ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಉದ್ಘಾಟನೆ: ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್

Date:

ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್; ವಿಶೇಷ ದರಗಳಲ್ಲಿ ಖರೀದಿಗೆ ಅವಕಾಶ

ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೋರೇಶನ್ ಬೆಂಗಳೂರಿನಲ್ಲಿ ತನ್ನ ನೂತನ ಕಚೇರಿಯನ್ನು ಆರಂಭಿಸುವ ಮೂಲಕ ಕರ್ನಾಟಕದ ರಾಜಧಾನಿಯಲ್ಲಿ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಿದೆ. ನಗರದ ಕನ್ನಿಂಗ್‌ಹ್ಯಾಮ್ ರಸ್ತೆಯ ಸ್ಯಾಂಕಿ ರಸ್ತೆ ಕ್ರಾಸ್‌ನಲ್ಲಿರುವ ದಿ ಕನ್ನಿಂಗ್‌ಹ್ಯಾಮ್ ಕಮರ್ಷಿಯಲ್‌ನ ಮೊದಲ ಮಹಡಿಯಲ್ಲಿ ಸ್ಥಾಪಿಸಲಾಗಿರುವ ನೂತನ ಕಚೇರಿಯನ್ನು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬೆಂಗಳೂರು ದೇಶದ ಪ್ರಮುಖ ಉದ್ಯಮ ಮತ್ತು ಹೂಡಿಕೆ ಕೇಂದ್ರವಾಗಿ ಬೆಳೆಯುತ್ತಿದ್ದು, ವಿವಿಧ ಕ್ಷೇತ್ರಗಳ ಉದ್ಯಮಿಗಳು ಮತ್ತು ಹೂಡಿಕೆದಾರರಿಗೆ ವಿಫುಲ ಅವಕಾಶಗಳನ್ನು ಒದಗಿಸುತ್ತಿದೆ. ಇಂತಹ ಸಂದರ್ಭದಲ್ಲಿ ರೋಹನ್ ಕಾರ್ಪೋರೇಶನ್ ಬೆಂಗಳೂರಿಗೆ ಪ್ರವೇಶಿಸಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದ್ದು, ಸಂಸ್ಥೆಯ ಮುಂದಿನ ಸಾಧನೆಗಳಿಗೆ ಶುಭ ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡವರ ನಿವೇಶನಗಳ ಮೇಲೆ ಕೆಎಐಡಿಬಿ ಕರಿ ನೆರಳು: ಸೂರು...

ಮಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಮೆರುಗನ್ನು ನೀಡಿರುವುದೇ ತಣ್ಣೀರುಬಾವಿ ಸಮುದ್ರ ತೀರ. ಈ ಸಮುದ್ರ ತೀರ ಇತ್ತೀಚಿನ ದಿನಗಳಲ್ಲಿ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ವಿಭಿನ್ನ ಶೈಲಿಯ ಮನರಂಜನೆಗೆ ಹೆಸರುವಾಸಿಯಾಗಿರುವ ತಣ್ಣೀರುಬಾವಿ ಬೀಚ್...

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ರೋಹನ್ ಕಾರ್ಪೋರೇಶನ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೊ ಮಾತನಾಡಿ, ಬೆಂಗಳೂರಿನಲ್ಲಿ ಕಚೇರಿ ಆರಂಭಿಸಿರುವುದು ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಇಲ್ಲಿನ ಗ್ರಾಹಕರಿಗೆ ಸಂಸ್ಥೆಯ ಯೋಜನೆಗಳನ್ನು ಪರಿಚಯಿಸುವುದರೊಂದಿಗೆ ವಿಶ್ವಾಸಪೂರ್ಣ ಸಂಬಂಧಗಳನ್ನು ಬೆಳೆಸುವುದು ಮತ್ತು ಹೊಸ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಉದ್ದೇಶವಾಗಿದೆ ಎಂದರು.

ಸಂಸ್ಥೆಯ ನಿರ್ದೇಶಕ ಡಿಯಾನ್ ಮೊಂತೆರೊ ಮಾತನಾಡಿ, ಬೆಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಮನೆ ಖರೀದಿದಾರರ ನಿರೀಕ್ಷೆಗಳು ಮತ್ತು ಜೀವನಶೈಲಿಯ ಅಗತ್ಯಗಳು ನಿರಂತರವಾಗಿ ಬದಲಾಗುತ್ತಿವೆ. ಈ ಬದಲಾವಣೆಗಳನ್ನು ಅರಿತು ಗ್ರಾಹಕರ ಅಗತ್ಯಗಳಿಗೆ ಅನುಗುಣವಾಗಿ ಗುಣಮಟ್ಟದ ವಸತಿ ಯೋಜನೆಗಳನ್ನು ಪರಿಚಯಿಸುವುದು ಸಂಸ್ಥೆಯ ಗುರಿಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬೆಂಗಳೂರು ಮಹಾಧರ್ಮಪ್ರಾಂತ್ಯದ ಸಹಾಯಕ ಬಿಷಪ್ ಡಾ. ಜೋಸೆಫ್ ಸುಸೈನಾಥನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಖ್ಯಾತ ನಿರೂಪಕಿ ರೀನಾ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್

ನೂತನ ಕಚೇರಿಯ ಉದ್ಘಾಟನೆಯ ಅಂಗವಾಗಿ ರೋಹನ್ ಕಾರ್ಪೋರೇಶನ್ ನವೆಂಬರ್ 6, 7 ಮತ್ತು 8ರಂದು ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್ ಆಯೋಜಿಸಿದೆ. ಪ್ರದರ್ಶನದಲ್ಲಿ ಸಂಸ್ಥೆಯ ವಿವಿಧ ವಸತಿ ಹಾಗೂ ರಿಯಲ್ ಎಸ್ಟೇಟ್ ಯೋಜನೆಗಳ ಮಾಹಿತಿ ಪಡೆಯಲು, ಸಂಸ್ಥೆಯ ಪ್ರತಿನಿಧಿಗಳೊಂದಿಗೆ ನೇರವಾಗಿ ಸಮಾಲೋಚಿಸಲು ಗ್ರಾಹಕರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಆಯ್ದ ಯೋಜನೆಗಳನ್ನು ವಿಶೇಷ ಹಾಗೂ ಆಕರ್ಷಕ ದರಗಳಲ್ಲಿ ಖರೀದಿಸುವ ಅವಕಾಶವೂ ಇರಲಿದೆ.

1994ರಿಂದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ರೋಹನ್ ಕಾರ್ಪೋರೇಶನ್, ತನ್ನ ಮೂರು ದಶಕಗಳಿಗೂ ಮೀರಿದ ಅನುಭವ ಮತ್ತು ಗ್ರಾಹಕರ ವಿಶ್ವಾಸದೊಂದಿಗೆ ಇದೀಗ ಬೆಂಗಳೂರಿನ ಮಾರುಕಟ್ಟೆಯಲ್ಲೂ ತನ್ನ ಛಾಪು ಮೂಡಿಸಲು ಮುಂದಾಗಿದೆ.

eedina 6
ಈದಿನ NRI ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ನೀಡವಂತೆ ರಾಜ್ಯಾಧ್ಯಕ್ಷ ಡಾ.ಹನುಮಂತಗೌಡ ಆರ್. ಕಲ್ಮನಿ ಮನವಿ

"ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರು ಯುಜಿಸಿ ನಿಯಮಗಳಿಗೆ ಅನ್ವಯವಾಗದ...

ಜಾರ್ಜಿಯಾದಲ್ಲಿ ಜ್ಯೋತ್ ಸಿಂಗ್‌ಗೆ ಐತಿಹಾಸಿಕ ಜಯ: ಪ್ರತಿನಿಧಿ ಸಭೆಗೆ ಆಯ್ಕೆಯಾದ ಮೊದಲ ಸಿಖ್

ಅಮೆರಿಕದ ಜಾರ್ಜಿಯಾ ರಾಜ್ಯದ ಪ್ರತಿನಿಧಿ ಸಭೆಗೆ ಭಾರತೀಯ ಮೂಲದ ಜ್ಯೋತ್ ಸಿಂಗ್...

ಹಾವೇರಿ | ನವೆಂಬರ್ 11ರಂದು ಜಿಲ್ಲೆಯಲ್ಲಿ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ

"ಜಿಲ್ಲಾಡಳಿತದ ವತಿಯಿಂದ ನವೆಂಬರ್ 11 ರಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸಾಂಕೇತಿಕವಾಗಿ...

ಸಹ-ಆರೋಪಿಗಳು ಖುಲಾಸೆಯಾದಾಗ ಪ್ರತ್ಯೇಕ ಆರೋಪವಿಲ್ಲದೆ ಕೊಲೆ ಪ್ರಕರಣದಲ್ಲಿ ಶಿಕ್ಷೆ ನೀಡಲಾಗದು: ಸುಪ್ರೀಂ ಕೋರ್ಟ್

ಇತರೆ ಸಹ-ಆರೋಪಿಗಳನ್ನು ದೋಷಮುಕ್ತಗೊಳಿಸಿದ ಸಂದರ್ಭದಲ್ಲಿ, ಯಾವುದೇ ಪ್ರತ್ಯೇಕ ಅಥವಾ ಸ್ವತಂತ್ರ ಆರೋಪವಿಲ್ಲದೆ...