ಲೋಕಸಭಾ ಚುನಾವಣೆಯಲ್ಲಿ ಕನಿಷ್ಟ 20 ಸ್ಥಾನ ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದೆ. ಇದರ ಮಧ್ಯೆ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆ ಮಾಡುವವರ ವಿರುದ್ದ ಧಾರವಾಡ ಪೂರ್ವ ಶಾಸಕ ಅಬ್ಬಯ್ಯ ಪ್ರಸಾದ್ ಅಸಮಾಧಾನಗೊಂಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕೆಲವು ಕಾಂಗ್ರೆಸ್ ಸದಸ್ಯರ ವಿರುದ್ಧ ಅಬ್ಬಯ್ಯ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಮಾಡುವವರನ್ನ ನಾನು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಪಾಲಿಕೆಯ ಕೆಲವು ಕಾಂಗ್ರೆಸ್ ಸದಸ್ಯರು ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬುದು ಅಬ್ಬಯ್ಯ ಅವರ ಆಕ್ರೋಶಕ್ಕೆ ಕಾರಣವಾಗಿದೆ. ಪಕ್ಷದಲ್ಲಿ ಇದ್ದು ದ್ರೋಹ ಮಾಡಿದವರನ್ನು ನಾನು ಕ್ಷಮಿಸುವುದಿಲ್ಲ. ಅವರನ್ನು ನಾನು ಪಕ್ಷದಲ್ಲಿ ಉಳಿಸಿಕೊಳ್ಳುವದಿಲ್ಲ ಎಂದು ಶಾಸಕ ಅಬ್ಬಯ್ಯ ಗುಡುಗಿದ್ದಾರೆ.
ಜಗದೀಶ್ ಶೆಟ್ಟರ್‌ಗೆ ಕ್ಷೇತ್ರದಲ್ಲಿ ಕೆಲವರು ಮೋಸ ಮಾಡಿದ್ದಾರೆ. ನನ್ನ ಕ್ಷೇತ್ರದಲ್ಲಿ ಕೆಲವರು ಉಂಡ ಮನೆಗೆ ಎರಡು ಬಗೆದಿದ್ದಾರೆ. ಅಂತವರು ಪಕ್ಷದಲ್ಲಿ ಇರುವುದಕ್ಕೆ ನಾನು ಬಿಡಲ್ಲ. ನಮ್ಮ ಪಕ್ಷದಲ್ಲಿದ್ದು ದ್ರೋಹ ಮಾಡಿದರೆ, ನಿಮ್ಮ ದಾರಿ ನಿಮಗೆ. ಪಕ್ಷದ ಸಿದ್ದಾಂತದ ಅಡಿಯಲ್ಲಿ ಕೆಲಸ ಮಾಡಬೇಕು. ನಮ್ಮ ವ್ಯಯಕ್ತಿಕ ಸ್ನೇಹ ಬೇರೆ. ಪಕ್ಷಕ್ಕೆ ದ್ರೋಹ ಮಾಡಿದ್ರೆ ನಾನು ಸಹಿಸುವುದಿಲ್ಲ ಎಂದು ಮಾದ್ಯಮಗಳ ಎದುರು ಖಾರವಾಗಿ ಹೇಳಿದ್ದಾರೆ.