ಭಜರಂಗ ದಳ ನಿಷೇಧ ಕೈಬಿಡುವ ಪ್ರಶ್ನೆಯೇ ಇಲ್ಲ: ಡಿ ಕೆ ಶಿವಕುಮಾರ್

Date:

Advertisements

ಕಾಂಗ್ರೆಸ್ಸಿಗೆ ತಾಕತ್ತಿದ್ದರೆ ʼಭಜರಂಗ ದಳʼ ಸಂಘಟನೆಯನ್ನು ನಿಷೇಧಿಸಲಿ ಎಂದು ಬಿಜೆಪಿ ಸವಾಲು ಹಾಕಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಸವಾಲು ಸ್ವೀಕರಿಸಿ, “ನಮ್ಮ ಪ್ರಣಾಳಿಕೆಯಿಂದ ಭಜರಂಗ ದಳ ನಿಷೇಧ ಕೈ ಬಿಡುವ ಪ್ರಶ್ನೆಯೇ ಇಲ್ಲ” ಎಂದು ಎಚ್ಚರಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಶೋಭಾ ಕರಂದ್ಲಾಜೆ ಸುದ್ದಿಗೋಷ್ಠಿ ಕರೆದು, ಕಾಂಗ್ರೆಸ್‌ ಪ್ರಣಾಳಿಕೆ ವಿಚಾರವನ್ನು ಟೀಕಿಸಿ, ಕಾಂಗ್ರೆಸ್ಸಿಗೆ ತಾಕತ್ತಿದ್ದರೆ ಭಜರಂಗ ದಳ ನಿಷೇಧಿಸಲಿ ಎಂದು ಸವಾಲು ಹಾಕಿದ್ದರು.

ಬುಧವಾರ ಭಜರಂಗ ದಳ ನಿಷೇಧ ವಿಚಾರವಾಗಿ ಬಿಜೆಪಿ ನಾಯಕರಿಗೆ ಡಿ ಕೆ ಶಿವಕುಮಾರ್‌ ತಿರುಗೇಟು ನೀಡಿ, “ನಾನೂ ಆಂಜನೇಯನ ಭಕ್ತ, ಆದರೆ, ಈ ಭಜರಂಗ ದಳಕ್ಕೂ ಹನುಮನಿಗೂ ಏನು ಸಂಬಂಧ? ಯಾವುದೇ ಕಾರಣಕ್ಕೂ ಈ ನಿರ್ಧಾರದಿಂದ ನಾವು ಹಿಂದೆ ಸರಿಯಲ್ಲ, ಅಧಿಕಾರಕ್ಕೆ ಬರುತ್ತಿದ್ದಂತೆ ಭಜರಂಗ ದಳ ನಿಷೇಧ ಮಾಡುತ್ತೇವೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ಎಂದರೆ ಬಿಜೆಪಿಗೆ ಯಾಕೆ ನೋವು: ಸಿದ್ದರಾಮಯ್ಯ

“ಭಜರಂಗ ದಳಕ್ಕೂ ಹನುಮಂತನಿಗೂ ಏನು ಸಂಬಂಧ? ಹನುಮಂತನೇ ಬೇರೆ, ಭಜರಂಗ ದಳವೇ ಬೇರೆ. ಕಾನೂನು ಸುವ್ಯವಸ್ಥೆ ಹಾಳು ಮಾಡುವ ಕೆಲಸ ಭಜರಂಗ ದಳ ಮಾಡುತ್ತಿದೆ. ನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದಾರೆ. ನಾವು ಏನು ಹೇಳಿದ್ದೇವೋ ಅದನ್ನು ಸರಿಯಾಗಿ ಓದಿ. ಆಂಜನೇಯನ ಹೆಸರಿಟ್ಟುಕೊಂಡು ಭಜರಂಗ ದಳಕ್ಕೂ ಲಿಂಕ್‌ ಮಾಡಿದ್ರೆ ಹೇಗೆ” ಎಂದು ಪ್ರಶ್ನಿಸಿದರು.

“ನಾವೆಲ್ಲ ಆಂಜನೇಯನ ಪ್ರವೃತ್ತಿಯವರು. ಸುಮ್ನೆ ಭಜರಂಗಿ ಅಂತ ಕ್ಯಾಂಪೇನ್‌ ಮಾಡೋದಲ್ಲ. ಹೊಟ್ಟೆಗೆ ಏನು ಕೊಟ್ರಿ ಅನ್ನೋದು ಮುಖ್ಯ. ಉದ್ಯೋಗ ಏನು ಕೊಟ್ಟರು? ಹೂಡಿಕೆ ಏನು ಮಾಡಿದ್ದಾರೆ? ನಾವು ಯಾವುದೇ ಕಾರಣಕ್ಕೂ ನಮ್ಮ ಪ್ರಣಾಳಿಕೆಯಿಂದ ಭಜರಂಗದಳ ನಿಷೇಧ ಪ್ರಸ್ತಾಪ ಹಿಂಪಡೆಯುವುದಿಲ್ಲ” ಎಂದು ಡಿ ಕೆ ಶಿವಕುಮಾರ್ ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X