ಧಾರವಾಡ ಗ್ರಾಮೀಣ | ಎಸ್‌ಯುಸಿಐ ಅಭ್ಯರ್ಥಿ ಮಧುಲತಾ ಗೌಡರ್ ನಾಮಪತ್ರ ಸಲ್ಲಿಕೆ

Date:

ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಅಭ್ಯರ್ಥಿ ಮಧುಲತಾ ಗೌಡರ್ ಅವರು ಧಾರವಾಡ ಗ್ರಾಮೀಣ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಯುಸಿಐ(ಸಿ) ಮಧುಲತಾ ಗೌಡರ್ ಅವರಿಗೆ ಕ್ಷೇತ್ರದ ಮತದಾರರು ಮತ ನೀಡುವಂತೆ ಮನವಿ ಮಾಡಿದೆ.

“ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ನ ಜನ ವಿರೋಧಿ ರಾಜಕೀಯದಿಂದ ಬೇಸತ್ತು ಹೋಗಿರುವ ಜನತೆ ಹತಾಶರಾಗಬಾರದು. ಸಮಾಜದಲ್ಲಿ ಬದಲಾವಣೆಯನ್ನು ತರುವ ಏಕಮಾತ್ರ ಅಸ್ತ್ರವಾಗಿರುವ ಜನ ಹೋರಾಟವನ್ನೇ ಧ್ಯೇಯವಾಗಿಟ್ಟುಕೊಂಡಿರುವ ಎಸ್‌ಯುಸಿಐಯನ್ನು ಬೆಂಬಲಿಸಬೇಕು. ಪಕ್ಷದ ಅಭ್ಯರ್ಥಿ ಮಧುಲತಾ ಗೌಡರ್ ಅವರಿಗೆ ಮತ ನೀಡಿ ಗೆಲ್ಲಿಸಬೇಕು” ಎಂದು ಮನವಿ ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಚುನಾವಣಾ ಕಣದಲ್ಲಿ ಕಾಣಿಸಿಕೊಂಡ ಸಿದ್ದರಾಮಯ್ಯ ಮೊಮ್ಮಗ : ಮೈಸೂರಿನ ಜನ ಹೇಳಿದ್ದೇನು ಗೊತ್ತೇ?

“ಮಧುಲತಾ ಗೌಡರ್ ಅವರು ಪಕ್ಷದ ಪೂರ್ಣಾವಧಿ ಕಾರ್ಯಕರ್ತರಾಗಿ, ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾಗಿ, ತಮ್ಮ ಇಡೀ ಬದುಕನ್ನೇ ಸಾಮಾಜಿಕ ಚಳವಳಿಗೆ ಸಮರ್ಪಿಸಿಕೊಂಡಿದ್ದಾರೆ. ಪಕ್ಷದ ಮಹಿಳಾ ಮುಂದಾಳುವಾಗಿ, ಎಐಎಂಎಸ್‌ಎಸ್ ಜಿಲ್ಲಾಧ್ಯಕ್ಷರಾಗಿ ಜಿಲ್ಲೆಯಲ್ಲಿ ಮಹಿಳೆಯರ ಸಮಸ್ಯೆಗಳಿಗೆ ಹೋರಾಟದ ಧ್ವನಿಯಾಗಿದ್ದಾರೆ” ಎಂದು ಪಕ್ಷ ಹೇಳಿದೆ.

ಮಧುಲತಾ ಅವರ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಎಸ್‌ಯುಸಿಐ (ಸಿ) ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗನ್ನವರ, ಪಕ್ಷದ ಹಿರಿಯ ಸದಸ್ಯರಾದ ಗಂಗಾಧರ್ ಬಡಿಗೇರ್, ಭವಾನಿಶಂಕರ ಗೌಡ, ಶರಣು ಗೋನವಾರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹4.8 ಕೋಟಿ ನಗದು ವಶ; ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲು

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿಚಕ್ಷಣ ದಳದ (ಎಫ್‌ಎಸ್‌ಟಿ) ಅಧಿಕಾರಿಗಳು ₹4.8...

ಮುಸ್ಲಿಂ ಮೀಸಲಾತಿ ರದ್ದು ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ: ಮಾಜಿ ಸಿಎಂ ಬೊಮ್ಮಾಯಿ

ಮುಸ್ಲಿಮರಿಗೆ ನೀಡಿರುವ ಮೀಸಲಾತಿ ರದ್ದು ಮಾಡಿರುವ ವಿಚಾರದಲ್ಲಿ ನಾವು ತೆಗೆದುಕೊಂಡ ನಿರ್ಧಾರಕ್ಕೆ...

ಹಿಂದಿಗಿಂತ ಈಗ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ನನಗಿದೆ: ಡಿ ಕೆ ಸುರೇಶ್

ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ...

ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಕುಟುಂಬಕ್ಕೆ ಸಾಂತ್ವನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚಿಗೆ ಅನಾಗರಿಕ ವಿಕೃತ ದುಷ್ಕರ್ಮಿಯಿಂದ ಕೊಲೆಯಾದ ಹುಬ್ಬಳ್ಳಿಯ...