ದಾವಣಗೆರೆ | ಅನುಮತಿ ಪಡೆಯದೆ ಬಿಜೆಪಿ ಜಾಹೀರಾತು; ಅಭ್ಯರ್ಥಿ ಹಾಗೂ ಪತ್ರಿಕೆಗೆ ನೋಟಿಸ್

Date:

ಚುನಾವಣಾ ಆಯೋಗದ ಅನುಮತಿ ಪಡೆಯದೆ ಬಿಜೆಪಿ ಪಕ್ಷದ, ಅಭ್ಯರ್ಥಿಯ ಜಾಹೀರಾತು ಪ್ರಕಟಿಸಿದ್ದಕ್ಕೆ ಸ್ಥಳೀಯ ಪತ್ರಿಕೆಯೊಂದಕ್ಕೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಚುನಾವಣಾ ಆಯೋಗ ನೋಟಿಸ್ ನೀಡಿ ಸ್ಪಷ್ಟನೆ ಕೋರಿದೆ.

- Advertisement -

ಏಪ್ರಿಲ್ ಒಂಬತ್ತರಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ನಡೆಯುತ್ತಿದ್ದು, ಚುನಾವಣೆಯ ಪ್ರಚಾರ, ಅಕ್ರಮ ಮತ್ತು ಇತರ ಕಾರ್ಯಕ್ರಮಗಳ ಮೇಲೆ ಚುನಾವಣೆ ಆಯೋಗ ಕಣ್ಣಿಟ್ಟಿದೆ. ಈ ಮಧ್ಯೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಚುನಾವಣಾ ಆಯೋಗ, ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಉಸ್ತುವಾರಿ ಸಮಿತಿಯ ಅನುಮೋದನೆ ಪಡೆಯದೇ ರಾಜಕೀಯ ಪಕ್ಷ ಬಿಜೆಪಿಯ ಜಾಹೀರಾತನ್ನು ಪ್ರಕಟಿಸಿದ ಸ್ಥಳೀಯ ಪತ್ರಿಕೆಗೆ ನೋಟಿಸ್ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮತಗಟ್ಟೆ ಬಳಿ ಕಾಂಗ್ರೆಸ್ ಎಸ್ ಡಿಪಿಐ ಕಾರ್ಯಕರ್ತರ ನಡುವೆ ಗಲಾಟೆ

ಉಪಚುನಾವಣೆಯ ಮತದಾನದ ಏಪ್ರಿಲ್ ಒಂಬತ್ತರಂದೇ ಸ್ಥಳೀಯ ಪತ್ರಿಕೆಯು ಜಾಹಿರಾತು ಪ್ರಕಟಗೊಳಿಸಿದ್ದು, ಇದಕ್ಕೆ ಚುನಾವಣಾ ಆಯೋಗದ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಉಸ್ತುವಾರಿ ಸಮಿತಿಯ ಅನುಮೋದನೆ ಪಡೆದಿಲ್ಲ ಎಂದು ನೋಟಿಸ್ ನೀಡಲಾಗಿದೆ. ಪಕ್ಷದ ಅಭ್ಯರ್ಥಿಗೂ ಸಹ ನೋಟಿಸ್ ನೀಡಲಾಗಿದ್ದು ಕೂಡಲೇ ಸ್ಪಷ್ಟನೆ ನೀಡುವಂತೆ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...