ಮತ ಎಣಿಕೆ ಆರಂಭ: ಇಂದು 2,615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

Date:

ಇಡೀ ರಾಜ್ಯವೇ ಎದುರು ನೋಡುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ರಾಜ್ಯದ 224 ಕ್ಷೇತ್ರಗಳ ಮತ ಎಣಿಕೆ ಇಂದೇ ನಡೆಯಲಿದ್ದು, 2,615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. 224 ಮಂದಿ ವಿಧಾನಸಭೆ ಮೆಟ್ಟಿಲೇರಿದರೆ, ಉಳಿದವರು ಮತ್ತೆ ಐದು ವರ್ಷಗಳ ಕಾಲ ಚುನಾವಣೆಗಾಗಿ ಕಾಯಬೇಕಾಗುತ್ತದೆ.

ಶನಿವಾರ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಯಾವ ಪಕ್ಷ ಬಹುಮತ ಪಡೆದು ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯಲಿದೆ. ಸಮೀಕ್ಷೆಗಳು ನಿಜವಾಗಿ ಕಾಂಗ್ರೆಸ್‌ ಅಧಿಕಾರಕ್ಕೇರುತ್ತದೆಯೇ ಅಥವಾ ಅತಂತ್ರ ವಿಧಾನಸಭೆ ನಿರ್ಮಾಣವಾಗುವುದೇ ಎಂಬುದು ಸಂಜೆಯೊಳಗೆ ತಿಳಿಯಲಿದೆ.

ಮೇ 10ರಂದು ನಡೆದ ಮತದಾನದಲ್ಲಿ ರಾಜ್ಯದ ಒಟ್ಟು 5,30,85,566 ಮತದಾರರ ಪೈಕಿ 3,88,51,807 ಮಂದಿ ಮತದಾನ ಮಾಡಿದ್ದಾರೆ. ಕಣದಲ್ಲಿದ್ದ 2,615 ಅಭ್ಯರ್ಥಿಗಳ ತಮ್ಮ ಭವಿಷ್ಯ ಏನಾಗಲಿದೆ ಎಂದು ತವಕದಲ್ಲಿದ್ದಾರೆ. ಮತದಾರರೂ ಕೂಡ ತಮ್ಮ ಕ್ಷೇತ್ರವನ್ನು ಯಾರು ಪ್ರತಿನಿಧಿಸಬಹುದೆಂದು ತಿಳಿಯಲು ಕಾತುರಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜ್ಯದ 34 ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಎಲ್ಲ ಎಣಿಕಾ ಕೇಂದ್ರದಲ್ಲಿ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ. ಮೊದಲ ಸುತ್ತಿನಲ್ಲಿ ಪೋಸ್ಟಲ್ ಬ್ಯಾಲೆಟ್‌ ಮತಗಳ ಎಣಿಕೆ ನಡೆಯಲಿದೆ. ಮತ ಎಣಿಕೆ ಕೇಂದ್ರದ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಭದ್ರತೆಗಾಗಿ ಪೊಲೀಸ್ ಸಿಬ್ಬಂದಿ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ನಿಯೋಜಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನೂರರ ಗಡಿ ದಾಟಿದ ಟೊಮೆಟೊ ದರ; ದ್ವಿಶತಕದತ್ತ ಮುಖ ಮಾಡಿದ ಬೀನ್ಸ್‌

ಪೆಟ್ರೊಲ್, ಡಿಸೇಲ್, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ...

ಬೀದರ್‌ | ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ ನಿರ್ಧಾರ : ಅಂಗನವಾಡಿ ನೌಕರರ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳು ಆರಂಭಿಸುವ...

ತುಮಕೂರು | ಕಲುಷಿತ ನೀರಿಗೆ ಆರು ಮಂದಿ ಬಲಿ; 50 ಮಂದಿ ಅಸ್ವಸ್ಥ

ಕರ್ನಾಟಕದ ಗಡಿಭಾಗದಲ್ಲಿರೊ ಪುಟ್ಟ ಗ್ರಾಮ ತುಮಕೂರು ಜಿಲ್ಲೆಯ ಚಿನ್ನೇನಹಳ್ಳಿ. ಗ್ರಾಮದಲ್ಲಿ ಸುಮಾರು...

ವಿಜಯಪುರ | ಇಂಧನ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ವಿಜಯಪುರದಲ್ಲಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನೆ...