ಹಿರಿಯ ಪತ್ರಕರ್ತ ಮತ್ತು ಕನ್ನಡ ಹೋರಾಟಗಾರರ ವಿರುದ್ಧದ ಎಫ್‌ಐಆರ್‌ ರದ್ದತಿಗೆ ಒತ್ತಾಯ

Date:

ಸುಳ್ಳುಸುದ್ದಿ ಹರಿಬಿಟ್ಟಿದ್ದಾರೆಂದು ಆರೋಪಿಸಿ ಹಿರಿಯ ಪತ್ರಕರ್ತ ದಿನೇಶ್‌ ಅಮೀನ್‌ ಮಟ್ಟು, ಕನ್ನಡ ಪರ ಹೋರಾಟಗಾರ ಬಿ. ಹರೀಶ್‌ಕುಮಾರ್‌ ಭೈರಪ್ಪ, ಹೇಮಂತ್‌ಕುಮಾರ್‌, ಬಿಂದುಗೌಡ, ದಿಲೀಪ್‌ಗೌಡ ಅವರ ವಿರುದ್ಧ ದುರುದ್ದೇಶದಿಂದ ಎಫ್‌ಐಆರ್‌ ದಾಖಲಿಸಲಾಗಿದೆ. ಕೂಡಲೇ ಎಫ್‌ಐಆರ್‌ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಸಮಾನ ಮನಸ್ಕರ ಒಕ್ಕೂಟ – ಕರ್ನಟಕ ಒತ್ತಾಯಿಸಿದೆ.

ಬೆಂಗಳೂರಿನಲ್ಲಿ ಪೊಲೀಸ್‌ ಮಹಾನಿರೀಕ್ಷಕರಿಗೆ ಹಕ್ಕೊತ್ತಾಯ ಸಲ್ಲಿಸಿರುವ ಒಕ್ಕೂದ ಸದದ್ಯರು, “ದಿನೇಶ್‌ ಮತ್ತಿತರರು ತಮ್ಮ ಫೇಸ್‌ಬುಕ್‌ನಲ್ಲಿ ‘ಬಿ.ಎಲ್‌. ಸಂತೋಷ್‌ ಮಾತನಾಡಿದ್ದಾರೆ ಎಂದು ಹೇಳಲಾಗುವ’ ವರದಿಯನ್ನು ಪೋಸ್ಟ್‌ ಮಾಡಿ ‘ಇದು ನಿಜವೇ, ಅಲ್ಲವೇ ಎಂದು ಸಂತೋಷ್‌ ಅವರು ಸ್ಪಷ್ಟೀಕರಣ ಕೊಡಲಿ’ ಎಂದಿದ್ದಾರೆ. ಅವರು ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡು ಪ್ರಶ್ನೆ ಮಾಡಿದ್ದಾರೆ. ಎಲ್ಲಿಯೂ ಆ ವರದಿಯನ್ನು ಸಮರ್ಥನೆ ಮಾಡಿಲ್ಲ ಮತ್ತು ನಿಜವೆಂದು ಪ್ರಚಾರ ಮಾಡಿಲ್ಲ” ಎಂದು ವಿವರಿಸಿದ್ದಾರೆ.

“ಯಾವುದೇ ಆಯಾಮದಿಂದ ನೋಡಿದರೂ ದಿನೇಶ್‌ ಮತ್ತಿತರರ ಮೇಲೆ ಮಾಡಲಾದ ಆರೋಪ ಸುಳ್ಳಾಗಿದೆ. ಸತ್ಯಕ್ಕೆ ದೂರವಾಗಿದೆ ಎಂಬುದು ಅವರ ಪೋಸ್ಟ್‌ಗಳನ್ನು ನೋಡಿದರೆ ಸ್ಪಷ್ಟವಾಗತ್ತದೆ. ಹೀಗಾಗಿ, ಅವರೆಲ್ಲರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಅನ್ನು ಹಿಂಪಡೆಯಬೇಕು” ಎಂದು ಒಕ್ಕೂಟ ಮನವಿ ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಚಿತ್ತಾಪುರ ಕ್ಷೇತ್ರದ ಬಜೆಪಿ ಅಭ್ಯರ್ಥಿ ಮಣಿಕಂಠ ಅವರು ‘ಖರ್ಗೆ ಕುಟುಂಬವನ್ನು ಸಾಫ್‌ ಮಾಡುತ್ತೇನೆ’ ಎಂದು
ಹೇಳುವ ಆಡಿಯೋ ಹರಿದಾಡುತ್ತಿದೆ ಮತ್ತು ಆ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿದೆ. ಕೊಲೆ ಮಾಡುತ್ತೇನೆಂದು ಬೆದರಿಕೆ ಹಾಕಿರುವ ಮಣಿಕಂಠ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ಅವರನ್ನು ಬಂಧಿಸಬೇಕಾಗಿತ್ತು. ಆದರೆ ಸಂಬಂಧಪಟ್ಟವರು ಈ ಕುರಿತು ಮೌನವಾಗಿರುವುದು ನಮಗೆ ಆತಂಕ ಮೂಡಿಸಿದೆ” ಎಂದು ಒಕ್ಕೂಟದ ಮುಖಂಡರು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

“ವಿಜಯಪುರದ ಬಿಜೆಪಿ ಅಭ್ಯರ್ಥಿ ಬಸವರಾಜ ಪಾಟೀಲ್‌ ಯತ್ನಾಳ್‌ ಅವರು ಜನರನ್ನು ಪ್ರಚೋದಿಸುವಂತಹ ಹೇಳಿಕೆ ಕೊಡುತ್ತಿದ್ದಾರೆ. ಆದರೆ, ಅವರ ವಿರುದ್ಧವೂ ಕ್ರಮ ತೆಗೆದುಕೊಂಡಿರುವುದಿಲ್ಲ. ಬಿಜೆಪಿ ಮುಖಂಡರು ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್‌ ಎಂದು ಅವಹೇಳನ ಮಾಡುತ್ತಿದ್ದಾರೆ. ಅವರ ವಿರುದ್ಧವೂ ಕ್ರಮ ತೆಗೆದುಕೊಂಡಿಲ್ಲ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಎಲ್ಲ ಅನುದಾನಗಳನ್ನು ನಿಲ್ಲಿಸುತ್ತೇವೆ’ ಎಂದು ರಾಜ್ಯದ ಜನರನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಂಡಡಿಲ್ಲ. ಆದರೆ, ಸೇಡಿನ ರಾಜಕೀಯದ ಕಾರಣದಿಂದ ದಿನೇಶ್‌ ಮತ್ತು ಹರೀಶ್‌ ಇನ್ನಿತರರ ವಿರುದ್ಧ ಆಧಾರರಹಿತ ದೂರನ್ನು ಆಧರಿಸಿ ಮಿಂಚಿನ ವೇಗದಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಈ ಎಫ್‌ಐಆರ್‌ಅನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಹಕ್ಕೊತ್ತಾಯ ಸಲ್ಲಿಸುವ ವೇಳೆ, ಒಕ್ಕೂಟದ ಮುಖಂಡರಾದ ಎಸ್‌.ಜಿ ಸಿದ್ದರಾಮಯ್ಯ, ಎನ್.ಎಲ್ ಮುಕುಂದರಾಜ್, ಜಾಣಗೆರೆ ವೆಂಕಟೇಶಯ್ಯ, ವಸುಂಧರಾ ಭೂಪತಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಕೋಮುವಾದದ ಮಾತುಗಳನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ ಸಿ ಸುಧಾಕರ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...

ಯಾದಗಿರಿ | ಅಂಗಡಿ, ಸಂತೆ ಪ್ರದೇಶದಲ್ಲಿ ಎಸ್‌ಯುಸಿಐ ಚುನಾವಣಾ ಪ್ರಚಾರ

ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ...

ಉಡುಪಿ‌ | ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಅಪಾಯ: ಮಂಜುನಾಥ್ ಗಿಳಿಯಾರ್ 

ಬಿಜೆಪಿ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ವಿರೋಧಿಯಾಗಿದೆ. ದೇಶದಲ್ಲಿ ಮೀಸಲಾತಿ...