ದಕ್ಷಿಣ ಕನ್ನಡ ಜಿಲ್ಲಾ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆ ನಡೆಯುತ್ತಿದ್ದು, ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾದ ಬಳಿಕ ತೆರವಾದ ಸ್ಥಾನಕ್ಕೆ ಉಪಚುನಾವಣೆ ಬಿರುಸಿನಿಂದ ನಡೆಯುತ್ತಿದೆ.
ಉಡುಪಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ ಚಲಾಯಿಸಿದರು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕಾಪು ಪುರಸಭೆಗೆ ತೆರಳಿ ತಮ್ಮ ಮತ ಚಲಾಯಿಸಿದ್ದಾರೆ. ನಗರಸಭೆಯಲ್ಲಿ ಶಾಸಕಯ ಯಶ್ಫಾಲ್ ಸುವರ್ಣ ಹಾಗೂ ಕಾರ್ಕಳ ಪುರಸಭೆಯಲ್ಲಿ ಶಾಸಕ ಸುನೀಲ್ ಕುಮಾರ್ ಮತ ಚಲಾಯಿಸಿದ್ದಾರೆ.
ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ಶಾಸಕರಾದ ಮಂಜುನಾಥ ಭಂಡಾರಿ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮತ ಚಲಾಯಿಸಿದರು. ಉಡುಪಿ ನಗರ ಸಭಾ ಸದಸ್ಯ ರಮೇಶ ಕಾಂಚನ್ ಮತ ಚಲಾಯಿಸಿದರು.

ಉಡುಪಿ ಜಿಲ್ಲೆಯಲ್ಲಿ 328 ಪೊಲೀಸ್ ಅಧಿಕಾರಿಗಳು ಹಾಗೂ ಮತಕಟ್ಟೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 2480 ಮತದಾರರು ಇದ್ದಾರೆ.
