ದಾವಣಗೆರೆ | ಕಾರ್ಮಿಕ ನಾಯಕ ಪಂಪಾಪತಿ ಕೇವಲ ವ್ಯಕ್ತಿಯಲ್ಲ, ಬೆವರಿನ ಸಂಕೇತ, ಡಾ.ಸಿದ್ದನಗೌಡ ಪಾಟೀಲ್

Date:

ರಾಜ್ಯದ ರೈತರು, ಕಾರ್ಮಿಕರು, ಬಡವರು, ಶೋಷಿತರ ಪರವಾಗಿ ಹೋರಾಟ ಮಾಡಿದ ಅಪ್ರತಿಮ ಕಾರ್ಮಿಕ ಮುಖಂಡ ದಿವಂಗತ ಪಂಪಾಪತಿ ಕೇವಲ ವ್ಯಕ್ತಿ ಆಗಿರಲಿಲ್ಲ. ಬೆವರಿನ ಸಂಕೇತವಾಗಿದ್ದರು ಎಂದು ಹೊಸತು ಪತ್ರಿಕೆ ಸಂಪಾದಕ ಡಾ.ಸಿದ್ದನಗೌಡ ಪಾಟೀಲ್ ಹೇಳಿದರು.

- Advertisement -

ದಾವಣಗೆರೆ ನಗರದ ಅಶೋಕ ರಸ್ತೆಯಲ್ಲಿರುವ ಕಾಂ. ಪಂಪಾಪತಿ ಭವನದಲ್ಲಿ, ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ, ದಾವಣಗೆರೆ ಕೆ.ಎಸ್.ಆರ್.ಟಿ.ಸಿ ನೂತನ ಬಸ್ ನಿಲ್ದಾಣಕ್ಕೆ ಕಾಂ.ಪಂಪಾಪತಿ ಹೆಸರಿಡುವ ಬಗ್ಗೆ ಚಿಂತನ-ಮಂಥನ ಸಭೆಯನ್ನು ತಮಟೆ ಬಾರಿಸುವ ಮೂಲಕ ಅವರು ಉದ್ಘಾಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ದಾವಣಗೆರೆ ನಗರಸಭೆ ಅಧ್ಯಕ್ಷರಾಗಿ, ಮೂರು ಬಾರಿ ಶಾಸಕರಾಗಿದ್ದ ಪಂಪಾಪತಿಯವರು, ರಾಜ್ಯಮಟ್ಟದಲ್ಲಿ ಶೋಷಿತರ ಪರವಾಗಿ ಹೋರಾಟ ನಡೆಸಿದವರು. ಕ್ಷೇತ್ರದಾದ್ಯಂತ ಅವರೇ ಓಡಾಡಿ ಸಮಸ್ಯೆಗಳನ್ನು ಅರಿತು ಪರಿಹಾರ ಕಂಡು ಕೊಳ್ಳುತ್ತಿದ್ದರು. ದಾವಣಗೆರೆ ನಗರದ ಹಸಿರೀಕರಣಕ್ಕೆ ಸಾಕ್ಷಿಯಾಗಿದ್ದರು. ದಾವಣಗೆರೆ ಮಹಾನಗರದ ಅಭಿವೃದ್ದಿಗಾಗಿ ಶ್ರಮಿಸಿದ್ದಾರೆ. ನಗರದಲ್ಲಿ ನೂತನವಾಗಿ ನಿರ್ಮಾಣ ಆಗುತ್ತಿರುವ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣಕ್ಕೆ ಕಾಂ.ಪಂಪಾಪತಿ ಹೆಸರಿಡುವುದು ಅತ್ಯಂತ ಸೂಕ್ತ ಎಂದರು.

ಸ್ಮಾರ್ಟ್‌ಸಿಟಿಗಳೆಂದರೆ ಸುಂದರ ನಗರ ಎಂದರ್ಥ. ಹಾಗೆಂದ ಮಾತ್ರಕ್ಕೆ ಶ್ರೀಮಂತರನ್ನು ನೋಡಿ ಸುಂದರ ನಗರ ಎನ್ನುವುದಿಲ್ಲ. ಅಲ್ಲಿನ ಬದುಕನ್ನು ನೋಡಿ ಅಳೆಯಲಾಗುತ್ತದೆ. ಈ ನಿಟ್ಟಿನಲ್ಲಿ ಕೇವಲ ನಗರವನ್ನು ಸ್ವಚ್ಛ ಮಾಡುವ ಬದಲು ಮನಸ್ಸನ್ನು ಸ್ವಚ್ಛವಾಗಿ ಇಟ್ಟುಕೊಂಡು ಸಮಾಜವನ್ನು ಕಟ್ಟಬೇಕಾಗಿದೆ.

ಮಹಾತ್ಮ ಗಾಂಧಿಜೀಯವರಿಗೆ ಹಿಂದುತ್ವದಲ್ಲಿ ನಂಬಿಕೆ ಇತ್ತು. ಆದರೆ, ಯಾವುದೇ ಒಂದು ಜಾತಿಯ ಮೇಲಲ್ಲ. ಯಾವುದೇ ಒಂದು ಜಾತಿ, ಧರ್ಮವನ್ನು ಪ್ರತ್ಯೇಕವಾಗಿ ಅಳೆಯಬಾರದು. ಸರ್ವರನ್ನು ಒಂದೇ ರೀತಿಯಲ್ಲಿ ನೋಡಬೇಕೆನ್ನುವುದೇ ಅವರ ಆಶಯವಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಧರ್ಮ, ಜಾತಿಗಳ ಆಧಾರದ ಮೇಲೆ ಕಂದಕ ಸೃಷ್ಟಿ ಮಾಡಲಾಗುತ್ತಿದೆ. ಈ ರೀತಿಯಾದರೆ ಯಾವ ದೇಶವೂ ಉದ್ಧಾರ ಆಗುವುದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಸ್ವಾಗತ ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿದ ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಜಿ. ಉಮೇಶ್ ಆವರಗೆರೆ, ಭ್ರಷ್ಟಾಚಾರ, ನಿರುದ್ಯೋಗ, ದೇಶದೆಲ್ಲೆಡೆ ತಾಂಡವವಾಡುತ್ತಿದೆ. ವಿದ್ಯಾವಂತರು ಕೆಲಸ ಹುಡುಕಿದರೂ ಸಿಗದಂತಹ ಪರಿಸ್ಥಿತಿ ಇದೆ. ನಮ್ಮನ್ನು ಆಳುವ ಸರ್ಕಾರಗಳು ಶ್ರಮಿಕರ ಪರವಾಗಿ ಕೆಲಸ ಮಾಡದೇ ನಿರ್ಲಕ್ಷ್ಯ ವಹಿಸುತ್ತಿವೆ. ರಾಜಕಾರಣಿಗಳಿಗೆ ಸ್ವಪ್ರತಿಷ್ಠೆಗಾಗಿ ಸ್ವಾರ್ಥ ಮನೋಭಾವ ಬಂದಿದೆ ಎಂದು ಕಿಡಿಕಾರಿದರು.

ಚಿಂತನ-ಮಂಥನ ಸಭೆಯ ಅಧ್ಯಕ್ಷತೆ ವಹಿಸಿದ್ದ ಎಐಟಿಯುಸಿ ಜಿಲ್ಲಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ಮಾತನಾಡಿ, ನಗರ ಸಭೆಯ ಅಧ್ಯಕ್ಷರಾಗಿ, ಮೂರು ಬಾರಿ ದಾವಣಗೆರೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ, ಕಾಮ್ರೇಡ್ ಪಂಪಾಪತಿಯವರು ದಾವಣಗೆರೆ ನಗರ ಮತ್ತು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಮಾತ್ರವಲ್ಲದೆ, ಕಾರ್ಮಿಕ ಸಂಘಟನೆ, ಕಾರ್ಮಿಕ ಚಳವಳಿಗಳ ಮುಂದಾಳತ್ವ ವಹಿಸಿ ಶೋಷಿತ ಸಮುದಾಯದ ಧ್ವನಿಯಾಗಿ ತಮ್ಮ ಜೀವಮಾನವಿಡೀ ಕೆಲಸ ಮಾಡಿದ್ದರು. ಯಾವುದೇ ಜಾತಿ, ಧರ್ಮದ ಪರವಾಗಿ ಕೆಲಸ ಮಾಡದೇ ಕಾರ್ಮಿಕರೇ ತನ್ನ ಜೀವನದ ಉಸಿರು ಎಂದು ಕೆಲಸ ಮಾಡಿದ್ದ ಕಾಮ್ರೇಡ್ ಪಂಪಾಪತಿಯವರ ಹೆಸರನ್ನು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಇಟ್ಟರೆ, ಅದು ಸಮಸ್ತ ಕಾರ್ಮಿಕ ವರ್ಗಕ್ಕೆ ಸಲ್ಲಿಸುವ ಗೌರವವಾಗಲಿದೆ ಎಂದು ಕೆ.ರಾಘವೇಂದ್ರ ನಾಯರಿ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ನಗರವಾಣಿ ಉಪ ಸಂಪಾದಕ ಬಿ.ಎನ್.ಮಲ್ಲೇಶ್, ನಿವೃತ್ತ ಪ್ರಾಂಶುಪಾಲ ಪ್ರೊ. ಎ.ಬಿ. ರಾಮಚಂದ್ರಪ್ಪ, ಜನಶಕ್ತಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸತೀಶ್ ಅರವಿಂದ್, ಶ್ರೀ ಆಂಜನೇಯ ಕಾಟನ್ ಮಿಲ್ಸ್ ವರ್ಕರ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಎಸ್.ಜಯ್ಯಪ್ಪ, ಕಟ್ಟಡ ಕಾರ್ಮಿಕ ಸಂಘಟನೆಯ ಜಿಲ್ಲಾ ಅಧ್ಯಕ್ಷ ವಿ.ಲಕ್ಷ್ಮಣ, ಎಐಟಿಯುಸಿ ತಾಲ್ಲೂಕು ಅಧ್ಯಕ್ಷ ನರೇಗ ರಂಗನಾಥ, ನೇತ್ರಾವತಿ, ಶಿವಕುಮಾರ್ ಡಿ.ಶೆಟ್ಟರ್, ಸಾಮಿಲ್ ದಾದಾಪೀರ್, ಎ.ತಿಪ್ಪೇಶಿ, ಹೆಚ್.ಕೆ.ಆರ್.ಸುರೇಶ್, ಎಸ್.ಮುರುಗೇಶ್, ಗುಡಿಹಳ್ಳಿ ಹಾಲೇಶ್, ರಾಜು ಕೆರೆನಹಳ್ಳಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಮತದಾರರಿಗೆ ಬಿಜೆಪಿ ಬೆಳ್ಳಿ ವಿಗ್ರಹ ಹಂಚಿಕೆ ಆರೋಪ; ಪ್ರಕರಣ ದಾಖಲು

ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಮತದಾರರನ್ನು ಪ್ರಚೋದಿಸಲು ಎಲ್ಲ...

ದಾವಣಗೆರೆ ಜಿಲ್ಲೆ | ಬಿಜೆಪಿ ಭದ್ರಕೋಟೆಯನ್ನು ಭೇದಿಸಲಿದ್ದಾರೆಯೇ ಕಾಂಗ್ರೆಸ್‌ ಕಲಿಗಳು?

ದಾವಣಗೆರೆ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌...

ಈ ಬಾರಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ: ಬಿ ಎಸ್ ಯಡಿಯೂರಪ್ಪ

ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬಿ ಎಸ್ ಯಡಿಯೂರಪ್ಪ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ...

ಧಾರವಾಡ | ಈ ಚುನಾವಣೆ ಬಿಜೆಪಿ ವಿರುದ್ಧದ ಲಿಂಗಾಯತ ಹೋರಾಟ: ಗಂಗಾಧರ ದೊಡವಾಡ

ಹುಬ್ಬಳ್ಳಿ ಸೆಂಟ್ರಲ್ ಲಿಂಗಾಯತ ಪ್ರಮುಖರ ಸಭೆ ಜಗದೀಶ ಶೆಟ್ಟರ್ ಗೆಲುವು ಈಗಾಗಲೇ ನಿರ್ಧಾರವಾಗಿದೆ ಲಿಂಗಾಯತ...