ದಾವಣಗೆರೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಏಳನೇ ಸುತ್ತಿನಲ್ಲಿ ಪ್ರಥಮ ಬಾರಿಗೆ ಹಿನ್ನಡೆಯನ್ನು ದಾಟಿ 4617 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ತಮ್ಮ ಪ್ರತಿಸ್ಪರ್ಧಿಗಿಂತ ಮುನ್ನಡೆ ಸಾಧಿಸಿ ಕಾಂಗ್ರೆಸ್ ಪಾಳಯದಲ್ಲಿ ಉತ್ಸಾಹ ಹೆಚ್ಚಿಸಿದ್ದಾರೆ. ಮುಂದಿನ ಸುತ್ತಿನ ಎಣಿಕೆ ಪ್ರಕ್ರಿಯೆ ಮುಂದುವರಿಯುತ್ತಿದೆ.
ಮೊದಲ ಸುತ್ತಿನಿಂದಲೇ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪಗೆ ಏಳನೇ ಸುತ್ತಿನಲ್ಲಿ ಹಿನ್ನಡೆಯಾಗಿದೆ.
ಏಳನೇ ಸುತ್ತಿನವರೆಗೂ 55608 ಮತಗಳು ಎಣಿಕೆಯಾಗಿದ್ದು, ಬಿಜೆಪಿ 25878 , ಕಾಂಗ್ರೆಸ್ 21953 , ಎಸ್ ಡಿಪಿಐ 5384 ಮತಗಳನ್ನು ಪಡೆದುಕೊಂಡಿವೆ.





