ಆಯೋಗಕ್ಕೆ ದೇಣಿಗೆಯ ದೂರು ನೀಡಿದ ಕರಂದ್ಲಾಜೆ; ನಾಮಪತ್ರ ತಿರಸ್ಕಾರದ ಭೀತಿಯಲ್ಲಿ ಕಾಂಗ್ರೆಸ್ಸಿಗರು!

Date:

  • ಕಾಂಗ್ರೆಸ್ಸಿಗರ ನಾಮಪತ್ರ ತಿರಸ್ಕಾರ ಮಾಡಲು ಆಯೋಗಕ್ಕೆ ಬಿಜೆಪಿ ಮನವಿ
  • ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೇಣಿಗೆಯ ದೂರು ನೀಡಿದ ಕರಂದ್ಲಾಜೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಎದುರಾಗಿದ್ದ ನಾಮಪತ್ರ ತಿರಸ್ಕಾರದ ಭೀತಿ ಈಗ ಕಾಂಗ್ರೆಸ್ ಅಭ್ಯರ್ಥಿಗಳೆಲ್ಲರಿಗೂ ಎದುರಾಗಿದೆ.

ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ನೀಡಿರುವ ದೂರು ಇಂತಹದ್ದೊಂದು ಆತಂಕವನ್ನು ಸೃಷ್ಟಿಸಿದೆ.

ದೇಶದಲ್ಲಿ ಯಾವುದೇ ಪಕ್ಷದಿಂದ ತನ್ನ ಅಭ್ಯರ್ಥಿಗಳಿಂದ ಹಣವನ್ನು ಪಡೆದು ಬಿ ಫಾರಂ ನೀಡುವಂತಿಲ್ಲ. ಆದರೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಈ ಕೆಲಸ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚುನಾವಣೆಗೆ ನಿಂತ ಪಕ್ಷದ ಎಲ್ಲ ಅಭ್ಯರ್ಥಿಗಳಿಂದ ತಲಾ 2 ಲಕ್ಷ ರೂ. ಹಣವನ್ನು ಪಡೆದು ಬಿ ಫಾರಂ ವಿತರಣೆ ಮಾಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರು ಸಲ್ಲಿಸಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ಹಣವನ್ನ ತೆಗೆದುಕೊಂಡು ಅಪ್ಲಿಕೇಶನ್ ಕೊಟ್ಟು, ಬಿ ಫಾರಂ ವಿತರಿಸಿದೆ. ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬಿ ಫಾರಂ ಕೊಡಲು ನಿಯೋಜಿತರಾಗಿದ್ದರು.

ಯಾರಿಗೆ ಕಾಂಗ್ರೆಸ್ ಪಕ್ಷದಿಂದ ಬಿ ಫಾರಂ ಬೇಕು, ಅವರು ಅರ್ಜಿ ಹಾಕಬೇಕು ಎಂದು ಹೇಳಿದ್ದರು. ಹಾಗೆಯೇ ಇದರ ವಿತರಣೆ ವೇಳೆ ಪ್ರತಿ ಅರ್ಜಿಗೆ 2ಲಕ್ಷ ಹಣ ಪಾವತಿಸಿಕೊಂಡಿದ್ದಾರೆ.

ಇಲ್ಲಿಯವರೆಗೆ ಆ ಪಕ್ಷ 1,350 ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿಗಳನ್ನು ಸ್ವೀಕರಿಸಿದೆ. ಇದು ಜನಪ್ರತಿನಿಧಿ ಕಾಯ್ದೆ 171ಡಿ ಪ್ರಕಾರ ಅಪರಾಧ. ಈ ಕಾಯ್ದೆಯನ್ನು ಮುಂದಿಟ್ಟುಕೊಂಡು ನಾವು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದೇವೆ ಎಂದು ಕೇಂದ್ರ ಸಚಿವೆ ಮಾಹಿತಿ ನೀಡಿದರು.

ಕಾಂಗ್ರೆಸ್ ಪಕ್ಷಾಧ್ಯಕ್ಷರೇ ಹೇಳಿಕೊಂಡಿರುವಂತೆ ಅರ್ಜಿ ವಿತರಣೆಯಿಂದ 23 ಕೋಟಿ ಹಣ ಸಂಗ್ರಹ ಆಗಿದೆ. ಕಾನೂನಾತ್ಮಕವಾಗಿ ಇದು ತಪ್ಪಾಗಲಿದೆ. ಯಾರು ಹಣ ಕೊಟ್ಟು ಬಿ ಫಾರಂ ಪಡೆದಿರುವುದು ಹಣಕ್ಕೆ ಬಿ ಫಾರಂ ವಿತರಿಸುವುದೂ ಅಪರಾಧವಾಗಲಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ 224 ಅಭ್ಯರ್ಥಿಗಳ ಬಿ ಫಾರಂಗಳನ್ನು ಪೀಪಲ್ ರೆಪ್ರೆಸೆಂಟೇಟಿವ್ಸ್ ಕಾಯ್ದೆ ಪ್ರಕಾರ ತಿರಸ್ಕಾರ ಮಾಡುವಂತೆ ಮನವಿ ಮಾಡಿದ್ದೇವೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಈ ಸುದ್ದಿ ಓದಿದ್ದೀರಾ?:ಡಿಕೆಶಿ ನಾಮಪತ್ರ ಅಂಗೀಕಾರ; ಕನಕಪುರದಲ್ಲಿ ಡಿ ಕೆ ಶಿವಕುಮಾರ್‌ ಸ್ಪರ್ಧೆ ಖಚಿತ

ಕಾಂಗ್ರೆಸ್ ಹಣ ಪಡೆದಿದ್ದೇಕೆ?:

ಸುಸಜ್ಜಿತ ಕಾಂಗ್ರೆಸ್ ಭವನ ನಿರ್ಮಾಣದ ಸಲುವಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿತರು ಅರ್ಜಿ ಪಡೆಯಲು ತಲಾ 1 ಸಾವಿರ ರೂಪಾಯಿ ದರ ನಿಗದಿ ಮಾಡಿದ್ದರು.

ಅರ್ಜಿ ಸಲ್ಲಿಕೆ ವೇಳೆ ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ತಲಾ 2 ಲಕ್ಷ ರೂಪಾಯಿ ದೇಣಿಗೆ ಕೊಡಲು ಸೂಚಿಸಿದ್ದರು. ಅದರಂತೆ ಅಭ್ಯರ್ಥಿಗಳೆಲ್ಲ ದೇಣಿಗೆ ನೀಡಿ ಭಿ ಪಾರಂ ಪಡೆದುಕೊಂಡಿದ್ದರು.

ಕಾಂಗ್ರೆಸ್‌ನ ಈ ದೇಣಿಗೆ ಸಂಗ್ರಹ ವಿಚಾರವೇ ಬಿಜೆಪಿ ಪಾಲಿನ ಚುನಾವಣಾ ಅಸ್ತ್ರವಾಗಿ ಬದಲಾಗಿದೆ. ವಿಪಕ್ಷದ ಮೇಲೆ ಪ್ರಯೋಗಿಸಿರುವ ಕಮಲ ಪಕ್ಷದ ದೂರಿನ ಬಾಣಕ್ಕೆ ಚುನಾವಣಾ ಆಯೋಗ ಯಾವ ಉತ್ತರ ನೀಡುತ್ತದೆ ಎನ್ನುವುದೇ ಈಗ ಕುತೂಹಲದ ಸಂಗತಿ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ʼಈ ದಿನʼ ಸಮೀಕ್ಷೆ | ನಂಬಿಕೆ ಉಳಿಸಿಕೊಂಡ ಕಾಂಗ್ರೆಸ್‌; ʼಗ್ಯಾರಂಟಿʼ ಎದುರು ಮಂಕಾದ ಮೋದಿ ಯೋಜನೆಗಳು

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಪಂಚ ಗ್ಯಾರಂಟಿಯನ್ನು ವರ್ಷದೊಳಗೆ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....