ಕೂದಲೆಳೆ ಅಂತರದ ಗೆಲುವು : ಸಮರ್ಥ ಮತಗಳಿಲ್ಲದೆಯೂ ಗೆದ್ದ ʼಸಮರ್ಥ ಶಾಮನೂರುʼ

Date:

ರಾಜ್ಯದ ಗಮನ ಸೆಳೆದಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು 4,873 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಫಲಿತಾಂಶದಿಂದ ಮತ್ತೊಮ್ಮೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಮನೂರು ಕುಟುಂಬದ ಕೈವಶವಾಗಿದೆ. ಕಾಂಗ್ರೆಸ್‌ ಪಕ್ಷಕ್ಕೆ ಪಾಠವೂ ಆಗಿದೆ.

- Advertisement -

ಹಲವು ವಿರೋಧ ಮತ್ತು ಗೊಂದಗಳಿಂದಲೇ ನಡೆದ ಚುನಾವಣೆಯಲ್ಲಿ ಕೊನೆಗೂ ಪ್ರಯಾಸಪಟ್ಟು ಸಮರ್ಥ ಶಾಮನೂರು ಕುದಲೆಳೆ ಅಂತರದಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಗೆಲಿವಿಗಾಗಿ ಬೆವರು ಹರಿಸಿದ್ದಾರೆ. ಲಿಂಗಾಯತ ಮತ್ತು ಕುರುಬ ಸಮುದಾಯದ ಮತಗಳು ವಿಭಜನೆಯಾಗದೆ ಕಾಂಗ್ರೆಸ್‌ ಪಾಲಾಗಿರುವುದು ಹಾಗೂ ಕ್ಷೇತ್ರದಲ್ಲಿ ಶಾಮನೂರು ಕುಟುಂಬದ ಮೇಲಿನ ಅನುಕಂಪ ಕೈಹಿಡಿದಿದೆ. ಮುಸ್ಲಿಂ ಸಮುದಾಯದ ಸಾಂಪ್ರದಾಯಿಕ ಮತಗಳು ಸಹ ಬಹುಮಟ್ಟಿಗೆ ಕಾಂಗ್ರೆಸ್ ಪರವಾಗಿದ್ದು, ಸುಮಾರು ಶೇ.70 ರಷ್ಟು ಸಾಂಪ್ರದಾಯಿಕ ಮತಗಳು ಛಿದ್ರವಾಗದೆ ಇರುವುದು ಕಾಂಗ್ರೆಸ್‌ ಗೆಲುವಿಗೆ ಸಹಕಾರಿಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...
WhatsApp Image 2026 05 04 at 11.06.22 AM

21ನೇ ಸುತ್ತಿನ ಮತ ಎಣಿಕೆ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು 68,619 ಮತಗಳನ್ನು ಪಡೆದು 4,873 ಮತಗಳ ಅಂತರದಲ್ಲಿ ಪ್ರಯಾಸದಲ್ಲಿ ಗೆಲುವಿನ ದಡ ಸೇರಿದ್ದರು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ 63,746 ಮತಗಳನ್ನು ಪಡೆದರೆ, ಎಸ್‌ಡಿಪಿಐ ಅಭ್ಯರ್ಥಿ ಅಪ್ಸರ್ ಕೊಡ್ಲಿಪೇಟೆ 18,485 ಮತಗಳನ್ನು ಗಳಿಸಿದ್ದಾರೆ. ಆಡಳಿತ ಪಕ್ಷದ ಪ್ರಚಾರ ತಂತ್ರಗಳು ಕೈ ಹಿಡಿದಿದೆ. ಬಿಜೆಪಿಯೂ ಪ್ರಬಲ ಪೈಪೋಟಿ ನೀಡುವ ಮೂಲಕ ಪರಾಭವಗೊಂಡಿದೆ. ಎಸ್ ಡಿಪಿಐ ಕಾಂಗ್ರೆಸ್‌ ಮತ ಬ್ಯಾಂಕ್‌ಗೆ ಲಗ್ಗೆ ಇಟ್ಟು, ಗೆಲುವಿನ ಅಂತರ ಇಳಿಸಿದೆ. ಈ ಫಲಿತಾಂಶ ಎಲ್ಲಾರಿಗೂ ಆತ್ಮವಲೋಕನಕ್ಕೆ ಒಳಗು ಮಾಡಿರುವುದಂತೂ ಸತ್ಯ.

WhatsApp Image 2026 05 04 at 7.31.50 PM

4,873 ಮತಗಳ ಅಂತರದಿಂದ ಗೆಲುವು ಸಾಧಿಸಿರುವ ಸಮರ್ಥ ಶಾಮನೂರು, 27 ನೇ ವಯಸ್ಸಿಗೆ ನಿರಾಯಸವಾಗಿ ಶಾಸನ ಸಭೆ ಪ್ರವೇಶಿಸಿದ್ದಾರೆ. ಅದರೆ ತಂದೆ ಹಾಲಿ ಮಂತ್ರಿಯಾಗಿ, ತಾತನ ಧೀರ್ಘಕಾಲದ ರಾಜಕೀಯ ಹಿಡಿತ ಮತ್ತು ಆಡಳಿತ ಪಕ್ಷದ ಅಭ್ಯರ್ಥಿಯಾದರು ಗೆಲ್ಲಲೂ ಹರಸಾಹಸಪಟ್ಟಿದ್ದಾರೆ. ತೋಳು ಬಲ, ಅಧಿಕಾರದ ಬಲ, ಹಣ ಬಲವಿದ್ದರೆ ಏನು ಬೇಕಾದರೂ ಮಾಡಬಹುದು ಎಂಬ ಹುಂಬತನಕ್ಕೆ, ಇದೆಲ್ಲ ನಡೆಯುವುದಿಲ್ಲ ಎಂಬ ಸಂದೇಶ ಸಾರಿದಂತಿದೆ ಈ ಬಾರಿಯ ಫಲಿತಾಂಶ ಎಂದು ವಿಶ್ಲೇಷಿಸಲಾಗುತ್ತಿದೆ. ಮುಸ್ಲಿಂ ಸಮುದಾಯ ಪಕ್ಷನಿಷ್ಠೆ ಪ್ರದರ್ಶಿಸಿದೆ. ಹಾಗಾಗಿ ಕಾಂಗ್ರೆಸ್‌ ಗೆಲುವಿನ ದಡ ಸೇರಿದೆ ಎನ್ನುತ್ತಾರೆ ಸ್ಥಳೀಯರು.

WhatsApp Image 2026 05 04 at 7.31.58 PM

ಅಜ್ಜನ ಜೊತೆಗೆ ಹೆಜ್ಜೆ ಹಾಕಿದ್ದ ಕಾಂಗ್ರೆಸ್‌ ಹಿರಿಯ ನಾಯಕ ಸಾದಿಕ್ ಪೈಲ್ವಾನ್ ತ್ಯಾಗದಿಂದ ಅಜ್ಜನ ರಾಜಕೀಯ ಗದ್ದುಗೆಗೆ ಮೊಮ್ಮಗ ಉತ್ತರಾಧಿಯಾಗಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ದಾವಣಗೆರೆ ದಕ್ಷಿಣ ಫಲಿತಾಂಶ, ರಾಜಕೀಯದ ಲೆಕ್ಕಚಾರಗಳನ್ನೇ ಬುಡಮೇಲು ಮಾಡಿದೆ. ಅಖಂಡ ಮುಸ್ಲಿಂ ಸಮುದಾಯದ ತ್ಯಾಗ ಮತ್ತು ನಿಷ್ಠೆಯನ್ನು ಗಣನೆಗೆ ತೆಗೆದುಕೊಂಡು ಫಲಿತಾಂಶವನ್ನು ನೋಡಲಾಗುತ್ತಿದೆ. ಶಾಮನೂರು ಕುಟುಂಬದ ಮೇಲಿನ ಅನುಕಂಪದ ಅಲೆ ಮತದಾರರಲ್ಲಿ ಸ್ಪಷ್ಟವಾಗಿ ಕಾಣಿಸಿಕೊಂಡಿದ್ದು, ಅದು ಕಾಂಗ್ರೆಸ್ ಪರವಾಗಿ ಕೆಲಸ ಮಾಡಿದೆ. ಇದರ ಜೊತೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರಚಾರ ಹಾಗೂ ಪ್ರಬಲ ಮುಸ್ಲಿಂ ಅಭ್ಯರ್ಥಿಯಾಗಿದ್ದ ಸಾದಿಕ್ ಪೈಲ್ವಾನ್ ಕಣದಿಂದ ಹಿಂದೆ ಸರಿದಿರುವುದು ಕೂಡ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವಿನ ದಾರಿ ಸುಗಮಗೊಳಿಸಿವೆ.

ಒಟ್ಟಾರೆ ಕಾಂಗ್ರೆಸ್‌ ಸಾಂಪ್ರದಾಯಿಕ ಮತ ಬ್ಯಾಂಕ್ ಗೆ ಎಸ್‌ ಡಿಪಿಐ ಕೈ ಹಾಕಿದೆ. 18,485 ಸಾವಿರ ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್‌ ಗೆಲುವಿನ ಅಂತರ ಕಡಿಮೆ ಮಾಡಿದೆ. ವಸತಿ ಸಚಿವ ಜಮೀರ್ ಅಹಮದ್, ಮುಖ್ಯಮಂತ್ರಿ ಮಾಜಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಅಬ್ದುಲ್ ಜಬ್ಬಾರ್ ಸೇರಿದಂತೆ ಹಲವು ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಇರುವುದು ಗೆಲುವಿನ ಅಂತರ ಕಡಿಮೆಯಾಗಲು ಕಾರಣ ಎನ್ನಲಾಗುತ್ತಿದೆ. ಈ ಎಲ್ಲದರಿಂದ ಕಾಂಗ್ರೆಸ್‌ ಪಾಠ ಕಲಿಯಬೇಕಿದೆ. ಮುಸ್ಲಿಂ ಸುಮುದಾಯದ ದೊಡ್ಡ ಫಲಾನುಭವಿಯಾದ ಕಾಂಗ್ರೆಸ್‌ ಪಕ್ಷ ಮುಂದೆಯಾದರೂ ಆ ಸಮುದಾಯಕ್ಕೆ ಕೃತಜ್ಙತೆಯಿಂದ ನಡೆದುಕೊಳ್ಳಬೇಕಿದೆ.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ ʼನೀರೋʼ; ಭಾರತ ಉರಿಯುತ್ತಿರುವಾಗ ಭಜನೆ ಮಾಡಿದ ʼಮೋದಿʼ!

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ,...