ದಾವಣಗೆರೆ | ದಕ್ಷಿಣ ಉಪಚುನಾವಣೆ ಅಸಮಾಧಾನ; ಕಾಂಗ್ರೆಸ್ ಮುಸ್ಲಿಂ ಮುಖಂಡರ ರಾಜೀನಾಮೆ ಸೂಚನೆ?

Date:

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರದಿಂದ ಪ್ರಚಾರ ಹಾಗೂ ಮತದಾನದವರೆಗೆ ಉಂಟಾಗಿದ್ದ ಗೊಂದಲ, ಆರೋಪ ಪ್ರತ್ಯಾರೋಪಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಶಿಸ್ತು ಕ್ರಮ ಕೈಗೊಂಡಿದ್ದಾಗಿ ವರದಿಯಾಗಿದ್ದು, ಹಲವು ಅಸಮಾಧಾನಿತ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ ರಾಜೀನಾಮೆಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

- Advertisement -

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಪಟ್ಟುಹಿಡಿದು ಹೋರಾಟ ನಡೆಸಿದ್ದ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಸಾಬ್, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಅವರ ರಾಜೀನಾಮೆಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಈ ಕುರಿತು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಸಾಬ್ “ನಾನು ಎಪ್ರಿಲ್ 3 ರಂದು ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ನಲ್ಲಿ ಸತ್ಯ ನ್ಯಾಯ ಇದೆ. ಅದನ್ನು ಉಳಿಸಿಕೊಂಡು ಹೋಗಬೇಕು. ನಾವು ಸಮುದಾಯದ ಪರವಾಗಿ ಟಿಕೆಟ್ ಕೊಡಬೇಕು ಎಂದು ಕೇಳಿದ್ದೇ ತಪ್ಪಾಯ್ತು. ನನಗೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿನ ವಿಶ್ವಾಸವಿದೆ. ಕೆಲವು ಮುಸ್ಲಿಂ ಹಾಗೂ ಇತರ ಮುಖಂಡರು ತಮ್ಮ ಹಿತಾಸಕ್ತಿಗೆ ಇತರರನ್ನು ನಿಂದಿಸುತ್ತಿದ್ದಾರೆ. ನಾವು ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರೆ ಸಾಕ್ಷಿ ಸಮೇತ ತೋರಿಸಲಿ” ಎಂದು ಪ್ರತಿಕ್ರಿಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮತಗಟ್ಟೆ ಬಳಿ ಕಾಂಗ್ರೆಸ್ ಎಸ್ ಡಿಪಿಐ ಕಾರ್ಯಕರ್ತರ ನಡುವೆ ಗಲಾಟೆ

ಬಹು ಜಿದ್ದಾಜಿದ್ದಿಗೆ ಕಾರಣವಾಗಿದ್ದ ಕ್ಷೇತ್ರ ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಈ ಬಾರಿ ಮುಸ್ಲಿಂ ಸಮುದಾಯಕ್ಕೆ ಕೊಡಬೇಕು ಎಂದು ದೊಡ್ಡ ಕೂಗು ಕೇಳಿ ಬಂದಿತ್ತು. ಸಂಪ್ರದಾಯದ ಹೆಸರಿನಲ್ಲಿ ಕಾಂಗ್ರೆಸ್ ಶಾಮನೂರು ಶಿವಶಂಕರಪ್ಪ ಕುಟುಂಬದ ಸಮರ್ಥ ಶಾಮನೂರುಗೆ ಟಿಕೆಟ್ ನೀಡಿತ್ತು. ಇದರಿಂದಾಗಿ ಅಸಮಾಧಾನಗೊಂಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್, ನಜೀರ್ ಅಹ್ಮದ್, ಅಬ್ದುಲ್ ಜಬ್ಬಾರ್ ಸಾಬ್ ಚುನಾವಣೆಯಿಂದ ದೂರ ಉಳಿದಿದ್ದರು. ಕೊನೆ ಗಳಿಗೆಯಲ್ಲಿ ಜಮೀರ್ ಅಹ್ಮದ್ ದಾವಣಗೆರೆಗೆ ಆಗಮಿಸಿ ಅಭ್ಯರ್ಥಿ ಪರ ಪತ್ರಿಕಾಗೋಷ್ಠಿ ನಡೆಸಿ ಪ್ರಚಾರ ಮಾಡದೇ ಹೊರಟು ಹೋಗಿದ್ದರು.‌ ಮುಸ್ಲಿಮರ ಅಸಮಾಧಾನದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರ ಮತಗಳು ಸ್ವತಂತ್ರ ಅಭ್ಯರ್ಥಿಗಳ ಸ್ವರ್ಧೆ ಹಿನ್ನೆಲೆಯಲ್ಲಿ ಒಡೆದು ಹೋಗಿವೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಇದರಿಂದಾಗಿ ಕಾಂಗ್ರೆಸ್ ಚುನಾವಣೆಯಲ್ಲಿ ಗೆಲ್ಲಲು ಘಟಾನುಘಟಿ ನಾಯಕರ ಪ್ರಚಾರಕ್ಕೆ ಮೊರೆ ಹೋಗಿತ್ತು. ಸ್ಥಳೀಯವಾಗಿ ಹಲವು ಮುಸ್ಲಿಂ ನಾಯಕರ, ಯುವಕರ ವಿರೋಧ ಎದುರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...

ಅಕ್ಟೋಬರ್ 10ರ ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ಧರಣಿಯಲ್ಲಿ ಮಮತಾ ಬ್ಯಾನರ್ಜಿ ಭಾಗಿ ಸಾಧ್ಯತೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...