ಕಾಲೇಜು ವಿದ್ಯಾರ್ಥಿಗಳಿಗೆ ರಂಗಭೂಮಿಯ ಪರಿಚಯ ಮಾಡಿಸುವುದು ಹಾಗೂ ನಾಟಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮತ್ತು ಆತ್ಮವಿಶ್ವಾಸ ಬೆಳೆಸಲು ಸಾಧ್ಯವಾಗುತ್ತದೆ ಎಂದು ಹಿರಿಯ ರಂಗಭೂಮಿ ಹಾಗೂ ಸಿನಿಮಾ ನಟ ಲಕ್ಷ್ಮಣ ಕುಮಾರ್ ಮಲ್ಲೂರು ಹೇಳಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಂಗಳೂರಿನ ಅಶೋಕನಗರದ ಎಸ್.ಸಿ.ಎಸ್ ಪ್ರಥಮ ದರ್ಜೆ ಕಾಲೇಜುನಲ್ಲಿ ಆಯೋಜಿಸಿದ್ದ ಹತ್ತು ದಿನಗಳ ತುಳು ನಾಟಕ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತುಳು ಅಕಾಡೆಮಿಯ ಸದಸ್ಯ ಹಾಗೂ ರಂಗ ನಿರ್ದೇಶಕ ಉದ್ಯಾವರ ನಾಗೇಶ್ ಕುಮಾರ್ ಮಾತನಾಡಿ, ರಂಗಭೂಮಿಯ ಚಟುವಟಿಕೆಗಳು ವಿದ್ಯಾರ್ಥಿಗಳ ಕಲಿಕೆ ಮತ್ತು ವ್ಯಕ್ತಿತ್ವ ವಿಕಾಸಕ್ಕೆ ಸ್ಫೂರ್ತಿಯಾಗಲಿವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿ, ತುಳು ಭಾಷೆಯ ಬೆಳವಣಿಗೆಯಲ್ಲಿ ತುಳು ನಾಟಕಗಳ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಹಾರ್ದಿಕ್ ಚೌಹಾಣ್ ಮಾತನಾಡಿ, ಸ್ಥಳೀಯ ಭಾಷೆ ಮತ್ತು ಕಲಾ ಪ್ರಕಾರಗಳಿಗೆ ಕಾಲೇಜು ನಿರಂತರ ಬೆಂಬಲ ನೀಡಲಿದೆ ಎಂದು ತಿಳಿಸಿದರು.
ನಾಟಕ ಕಾರ್ಯಗಾರದ ನಿರ್ದೇಶಕ ಯೋಗೀಶ್ ಶೆಟ್ಟಿ, ರಂಗ ನಿರ್ದೇಶಕ ಜಗನ್ ಪವಾರ್ ಬೇಕಲ್ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥೆ ಸುಪ್ರೀತಾ ಶೆಟ್ಟಿ ಸ್ವಾಗತಿಸಿದರು. ತುಳು ಸಂಘದ ಸಂಯೋಜಕಿ ದೀಕ್ಷಿತಾ ವಂದಿಸಿದರು. ವಿದ್ಯಾರ್ಥಿ ರಿತೇಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.




