ಕಲಬುರಗಿ | ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಬಂಧನಕ್ಕೆ ಆಗ್ರಹ

Date:

  • ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ
  • ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿರುವ ಆರೋಪ

ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿರುವ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡನನ್ನು ಕೂಡಲೇ ಬಂಧಿಸಬೇಕು ಮತ್ತು ಚುನಾವಣೆಯಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ಮತ್ತು ದಲಿತ ಸಂಘಟನೆಗಳ ಮುಖಂಡರು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಖರ್ಗೆ ಕುಟುಂಬಕ್ಕೆ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಜೀವ ಬೆದರಿಕೆ ಹಾಕಿರುವ ಆಡಿಯೋ ವೈರಲ್ ಆಗಿದ್ದು. ಆಡಿಯೋ ದಲ್ಲಿ ಮಣಿಕಂಠ ರಾಠೋಡ ಬಿಜೆಪಿ ಕಾರ್ಯಕರ್ತ ರವಿ ಜೊತೆಗೆ ಮಾತನಾಡುವಾಗ ‘ಖರ್ಗೆ ಹೆಂಡತಿ ಮಕ್ಕಳನ್ನು ಸಾಫ್ ಮಾಡ್ತೀನಿ’ ಎಂದು ಹೇಳಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮುಖಂಡ ಸುರೇಶ್ ಹಾದಿಮನಿ ಮಾತನಾಡಿ, ”ಇಡೀ ದೇಶ ಮತ್ತು ರಾಜ್ಯದ ಶಾಂತಿ ನಾಶ ಮಾಡಿದ ಬಿಜೆಪಿಗೆ ಜನರ ಮತ ಕೇಳುವ ನೈತಿಕತೆ ಇಲ್ಲ. ಬಿಜೆಪಿಗೆ ಯಾವ ಒಳ್ಳೆಯ ಅಭ್ಯರ್ಥಿ ಸಿಗದೇ ಕಾರಣ ಒಬ್ಬ ರೌಡಿಶೀಟರ್‌ಗೆ ಟೀಕೆಟ್ ನೀಡಿದೆ. ಇದರಿಂದ ಬಿಜೆಪಿಗೆ ನಾಚಿಕೆ ಆಗುವುದಿಲ್ಲವೆ?” ಎಂದು ಟೀಕಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಜನರಿಗೆ ಬರಿ ಸುಳ್ಳನೇ ಹೇಳಿಕೊಂಡು ಬರುತ್ತಿದೆ. ಬದಲಾವಣೆ ಮಾಡುತ್ತೇವೆ, ನಿಮ್ಮ ಖಾತೆಗೆ 15 ಲಕ್ಷ ಹಾಕುತ್ತೇವೆ, ಪೆಟ್ರೊಲ್‌, ಡಿಸೇಲ್‌ ಬೆಲೆ ಕಡಿಮೆ ಮಾಡುತ್ತೇವೆ ಎಂದು ಸುಳ್ಳು ಹೇಳಿ ನಂಬಿಸಿ ಅಧಿಕಾರಕ್ಕೆ ಬಂದಿದ್ದಾರೆ. ಆದರೆ, ಕರ್ನಾಟಕದ ಜನ ನಿರ್ಧಾರ ಮಾಡಿದ್ದಾರೆ. ಬಿಜೆಪಿ ಯಾವುದೇ ಕುತಂತ್ರ ಮಾಡಿದರೂ ಈ ಬಾರಿ ರಾಜ್ಯದಿಂದ ಕಿತೋಗೆಯುವುವ ಕೆಲಸ ಮಾಡುತ್ತಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮಣಿಕಂಠ ರಾಠೋಡ ವಿರುದ್ಧ ನಾಳೆ ‘ಡಿಜಿ’ಗೆ ದೂರು; ಪ್ರಿಯಾಂಕ್‌ ಖರ್ಗೆ

“ಚಿತ್ತಾಪುರ ಅಭಿವೃದ್ಧಿಯ ಹರಿಕಾರ, ಕರ್ನಾಟಕದ ಅಭಿವೃದ್ಧಿ ಬಗ್ಗೆ ಒಳ್ಳೆಯ ಕನಸು ಕಂಡಿರುವ ಪ್ರಿಯಾಂಕ್‌ ಖರ್ಗೆ ಅವರಿಗೆ ಯಾವ ವಿಷಯದಲ್ಲೂ ಮಣಿಕಂಠ ರಾಠೋಡ ಸರಿಸಮನಲ್ಲ. ವಯಸ್ಸು ಇನ್ನೂ 26 ಆದರೆ, ಅತನ ಮೇಲೆ ಇರುವ ಕೇಸು 40. ನೀನು ಯಾವ ರೀತಿ ಸಮಾಜ ಸೇವೆ ಮಾಡ್ತಿಯಾ?” ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಸುರೇಶ ಹಾದಿಮನಿ, ಅಶ್ವಿನಿ ಮದನಕರ್, ಕೆ ನೀಲಾ, ಮೀನಾಕ್ಷಿ ಬಾಳಿ, ಹಣಮಂತ ಯಲಸಂಗಿ ಹಾಗೂ ಪ್ರಗತಿಪರ ಸಂಘಟನೆ ಮುಖಂಡರು, ದಲಿತ ಮುಖಂಡರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೈಂದೂರು | ಸಮಾಜದ ಎಲ್ಲ ವರ್ಗದವರ ಹಿತ ಕಾಯಲು ಬದ್ಧ: ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್

ಲೋಕಸಭಾ ಚುನಾವಣೆಯಲ್ಲಿ ಬೈಂದೂರು ಮತದಾರರು ನನ್ನ ಕೈ ಬಲಪಡಿಸಿದರೆ, ಸಮಾಜದ ಎಲ್ಲ...

ಚಿಕ್ಕಬಳ್ಳಾಪುರ | ₹400 ಕೋಟಿ ನಕಲಿ ನೋಟು ಹಂಚಿಕೆಗೆ ಸಕಲ ತಯಾರಿ: ಪಕ್ಷೇತರ ಅಭ್ಯರ್ಥಿ ಆರೋಪ 

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಮತದಾರರಿಗೆ ಹಣ ಹಂಚಲು ಜನವರಿ...

ಚಿಕ್ಕಮಗಳೂರು | ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ

ಮಾಜಿ ಸಚಿವ ಮಾಧುಸ್ವಾಮಿ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಚಿಕ್ಕಮಗಳೂರು...

ವಿಶೇಷ ಜಾತ್ರೆ | ತಲೆ ಮೇಲೆ ತೆಂಗಿನಕಾಯಿ ಒಡೆದುಕೊಂಡು ಮಳೆಗಾಗಿ ಪ್ರಾರ್ಥನೆ ಮಾಡಿದ ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು

ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ಬಿರು ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ದಿನದಿಂದ ದಿನಕ್ಕೆ...