ಬಿಜೆಪಿ ಸೋಲಿಸುವ ಗುರಿಯೊಂದಿಗೆ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ ಸಿಪಿಐ

Date:

  • ಕೆಪಿಸಿಸಿ ಕಚೇರಿಯಲ್ಲಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ ಬೆಂಬಲ
  • 215 ಕ್ಷೇತ್ರಗಳಲ್ಲಿ ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್‌ಗೆ ಸಿಪಿಐ ಬೆಂಬಲ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕಿದೆ. ಹೀಗಾಗಿ ರಾಜ್ಯಾದ್ಯಂತ ಬಿಜೆಪಿಯನ್ನು ಎದುರಿಸುತ್ತಿರುವ ಜಾತ್ಯತೀತ, ಪ್ರಜಾಸತ್ತಾತ್ಮಕ ಪಕ್ಷ ಕಾಂಗ್ರೆಸ್‌ ಅನ್ನು ಬೆಂಬಲಿಸುವುದಾಗಿ ಸಿಪಿಐ ಹೇಳಿದೆ.

ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಎಐಸಿಸಿ ವಕ್ತಾರ ಗೌರವ್ ವಲ್ಲಭ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ನೇತೃತ್ವದಲ್ಲಿ ಸಿಪಿಐನ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್‌, ಎಐಟಿಯುಸಿ ರಾಜ್ಯಾಧ್ಯಕ್ಷ ಅನಂತ ಸುಬ್ಬರಾವ್, ಸಿಪಿಐ ರಾಜ್ಯ ಸಹಾಯಕ ಕಾರ್ಯದರ್ಶಿ ಬಿ ಅಮಜಕ್‌, ಸಿಪಿಐನ ಕಾರ್ಯಕಾರಿ ಸದಸ್ಯೆ ಎ ಜ್ಯೋತಿ ಹಾಗೂ ಮತ್ತಿತರರು ಸೇರಿ ಕಾಂಗ್ರೆಸ್‌ಗೆ ಭಾನುವಾರ ಬೆಂಬಲ ಸೂಚಿಸಿದರು.

ಈ ವೇಳೆ ರಣದೀಪ್ ಸಿಂಗ್ ಸುರ್ಜೆವಾಲ ಮಾತನಾಡಿ, “ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ ಸಾಮಾಜಿಕ ನ್ಯಾಯ, ಬಡವರು ಹಾಗೂ ಸೋಷಿತ ವರ್ಗದವರ ಹಕ್ಕಿನ ರಕ್ಷಣೆ, ಕಾರ್ಮಿಕರ ಹಕ್ಕು, ಮಧ್ಯಮ ವರ್ಗದವರ ಹಕ್ಕಿನ ರಕ್ಷಣೆಗೆ ಹೋರಾಟ ಮಾಡಿಕೊಂಡು ಬಂದಿರುವ ಇತಿಹಾಸವಿದೆ. ಕಾಂಗ್ರೆಸ್ ಮತ್ತು ಸಿಪಿಐ ನಡುವೆ ಸೈದ್ಧಾಂತಿಕವಾಗಿ ಅನೇಕ ವಿಚಾರಗಳಲ್ಲಿ ಭಿನ್ನಾಭಿಪ್ರಾಯವಿದ್ದರೂ ನಮ್ಮ ಗುರಿ ಒಂದೇ ಆಗಿದೆ. ಮೋದಿ ಸರ್ಕಾರದ ಬೆಲೆ ಏರಿಕೆ, ಬೊಮ್ಮಾಯಿ ಸರ್ಕಾರದ 40% ಕಮಿಷನ್ ಭ್ರಷ್ಟಾಚಾರದ ವಿರುದ್ಧ, ಆಡಳಿತದಲ್ಲಿ ಪಾರದರ್ಶಕತೆ ತರುವ ಸಲುವಾಗಿ ಹೋರಾಟ ಮಾಡುವುದು ಈ ಎರಡು ಪಕ್ಷಗಳ ಗುರಿಯಾಗಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ನಟಿ ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ‌ : ಸಚಿವ ಆರ್ ಅಶೋಕ

“ಕರ್ನಾಟಕದ ಯುವಕರು ₹80 ಲಕ್ಷ ಲಂಚ ನೀಡಿ ಪೊಲೀಸ್ ಸಬ್ ಇನ್‌ಸ್ಟೆಕ್ಟರ್‌ ಹುದ್ದೆ ಪಡೆಯುವ ಸ್ಥಿತಿ ನಿರ್ಮೂಲನೆಯಾಗಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಯನ್ನು ಮಾರಾಟ ಮಾಡುವ ವ್ಯವಸ್ಥೆ ತೊಲಗಬೇಕು. ರಾಜ್ಯದ ಜನರ ಹಿತ ಕಾಯುವುದು ಸರ್ಕಾರದ ಏಕಮಾತ್ರ ಗುರಿಯಾಗಿರಬೇಕೇ ಹೊರತು, ಬಿಜೆಪಿ ರೀತಿ ರಾಜ್ಯವನ್ನು ಲೂಟಿ ಮಾಡುವುದಲ್ಲ” ಎಂದು ಸುರ್ಜೇವಾಲಾ ವಾಗ್ದಾಳಿ ನಡೆಸಿದರು.

“ಸಿಪಿಐ ಪಕ್ಷ ಈ ಬಾರಿಯ ರಾಜ್ಯ ಚುನಾವಣೆಯಲ್ಲಿ 7 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಈ ಕ್ಷೇತ್ರಗಳಲ್ಲಿ ಸ್ಪರ್ಧಾತ್ಮಕ ಹೋರಾಟ ಇರಲಿದೆ. ಉಳಿದ 215 ಕ್ಷೇತ್ರಗಳಲ್ಲಿ ಸಿಪಿಐ ಪಕ್ಷದ ಕಾರ್ಯಕರ್ತರು ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್‌ ಅನ್ನು ಬೆಂಬಲಿಸಲಿದೆ. ಬಿಜೆಪಿಯ ವಿರುದ್ಧದ ಹೋರಾಟದಲ್ಲಿ ಇದು ಬಹಳ ದೊಡ್ಡ ತೀರ್ಮಾನವಾಗಿದ್ದು, ಈ ನಿರ್ಧಾರ ಕೈಗೊಂಡಿರುವ ಈ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಡಾ ದಾಖಲೆ ಬಹಿರಂಗ, ಮನೆ ಮುರುಕ ರಾಜಕಾರಣ ಬಿಡಿ ಎಂದು ಸಿಎಂ ಬಿಜೆಪಿಗೆ ತಿರುಗೇಟು

ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ...

ಬಿಜೆಪಿ ಪಾದಯಾತ್ರೆಯ ಪ್ರತಿ ದಿನ ಅವರ ಒಂದೊಂದು ಹಗರಣ ಬಯಲು: ಡಿ ಕೆ ಶಿವಕುಮಾರ್

ಬಿಜೆಪಿ ಪಾದಯಾತ್ರೆಯ ಪ್ರತಿ ದಿನವೂ ಅವರ ಒಂದೊಂದು ಹಗರಣ ಬಯಲು ಮಾಡುತ್ತೇವೆ...

ಏನಿದು ಮುಡಾ – ವಾಲ್ಮೀಕಿ ನಿಗಮ ಅಕ್ರಮ; ಈ ಹಿಂದೆ ಯಾವೆಲ್ಲಾ ಹಗರಣಗಳು ನಡೆದಿವೆ?

ಲೋಕಸಭಾ ಚುನಾವಣಾ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಮುಡಾ ಮತ್ತು...

ಮುಡಾ, ವಾಲ್ಮೀಕಿ ನಿಗಮ ಅಕ್ರಮ ಖಂಡಿಸಿ ದೆಹಲಿಯಲ್ಲಿ ಬಿಜೆಪಿ ಸಂಸದರ ಪ್ರತಿಭಟನೆ, ಸಿಎಂ ರಾಜೀನಾಮೆಗೆ ಆಗ್ರಹ

ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಮತ್ತು ಜೆಡಿಎಸ್ ಸಂಸದರು ದೆಹಲಿಯಲ್ಲಿ ಕರ್ನಾಟಕ ಸರ್ಕಾರದ...