ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಮತ್ತು ಗ್ರಾಮೀಣ ಕೂಲಿಕಾರರಿಗೆ ಸರಿಯಾದ ಮಾಹಿತಿ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ ವತಿಯಿಂದ ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.
ಈ ವೇಳೆ ಜಿಲ್ಲೆಯ ವಿವಿಧ ತಾಲೂಕು ಮತ್ತು ಹಳ್ಳಿಗಳ ಕೂಲಿ ಕಾರ್ಮಿಕರು ಮಾತನಾಡಿ, ಎಂ.ಆರ್.ಇ.ಜಿ.ಎ ಕ್ರಿಯಾ ಯೋಜನೆ ತಯಾರಿಸಲು ಜನರ ಬೇಡಿಕೆಗಳನ್ನು ಕ್ರಿಯಾ ಯೋಜನೆಯಲ್ಲಿ ಸೇರಿಸಲು ಜನರ ಆವಾಲುಗಳನ್ನು ಸ್ವೀಕರಿಸಲು ತಪ್ಪದೇ ಗ್ರಾಮ ಸಭೆ ಮಾಡುವ ಕ್ರಿಯಾ ಯೋಜನೆ ತಯಾರಿಸುವಂತೆ ಮಾಡಬೇಕು. ಆದರೆ ಪ್ರಸ್ತುತ ಅನೇಕ ಹಳ್ಳಿಗಳಲ್ಲಿ ವಾರ್ಡ್ ಸಭೆ, ಗ್ರಾಮ ಸಭೆಗಳು ನಡೆಯುತ್ತಿಲ್ಲ.
ಕೆಲವೊಂದಿಷ್ಟು ಗ್ರಾಮಗಳಲ್ಲಿ ಶೌಚಾಲಯ ಬಿಲ್ಲುಗಳು ಆಗುವುದಿಲ್ಲ. ಅಧಿಕಾರಿಗಳು ಗ್ರಾಮ ಪಂಚಾಯಿತಿಗೆ ಕಾರ್ಮಿಕರು ಹೋದಾಗ ಅವರಿಗೆ ಸರಿಯಾಗಿ ಸ್ಪಂದಿಸದೆ ದಾರಿ ತಪ್ಪಿಸುವ ಕೆಲಸ ಮಾಡುತ್ತ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಈ ಕುರಿತು ಹಲವು ಬಾರಿ ಮನವಿಯನ್ನು ಮಾಡಿಕೊಂಡಿದ್ದೇವೆ. ಇನ್ನಾದರೂ ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕು. ಈ ಎಲ್ಲ ಸಮಸ್ಯೆಗಳನ್ನು 15 ದಿನದೊಳಗಾಗಿ ಬಗೆಹರಿಸದಿದ್ದರೆ ಎಲ್ಲಾ ಪಂಚಾಯಿತಿ ಕಾರ್ಯಾಲಯದ ಮುಂದೆ ಗ್ರಾಮೀಣ ಕೂಲಿಕಾರರೆಲ್ಲ ಧರಣಿ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.