ದಾವಣಗೆರೆ | ಜಮೀರ್ ಚುನಾವಣಾ ಪ್ರಚಾರ, ಸುದ್ದಿಗೋಷ್ಠಿ ನಡೆಸಿ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ

Date:

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡದೇ ಕಾಂಗ್ರೆಸ್ ಮುಸ್ಲಿಂ ಸಮುದಾಯವನ್ನು ನಿರ್ಲಕ್ಷಿಸಿದೆ ಎಂದು ಅಸಮಾಧಾನಗೊಂಡು, ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ವಿಶೇಷವಾಗಿ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಪ್ರಚಾರಕ್ಕೆ ಬಾರದೆ ದೂರ ಉಳಿದಿದ್ದಾರೆ ಎನ್ನಲಾಗಿದ್ಧ ಸಚಿವ ಜಮೀರ್ ಅಹ್ಮದ್ ಅಂತಿಮವಾಗಿ ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರಚಾರಕ್ಕೆ ಆಗಮಿಸಿ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ನಮ್ಮ ಹಾಗೂ ಮಲ್ಲಿಕಾರ್ಜುನ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ” ಎಂದು ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನಮಾಡಿದರು.

- Advertisement -
1004048893

ದಾವಣಗೆರೆಯ ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು “ನನ್ನ ಮತ್ತು ಸಚಿವ ಮಲ್ಲಿಕಾರ್ಜುನ್ ನಡುವೆ ಯಾವುದೇ ಮನಸ್ತಾಪ, ಮುನಿಸಾಗಲೀ ಇಲ್ಲ. ಇದೆಲ್ಲವೂ ಮಾಧ್ಯಮದ ಸೃಷ್ಟಿ ಮಾತ್ರ” ಎಂದು ಸಚಿವ ಬಿ.ಝಡ್ ಜಮೀರ್ ಅಹಮದ್ ಸ್ಪಷ್ಟನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...
1004048899

ಸುದ್ದಿಗೋಷ್ಠಿ ನಡೆಸಿ ಮಾತನಾಡಿ, “ಮಲ್ಲಿಕಾರ್ಜುನ್ ನಾವು ಆತ್ಮೀಯ ಸ್ನೇಹಿತರು. ನಾವು ಏಕವಚನದಲ್ಲಿ ಮಾತನಾಡಿಸಿಕೊಳ್ಳುತ್ತೇವೆ. ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಏ. 5 ರಂದು ದಾವಣಗೆರೆಗೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಪರ ಪ್ರಚಾರಕ್ಕೆ ಬಂದ್ದಿದ್ದೇನೆ. ದಾವಣಗೆರೆ ದಕ್ಷಿಣ ಕಾಂಗ್ರೆಸ್‍ನ ಭದ್ರಕೋಟೆಯಾಗಿದ್ದು, ಯಾರು ಬಂದರೂ, ಬರದಿದ್ದರೂ ಕಾಂಗ್ರೆಸ್ ಗೆಲ್ಲಲಿದೆ. ಸಮುದಾಯ ಮತ್ತು ಪಕ್ಷದಲ್ಲಿ ಕೆಲವರು ಅಸಮಾಧಾನಗೊಂಡಿದ್ದು ಅವರನ್ನು ಮಾತನಾಡಿಸಿ ಸಮಾಧಾನ ಪಡಿಸಿ ಕೆಲಸ ಮಾಡುವಂತೆ ತಿಳಿಸುತ್ತೇನೆ” ಎಂದು ಹೇಳಿದರು.

1004048892

“ಪಕ್ಷದ ಸಂಪ್ರದಾಯದಂತೆ ಅನುಕಂಪದ ಹಿನ್ನಲೆಯಲ್ಲಿ ಹೈಕಮಾಂಡ್ ನಿರ್ದೇಶನದಂತೆ ಕುಟುಂಬದ ಸದಸ್ಯರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಖಾಸಗಿ ಸಮಾರಂಭಕ್ಕೆಂದು ದಾವಣಗೆರೆಗೆ ಬಂದಾಗ ಆಹಿಂದ ಸಮಾಜದವರು ಮುಖ್ಯವಾಗಿ ಮುಸ್ಲಿಂ ಸಮಾಜದ ಮುಖಂಡರು ನನ್ನನ್ನು ದಾವಣಗೆರೆ ದಕ್ಷಿಣದ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಕೊಡಿಸುವಂತೆ ಕೇಳಿದ್ದರು. ಈ ಹಿನ್ನಲೆಯಲ್ಲಿ ನಾವು ಹೈಕಮಾಂಡಿಗೆ ಟಿಕೆಟ್‍ಗಾಗಿ ಬೇಡಿಕೆ ಇಟ್ಟಿದ್ದವು. ಅದರೆ, ಟಿಕೆಟ್ ಕೊಡುವುದು ಹೈಕಮಾಂಡ್ ನಿರ್ಧಾರ. 224 ಕ್ಷೇತ್ರಗಳು ಮಲ್ಲಿಕಾರ್ಜುನ್ ಖರ್ಗೆ, ಪ್ರಿಯಾಂಕ್ ಗಾಂಧಿ, ರಾಹುಲ್ ಗಾಂಧಿ ಅವರ ಕ್ಷೇತ್ರಗಳಾಗಿದ್ದು, ಅವರು ಯಾರಿಗೆ ಬೇಕಾದರೂ ಟಿಕೆಟ್ ಕೊಡಬಹುದು” ಎಂದರು.

“ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ನಾಲ್ಕು ಅಭ್ಯರ್ಥಿಗಳು ಕಣದಲ್ಲಿದ್ದು 3 ಸಾವಿರ ಮತ ಪಡೆದಿದ್ದರು. ಈ ಬಾರಿ 11 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದು ಅವರನ್ನು ಮನವೊಲಿಸುವ ಕೆಲಸ ಮಾಡುತ್ತೇವೆ. ವಿಧಾನಪರಿಷತ್ ಸದಸ್ಯ ಜಬ್ಬಾರ್ ಸಾಬ್ ಸೇರಿದಂತೆ ಅಸಮಾಧಾನಿತ ಎಲ್ಲಾ ಕಾಂಗ್ರೆಸ್ ಸದಸ್ಯರು ಒಂದೇ ಕುಟುಂಬವಿದ್ದಂತೆ. ಕುಟುಂಬದಲ್ಲಿ ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳು ಸಹಜ. ಅಸಮಾಧಾನಿತರೊಂದಿಗೆ ಮಾತನಾಡಿ ಪ್ರಚಾರಕ್ಕೆ ಕರೆಯುತ್ತೇನೆ” ಎಂದು ತಿಳಿಸಿದರು.

1004048915

ಸಚಿವ ಮಲ್ಲಿಕಾರ್ಜುನ್ ಮಾತನಾಡಿ, “ಜಮೀರ್ ನಾನು ಆತ್ಮೀಯ ಸ್ನೇಹಿತರು. ನಾವು ಆತ್ಮೀಯವಾಗಿ ಬಾರೋ ..ಹೋಗೋ ಎಂದು ಏಕವಚನದಲ್ಲಿಯೇ ಮಾತನಾಡಿಕೊಳ್ಳುತ್ತೇವೆ. ಮಾತನಾಡುವ ಬರದಲ್ಲಿ ನಾನು ಅಂದು ಆ ರೀತಿ ಮಾತನಾಡಿರುವುದು. ಅದನ್ನು ಬೆಳಸಿಕೊಂಡು ಹೋಗುವ ಅಗತ್ಯವಿಲ್ಲ. ನಮ್ಮ ಮಧ್ಯೆ ಯಾವುದೇ ವೈಯಕ್ತಿಕ ದ್ವೇಷವಿಲ್ಲ” ಎಂದು ಸ್ಪಷ್ಟಪಡಿಸಿದರು.

ರಾಜ್ಯ ಚುನಾವಣಾ ಉಸ್ತುವಾರಿ ಅಭಿಷೇಕ ದತ್ತ, ಸಚಿವ ಎಂ.ಸಿ. ಸುಧಾಕರ, ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಇತರರು ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಉಪಚುನಾವಣೆ ಪ್ರಚಾರದ ವೇಳೆ ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧ ಎಂದ ಸಿಎಂ ಸಿದ್ದರಾಮಯ್ಯ

ಕೇರಳದಿಂದ ನೇರವಾಗಿ ಹುಬ್ಬಳ್ಳಿ ಮೂಲಕ ದಾವಣಗೆರೆಗೆ ಆಗಮಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಹರಿಹರದಿಂದ ದಾವಣಗೆರೆಯವರಿಗೆ ಸಾವಿರಾರು ಅಭಿಮಾನಿಗಳು ಪೋಸ್ಟರ್ ಹಿಡಿದು ಘೋಷಣೆಗಳನ್ನು ಕೂಗುವ ಮೂಲಕ ಹಾಗೂ ಹೂಮಳೆ ಸುರಿಸುವ ಮೂಲಕ ಅಭಿಮಾನದಿಂದ ಸ್ವಾಗತ ಕೋರಿ, ಶಾಮನೂರು ನಗರದ ಬೈಪಾಸ್ ನಿಂದ ಎಸ್ಎಸ್ ನಿವಾಸದವರೆಗೆ ರೋಡ್ ಶೋ ಮೂಲಕ ಆಗಮಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...