ಸಿಎಂ ನಿರ್ಧಾರ ವಿಳಂಬ; ಕುಹಕವಾಡಿದ ಬಿಜೆಪಿಗೆ ಕಾಂಗ್ರೆಸ್‌ ತಿರುಗೇಟು!

Date:

Advertisements

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರೆಂದು ನಿರ್ಧರಿಸುವಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ನ ವಿಳಂಬವನ್ನು ಟೀಕಿಸಿದ್ದ ಬಿಜೆಪಿ ವಿರುದ್ಧ ಕೈ ಪಡೆ ಕಿಡಿಕಾರಿದೆ. ಉತ್ತರ ಪ್ರದೇಶ ಮತ್ತು ಅಸ್ಸಾಂ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದಾಗ, ಅಲ್ಲಿ ಮುಖ್ಯಮಂತ್ರಿಗಳನ್ನು ಘೋಷಿಸುವುದರಲ್ಲಿ ಕೇಸರಿ ಪಡೆಯೂ ವಿಳಂಬ ಮಾಡಿತ್ತೆಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ.

ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟವಾಯಿತು. ಅಂದಿನಿಂದ ಮುಖ್ಯಮಂತ್ರಿ ಯಾರೆಂದು ನಿರ್ಧರಿಸಲು ಕಾಂಗ್ರೆಸ್‌ ವರಿಷ್ಠರು ಸಭೆಗಳು ಮತ್ತು ಸಮಾಲೊಚನೆಗಳನ್ನು ನಡೆಯುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ತಮಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕತ್ವ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.

ಈ ಮಧ್ಯೆ, ಉನ್ನತ ಹುದ್ದೆಗಾಗಿ ತೀವ್ರ ಲಾಬಿ ನಡೆಯುತ್ತಿದೆ. ತಮ್ಮ ರಾಜಕೀಯ ಬಿಟ್ಟು ಆದಷ್ಟು ಬೇಗ ಮುಖ್ಯಮಂತ್ರಿ ಆಯ್ಕೆ ಮಾಡಿ, ಸರ್ಕಾರ ರಚಿಸಿ ಜನರ ಸೇವೆ ಮಾಡಲಿ ಎಂದು ಬಿಜೆಪಿ ಕುಹಕವಾಡಿದೆ.

Advertisements

“ಕಾಂಗ್ರೆಸ್‌ನಲ್ಲಿ ವಿಷಾದನೀಯ ಸ್ಥಿತಿಯಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ‘ಪೋಸ್ಟ್‌ಮ್ಯಾನ್‘ನಂತಾಗಿದ್ದಾರೆ. ಯಾರಾದರೂ ಸರ್ಕಸ್ ನೋಡಬೇಕಿದ್ದರೆ, ಕರ್ನಾಟಕದಲ್ಲಿ ಕಾಂಗ್ರೆಸ್ ತಮ್ಮ ಮುಖ್ಯಮಂತ್ರಿ ಆಯ್ಕೆ ಮಾಡುತ್ತಿರುವುದನ್ನು ನೋಡಿ” ಎಂದು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವ್ಯಂಗ್ಯವಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಮೋದಿಯವರ ಡೋಲು ಬಾರಿಸುವ ಕೆಲವರಿಗೆ ನೆನಪಿಸುತ್ತಿದ್ದೇನೆ. 2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶವು ಆ ವರ್ಷದ ಮಾರ್ಚ್ 11ರಂದು ಹೊರಬಿದ್ದಿತು. ಆದರೆ, ಯೋಗಿ ಅವರನ್ನು ಮುಖ್ಯಮಂತ್ರಿಯೆಂದು ಎಂಟು ದಿನಗಳ ಬಳಿಕ ಮಾರ್ಚ್ 19ರಂದು ಘೋಷಿಸಲಾಯಿತು. 2021ರ ಅಸ್ಸಾಂ ವಿಧಾನಸಭಾ ಚುನಾವಣೆಯ ಫಲಿತಾಂಶವು ಮೇ 3 ರಂದು ಪ್ರಕಟವಾಯಿತು. ಹಿಮಂತ ಬಿಸ್ವ ಶರ್ಮಾ ಅವರನ್ನು ಮುಖ್ಯಮಂತ್ರಿಯಾಗಿ 7 ದಿನಗಳ ನಂತರ, ಮೇ 10 ರಂದು ನೇಮಿಸಲಾಯಿತು,” ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. “ಇಂತಹ ಇನ್ನೂ ಅನೇಕ ಉದಾಹರಣೆಗಳಿವೆ,” ಎಂದೂ ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X