ಕೋಲಾರ | ಕಾಂಗ್ರೆಸ್‌ ಅಭ್ಯರ್ಥಿ ಕೊತ್ತೂರು ಮಂಜುನಾಥ್‌ ವಿರುದ್ಧ ಸ್ಥಳೀಯ ಮುಖಂಡರ ಅಸಮಾಧಾನ

Date:

  • ಹಿಂದೆ ಬಿಜೆಪಿಯನ್ನು ನೇರವಾಗಿ ಬೆಂಬಲಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ
  • ಯಾರನ್ನು ಬೆಂಬಲಿಸಬೇಕೆಂಬ ಗೊಂದಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರು

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ನೇರವಾಗಿ ಬೆಂಬಲಿಸಿದ ಕೊತ್ತೂರು ಮಂಜುನಾಥ್‌ ಅವರಿಗೆ ಕೋಲಾರದಿಂದ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್‌ನ ಎಷ್ಟೋ ನಿಷ್ಠಾವಂತ ಕಾರ್ಯಕರ್ತರು ಯಾರನ್ನು ಬೆಂಬಲಿಸಬೇಕು ಎಂಬ ಗೊಂದಲದಲ್ಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರೀಪುಲ್ಲಾ ಖಾನ್ ಹೇಳಿದ್ದಾರೆ.

ಕೋಲಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರಾದ ನಾವು ಬೇರೆ ಪಕ್ಷಗಳನ್ನು ಬೆಂಬಲಿಸಿ ಬಂದರೆ, ನಮಗೆ ಕಾಂಗ್ರೆಸ್ ಟಿಕೆಟ್ ಕೊಡುತ್ತದೆಯೇ. ಈ ಬಗ್ಗೆ ಹೈಕಮಾಂಡ್ ಉತ್ತರ ಕೊಡಬೇಕು” ಎಂದು ಆಗ್ರಹಿಸಿದ್ದಾರೆ.

“ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಮತ್ತು ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಯಾವುದೇ ಸ್ಪಷ್ಟವಾದ ಸೂಚನೆ ನೀಡಲ್ಲ. ಅದರಿಂದ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು ಇನ್ನೂ ಗೊಂದಲದಲ್ಲಿದ್ದು, ಮುಸ್ಲಿಂ ಸಮುದಾಯವು ಮುಂದೆ ಚರ್ಚೆ ಮಾಡಿ ಜೆಡಿಎಸ್, ಬಿಜೆಪಿ ಅಥವಾ ನೋಟಾಗೆ ಮತ ಹಾಕಲು ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

“ಪ್ರತಿ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್ ಶಕ್ತಿಯಾಗಿದ್ದರೂ, ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಸ್ಪರ್ಧೆ ಮಾಡಲು ಕಾಂಗ್ರೆಸ್ ಅವಕಾಶ ನೀಡದೆ ನಿರ್ಲಕ್ಷ್ಯ ಮಾಡಿದೆ. ಮುಸ್ಲಿಂ ಸಮುದಾಯವನ್ನು ಕೇವಲ ಓಟು ಬ್ಯಾಂಕ್‌ಗಾಗಿ ಬಳಸಿಕೊಳ್ಳಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಮೂಲ ಸೌಕರ್ಯಕ್ಕೆ ಆಗ್ರಹಿಸಿ ಅರೆಬೆತ್ತಲೆ ಪ್ರತಿಭಟನೆ; ಜಿಲ್ಲಾಡಳಿತದ ವಿರುದ್ಧ ಕಿಡಿ

“ಇತ್ತೀಚೆಗೆ ಕೊತ್ತೂರು ಮಂಜುನಾಥ್, ‘ಬಿಜೆಪಿ ಸಂಸದರನ್ನು ಗೆಲ್ಲಿಸಿದ್ದು ನಾನೇ’ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ, ಅದು ನನ್ನ ತಾಕತ್ತು ಎಂದಿದ್ದಾರೆ. ಮುಂದೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ತಾಕತ್ತು ಏನೆಂಬುದನ್ನು ತೋರಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ಮುಖಂಡರಾದ ರಿಯಾಜ್ ಪಾಷ, ಮಹಮದ್, ಮೆಹಬೂಬ್, ನವಾಜ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಜಾತಿಗಣತಿ ವರದಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಧರಣಿ

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ, ದಲಿತ ಹಿಂದುಳಿದ...

ತುಮಕೂರು | ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಪುನರಾರಂಭ ವಿರೋಧಿಸಿ ಪ್ರತಿಭಟನೆ

ಹೇಮಾವತಿ ಎಕ್ಸ್  ಪ್ರೆಸ್ ಕೆನಾಲ್ ಕಾಮಗಾರಿ ಪುನರಾರಂಭವನ್ನು ವಿರೋಧಿಸಿ ಇಂದು ಮಾಜಿ...

ಯಾದಗಿರಿ | ಜಾತಿಗಣತಿ ವರದಿ ಅಂಗೀಕರಿಸಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಪ್ರತಿಭಟನೆ

ಅಕ್ಟೋಬರ್ 25ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ...

ಕಲಬುರಗಿ | ಮಹಾನ್ ಕ್ರಾಂತಿಕಾರಿ ಅಶ್ಫಾಕುಲ್ಲಾ ಖಾನ್‌ರವರ 125ನೇ ಜನ್ಮದಿನಾಚರಣೆ

ಕಲಬುರಗಿ ಜಿಲ್ಲೆಯ ಶಾಹಬಾದ್ ತಾಲೂಕಿನ ಎಐಡಿವೈಒ ಸ್ಥಳೀಯ ಸಮಿತಿಯು ನಗರದ ಬಸವೇಶ್ವರ...