ಧಾರವಾಡ | ಯುವ ಮತದಾರರನ್ನು ಉತ್ತೇಜಿಸಲು ವಿಶೇಷ ಮತದಾನ ಕೇಂದ್ರ ಸ್ಥಾಪನೆ

Date:

  • ಧಾರವಾಡದಲ್ಲಿ 30,056 ಮಂದಿ ಹೊಸ ಮತದಾರರ ನೋಂದಣಿ
  • ಪ್ರತಿ ಮತಗಟ್ಟೆಗೆ ನಾಲ್ಕು ಮಂದಿ ಯುವ ಅಧಿಕಾರಿಗಳ ನಿಯೋಜನೆ

ಇದೇ ಮೊದಲ ಬಾರಿಗೆ ಯುವ ಮತದಾರರಿಗಾಗಿ ಪ್ರತ್ಯೇಕ ಮತಗಟ್ಟೆಗಳನ್ನು ತೆರೆಯಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ. ಮಹಿಳೆಯರಿಗಾಗಿ ಸಖಿ ಮತಗಟ್ಟೆಗಳು ಆರಂಭವಾದ ಬಳಿಕ, ರಾಜ್ಯದ ಯುವ ಮತದಾರರನ್ನು ಉತ್ತೇಜಿಸಲು, ‘ಯುವಮತದಾರರ ಮತದಾನ ಕೇಂದ್ರ’ಗಳನ್ನು ಸ್ಥಾಪಿಸಲು ಆಯೋಗ ಮುಂದಾಗಿದೆ.

- Advertisement -

ರಾಜ್ಯದಲ್ಲಿ ಸುಮಾರು 224  ಯುವಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಈ ನಿಲ್ದಾಣಗಳನ್ನು ಯುವ ಸರ್ಕಾರಿ ಅಧಿಕಾರಿಗಳು ನಿರ್ವಹಿಸಲಿದ್ದಾರೆ. ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಸ್ವೀಪ್) ತಂಡ ಮತದಾನ ಕೇಂದ್ರವನ್ನು ಗುರುತಿಸಿದ್ದು, ಅವುಗಳನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯುವ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಪ್ರೇರೇಪಿಸುವಂತೆ ಸ್ವೀಪ್‌ ತಂಡ ಪ್ರಯತ್ನ ಮಾಡಿದೆ. ಆಯೋಗವು ಏಪ್ರಿಲ್ 11ರವರೆಗೆ ಹೊಸ ದಾಖಲಾತಿಗಳಿಗೆ ಅವಕಾಶವನ್ನು ಒದಗಿಸಿತ್ತು. ಆದರೆ, 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ 16,902 ಹೊಸ ಮತದಾರರಿದ್ದರು ಮತ್ತು ಪ್ರಸ್ತುತ 30,056 ಹೊಸ ಮತದಾರರಿದ್ದಾರೆ” ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ | ಬಿಜೆಪಿ ರ‍್ಯಾಲಿ ವೇಳೆ ಬಂದವರೆಲ್ಲ, ತಂದ ಜನ; ಬನವಾಸೆ ರಂಗಸ್ವಾಮಿ ವ್ಯಂಗ್ಯ

“ರಾಜ್ಯದಲ್ಲಿ ಮೊದಲ ಬಾರಿಗೆ ಮತ ಚಲಾಯಿಸುವವರನ್ನು ಉತ್ತೇಜಿಸಲು ಮತಗಟ್ಟೆ ಸ್ಥಾಪಿಸಲು ನಿರ್ಧರಿಸಲಾಗಿದೆ. ಯುವ ಸರ್ಕಾರಿ ಅಧಿಕಾರಿಗಳು ಈ ಮತಗಟ್ಟೆಯನ್ನು ನಿರ್ವಹಿಸಲಿದ್ದಾರೆ. ಜಿಲ್ಲೆಯಲ್ಲಿ ಅನೇಕ ಯುವ ಅಧಿಕಾರಿಗಳಿದ್ದಾರೆ. ಆದ್ದರಿಂದ ನಾವು ಈ ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕಾಗಿ ನಿಯೋಜಿಸಲು ಪ್ರಾರಂಭಿಸಿದ್ದೇವೆ. ಪ್ರತಿ ಮತಗಟ್ಟೆಗೆ ನಾಲ್ಕು ಮಂದಿ ಯುವ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಯುವ ಮತದಾರರನ್ನು ಆಕರ್ಷಿಸಲು ಮತದಾನ ಕೇಂದ್ರವನ್ನು ವಿನ್ಯಾಸಗೊಳಿಸಲಾಗುವುದು. 7 ಮತಗಟ್ಟೆಗಳಲ್ಲಿ ವಿಭಿನ್ನ ಪರಿಕಲ್ಪನೆಗಳನ್ನು ಬಳಸಲಾಗುವುದು” ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದ್ದಾರೆ.

“ಮತದಾನ ಕೇಂದ್ರಗಳಿಗೆ ಪರಿಕಲ್ಪನೆಗಳನ್ನು ಸಿದ್ಧಪಡಿಸಲು ಕಲಾ ಕಾಲೇಜು ಉಪನ್ಯಾಸಕರಿಗೆ ಸೂಚನೆ ನೀಡಲಾಗಿದೆಯೆಂದು ಸ್ವೀಪ್ ಸಮಿತಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿನ್ಯಾಸವನ್ನು ಅಂತಿಮಗೊಳಿಸಿದ ನಂತರ, 7 ಮತಗಟ್ಟೆಗಳನ್ನು ಅದಕ್ಕೆ ಅನುಗುಣವಾಗಿ ಅಲಂಕರಿಸಲಾಗುವುದು” ಎಂದು ಶಿವಾನಂದ ಭಜಂತ್ರಿ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...

ಕೋಲಾರ | ಆಗ್ನೇಯ ಪದವೀಧರರ ಕ್ಷೇತ್ರ : ಕೋಲಾರ ಜಿಲ್ಲೆಯಲ್ಲಿ ಶೇ. 76.99 ರಷ್ಟು ಮತದಾನ : ಚುನಾವಣಾಧಿಕಾರಿ ಎಂ.ಆರ್. ರವಿಕುಮಾರ್

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಕೋಲಾರ ಜಿಲ್ಲೆಯಲ್ಲಿ...

ನಾಡ ದೇವತೆಯ ಬಳಿ ನನ್ನ ಅಳಲು; ವಿವೇಕಾನಂದ ಎಚ್. ಕೆ

ನಾಡ ದೇವಿ ತಾಯಿ ಚಾಮುಂಡೇಶ್ವರಿ, ನಿನಗೆ ತುಂಬು ಹೃದಯದ ಧನ್ಯವಾದಗಳು. ನಿನ್ನ...