ದೇವನಹಳ್ಳಿ | ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ನಿಧನ

Date:

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೆಂಕಟಸ್ವಾಮಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

53 ವರ್ಷದ ವೆಂಕಟಸ್ವಾಮಿ ಅವರು ತೀವ್ರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ.

ವೆಂಕಟಸ್ವಾಮಿ ಅವರಿಗೆ ಒಂದೇ ತಿಂಗಳಲ್ಲಿ ಮೂರು ಬಾರಿ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಮೃತರು ಇಬ್ಬರು ಪುತ್ರರು ಮತ್ತು ಪತ್ನಿಯನ್ನು ಅಗಲಿದ್ದು, ಸ್ವಗ್ರಾಮ ಸಾದಹಳ್ಳಿಯ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

2008ರ ವಿಧಾನಸಭಾ ಚುನಾವಣೆಯಲ್ಲಿ ವೆಂಕಟಸ್ವಾಮಿ ಅವರು ಕಾಂಗ್ರೆಸ್ ಟಿಕೆಟ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2013ರ ಚುನಾವಣೆಯಲ್ಲಿ ಪಕ್ಷದ ಆಂತರಿಕ ಬಿಕ್ಕಟ್ಟಿನಿಂದ ಸೋಲನುಭವಿಸಿದ್ದರು. 2018ರ ಚುನಾವಣೆಯಲ್ಲಿ ಪುನಃ ಸ್ಪರ್ಧಿಸಿದ್ದರು. ಆದರೆ ಜೆಡಿಎಸ್‌ ಅಭ್ಯರ್ಥಿ ಎಲ್‌ ಎನ್‌ ನಾರಾಯಣ ಸ್ವಾಮಿ ವಿರುದ್ಧ ಸೋಲು ಕಂಡಿದ್ದರು.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ದೊರೆಯಲಿದೆ ಎಂದು ವೆಂಕಟಸ್ವಾಮಿ ಕ್ಷೇತ್ರದಾದ್ಯಂತ ಪ್ರಚಾರ ಆರಂಭಿಸಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಟಿಕೆಟ್ ನಿರಾಕರಿಸಿದೆ. ಟಿಕೆಟ್ ಸಿಗದ ಬೆನ್ನಲ್ಲೇ ವೆಂಕಟಸ್ವಾಮಿ ಅವರು ನಿಧನರಾಗಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದಿನಿಂದ ಭಾರತದಲ್ಲಿನ ಅಫ್ಘಾನಿಸ್ತಾನ ರಾಯಭಾರ ಕಚೇರಿ ಕಾರ್ಯಾಚರಣೆ ಸ್ಥಗಿತ

ಭಾರತ ಸರ್ಕಾರವು ಸರಿಯಾದ ಬೆಂಬಲ ನೀಡುತ್ತಿಲ್ಲ ಎಂದು ಆರೋಪಿಸಿದ ರಾಯಭಾರ ಕಚೇರಿ 'ಸಾಕಷ್ಟು...

ಗಾಂಜಾ ಮಾರಾಟ ಆರೋಪ; ಮಾಜಿ ಸಚಿವ ಮುನಿರತ್ನ ವಿರುದ್ಧ ದೂರು

ಬೆಂಗಳೂರಿನ ಆರ್‌ಆರ್‌ ನಗರದಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಆರ್‌ಆರ್‌ ನಗರದ...

ಕಾವೇರಿ ವಿವಾದ | ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್‌

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು...

ಕೋಲಾರ | ಅನರ್ಹರಿಗೆ ಭೂಮಿ ಮಂಜೂರು ಪ್ರಕರಣ; ಕಾಂಗ್ರೆಸ್‌ ಶಾಸಕನ ವಿರುದ್ಧ ತನಿಖೆಗೆ ಆದೇಶ

ಸರ್ಕಾರಿ ಭೂಮಿಯನ್ನು ಮೃತರೂ ಸೇರಿದಂತೆ ಅನರ್ಹರಿಗೆ ಮಂಜೂರು ಮಾಡಿದ್ದ ಮಾಲೂರು ಕಾಂಗ್ರೆಸ್‌...