ಶೆಟ್ಟರ್‌ಗೆ ಉನ್ನತ ಸ್ಥಾನ ಸಿಗಲಿದೆ: ಕಾಂಗ್ರೆಸ್‌ ಮುಖಂಡರ ಆಶಯ

Date:

ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದ ಕಾಂಗ್ರೆಸ್‌ ಸೇರಿ, ಚುನಾವಣೆಯಲ್ಲಿ ಸೋಲುಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಉನ್ನತ ಸ್ಥಾನ ನೀಡುತ್ತದೆ ಎಂಬುದು ಪಕ್ಷದ ಮುಖಂಡರ ಅಭಿಪ್ರಾಯ.

ಆರು ಬಾರಿ ಶಾಸಕರಾಗಿದ್ದ ಶೆಟ್ಟರ್, ಅಲ್ಪಾವಧಿಗೆ ಮುಖ್ಯಮಂತ್ರಿಯೂ ಆಗಿದ್ದರು. ಅಲ್ಲದೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದರು. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ನಿರಾಕರಿಸಿದ್ದರಿಂದ, ಕೇಸರಿ ಪಾಳಯ ತೊರೆದು ಕಾಂಗ್ರೆಸ್‌ ಸೇರಿದರು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ವಿರುದ್ಧ 34,289 ಮತಗಳ ಅಂತರದಿಂದ ಸೋಲುಂಡರು.

ಶೆಟ್ಟರ್ ಅವರು ತಮ್ಮ ಕ್ಷೇತ್ರದಲ್ಲಿ ಮತ್ತೆ ಗೆಲ್ಲಲು ಸಾಧ್ಯವಾಗಲಿಲ್ಲ. ಆದರೂ, ಉತ್ತರ ಕರ್ನಾಟಕದ ಲಿಂಗಾಯತ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಹಲವು ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲಲು ಅವರ ವರ್ಚಸ್ಸು ಕಾರಣವಾಯಿತು. ಅವರನ್ನು ಕಳೆದುಕೊಂಡ ಬಿಜೆಪಿ ಲಿಂಗಾಯತ ಕ್ಷೇತ್ರಗಳಲ್ಲಿ ಹೀನಾಯವಾಗಿ ಸೋಲುಂಡಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಲಿಂಗಾಯತ ಮತದಾರರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಗೆಲ್ಲಲು ನೆರವಾದ ಶೆಟ್ಟರ್‌ಗೆ ಸೂಕ್ತ ಪ್ರತಿಫಲ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಈಗಾಗಲೇ ಪಕ್ಷದ ರಾಜ್ಯ ನಾಯಕತ್ವಕ್ಕೆ ವರದಿ ಸಲ್ಲಿಸಿದ್ದಾರೆ. ಕೆಲವೇ ದಿನಗಳಲ್ಲಿ ರಚನೆಯಾಗಲಿರುವ ಕಾಂಗ್ರೆಸ್ ಸರ್ಕಾರದಲ್ಲಿ ಶೆಟ್ಟರ್‌ಗೆ ಸ್ಥಾನ ಕಲ್ಪಿಸಲು ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ?: ಏನೇ ಹೇಳ್ರಿ, ಜಗದೀಶ ಶೆಟ್ಟರ್ ಸೋಲಬಾರದಿತ್ತು!

ಈಗಾಗಲೇ ಕಾಂಗ್ರೆಸ್‌ ನಾಯಕರು ಶೆಟ್ಟರ್‌ ಅವರನ್ನು ಬೆಂಗಳೂರಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ. ಶೆಟ್ಟರ್ ಸದ್ಯ ಬೆಂಗಳೂರಿನಲ್ಲೇ ತಂಗಿದ್ದಾರೆ. ಅಲ್ಲದೆ, “ನಾನು ಬೇಷರತ್ತಾಗಿ ಕಾಂಗ್ರೆಸ್‌ ಸೇರಿದ್ದೇನೆ. ಪಕ್ಷದಲ್ಲಿ ಹುದ್ದೆ ಪಡೆಯುವ ಬಗ್ಗೆ ನಾನು ಏನನ್ನೂ ಹೇಳಲಾರೆ” ಎಂದು ಶೆಟ್ಟರ್ ಹೇಳಿದ್ದಾರೆ.

ಆದಾಗ್ಯೂ, ಶೆಟ್ಟರ್‌ಗೆ ಹೊಸ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗುವುದು ಅಥವಾ ಪಕ್ಷದ ಕಾರ್ಯಾಧ್ಯಕ್ಷ ಹುದ್ದೆಗೆ ಅವರನ್ನು ಪರಿಗಣಿಸಬಹುದು ಎಂದು ಹಿರಿಯ ಕಾಂಗ್ರೆಸ್ ನಾಯಕರು ಹೇಳಿರುವುದಾಗಿ ಟಿಎನ್‌ಐಇ ವರದಿ ಮಾಡಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಆದರೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಪಕ್ಷದಲ್ಲಿ ಕಗ್ಗಂಟಾಗಿ ಉಳಿದಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದ್ದು, ಇಬ್ಬರನ್ನೂ ಕಾಂಗ್ರೆಸ್‌ ಹೈಕಮಾಂಡ್‌ ದೆಹಲಿಗೆ ಕರೆಸಿಕೊಂಡಿದೆ. ಮಂಗಳವಾರ ಸಂಜೆಯೊಳಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಯಾರು ಎಂಬುದು ಘೋಷಣೆಯಾಗುವ ಸಾಧ್ಯತೆ ಇದೆ. ಪ್ರಮಾಣ ವಚನ ಸ್ವೀಕಾರದ ಬಳಿಕ, ಸಚಿವ ಸಂಪುಟ ರಚನೆಯಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ; ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನ

ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ...

2028ರೊಳಗೆ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯಲ್ಲಿ ರಾಮನ ಹೆಸರಿದೆ. ಭೂಮಿ ಇರುವವರೆಗೂ ರಾಮನಗರ ಹೆಸರನ್ನು ತೆಗೆಯಲು...

ಹುಣಸೂರು | ಸೋರುತ್ತಿದೆ ಆರ್‌ಟಿಓ ಕಚೇರಿ ಮಾಳಿಗೆ; ಅಧಿಕಾರಿಗಳಿಗೇ ಇಲ್ಲ ಮೂಲ ಸೌಕರ್ಯ!

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಓ ಕಚೇರಿ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು,...

‘ಬಜೆಟ್ ಪಕ್ಷಪಾತ, ರಾಜ್ಯಗಳನ್ನು ವಿಭಜಿಸುವ ಪಿತೂರಿ’; ನೀತಿ ಆಯೋಗ ಸಭೆಯಲ್ಲಿ ಪ್ರತಿಭಟನೆಗೆ ಮಮತಾ ಸಜ್ಜು

ಜುಲೈ 27 ರಂದು ದೆಹಲಿಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುವುದಾಗಿ...