಲೂ ಕಾಂಗ್ರೆಸ್ ಭದ್ರಕೋಟೆ. ಈಗ ಅದನ್ನು...

ಭಯದಿಂದ ಬಿಜೆಪಿ-ಜೆಡಿಎಸ್ ಮೈತ್ರಿ; ಜನತೆ ಇವರನ್ನು ಸೋಲಿಸಬೇಕು: ಸಿದ್ದರಾಮಯ್ಯ ಕರೆ

ಕರ್ನಾಟಕದಲ್ಲಿ ಸೋಲುವ ಭಯದಿಂದ ಬಿಜೆಪಿ-ಜೆಡಿಎಸ್ ಒಂದಾಗಿದೆ. ಇವರನ್ನು ಜನತೆ ಸೋಲಿಸಬೇಕು ಎಂದು...