ಆದಿಚುಂಚನಗಿರಿ ಮಠಕ್ಕೆ ಡಿ ಕೆ ಶಿವಕುಮಾರ್ ಭೇಟಿ

Date:

  • ಬಾಬುರಾವ್‌ ಚಿಂಚನಸೂರ್ ಕಾಂಗ್ರೆಸ್ ಸೇರುವ ಸಾಧ್ಯತೆ
  • ನಾನು ಸಮುದಾಯದ ಪರ ಎಂದ ಡಿ ಕೆ ಶಿವಕುಮಾರ್

ಉರಿಗೌಡ – ದೊಡ್ಡ ನಂಜೇಗೌಡ ವಿಚಾರದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದರು. ಈ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಅಖಾಡ ರಂಗೇರಿದೆ. ಟಿಪ್ಪು ಸುಲ್ತಾನನನ್ನು ಕೊಂದಿದ್ದು ಉರಿಗೌಡ ಮತ್ತು ನಂಜೇಗೌಡ ಎಂದು ವಾದಿಸುವ ಮೂಲಕ ಬಿಜೆಪಿ ಒಕ್ಕಲಿಗರಲ್ಲಿ ದ್ವೇಷಾಸೂಯೆಗಳನ್ನು ಬಿತ್ತಿ ಮತಬೇಟೆಗೆ ಯತ್ನಿಸಿತ್ತು. ಆದರೆ, ನಿರ್ಮಲಾನಂದನಾಥ ಸ್ವಾಮೀಜಿ ಮಧ್ಯಪ್ರವೇಶಿಸಿ ಒಕ್ಕಲಿಗರ ವಿಚಾರದಲ್ಲಿ ಸುಳ್ಳು ಸುದ್ದಿ ಹರಡದಂತೆ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಡಿ ಕೆ ಶಿವಕುಮಾರ್, “ಇತಿಹಾಸವನ್ನು ತಿದ್ದುವ ಮತ್ತು ಸಮಾಜಕ್ಕೆ ತಪ್ಪು ಸಂದೇಶವನ್ನು ನೀಡುವವರ ವಿರುದ್ಧ ಹೋರಾಟ ನಡೆಸಬೇಕು” ಎಂದು ಸ್ವಾಮೀಜಿಗೆ ಮನವಿ ಮಾಡಿಕೊಂಡಿದ್ದರು.

ಈ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ನಾಗಮಂಗಲ ಸಮೀಪದ ಆದಿಚುಂಚನಗಿರಿ ಮಠಕ್ಕೆ ಡಿಕೆ ಶಿವಕುಮಾರ್ ಭೇಟಿ ನೀಡಿ, ಕಾಲಭೈರೇಶ್ವರನಿಗೆ ಪೂಜೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ನಾಯಕನ ಮಠ ಭೇಟಿ ನಾನಾ ಕುತೂಹಲಗಳನ್ನು ಹುಟ್ಟು ಹಾಕಿದೆ.

ಆದಿಚುಂಚನಗಿರಿ ಮಠದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ಅಶ್ವತ್ಥನಾರಾಯಣ ಅವರೇ ಉರಿಗೌಡ, ಸಿ.ಟಿ ರವಿಯೇ ನಂಜೇಗೌಡ. ಒಕ್ಕಲಿಗರನ್ನು ಕೆಟ್ಟದಾಗಿ ಬಿಂಬಿಸಲು ಬಿಜೆಪಿ ನಾಯಕರು ಈ ಪಾತ್ರಗಳನ್ನು ಸೃಷ್ಟಿಸಿದ್ದಾರೆ. ಯಾರೇ ಆಗಲಿ ಯಾವೊಂದು ಸಮುದಾಯಕ್ಕೂ ಸಹ ಧಕ್ಕೆ ತರುವಂತಹ ಕೆಲಸ ಮಾಡಬಾರದು. ಈ ಕುರಿತು ಈಗಾಗಲೇ ನಿರ್ಮಲಾನಂದ ಶ್ರೀಗಳು ಮಾತನಾಡಿದ್ದಾರೆ. ಸ್ವಾಮೀಜಿಗಳ ಎಚ್ಚರಿಕೆ ನಂತರ ಮುನಿರತ್ನ ಅವರು ಸಹ ಸಿನಿಮಾ ನಿರ್ಮಾಣ ಮಾಡುವ ವಿಚಾರದಿಂದ ಹಿಂದೆ ಸರಿದಿದ್ದಾರೆ” ಎಂದರು.

“ಉರಿಗೌಡ-ನಂಜೇಗೌಡ ವಿಚಾರದಲ್ಲಿ ನಾನು ಪಕ್ಷ ಬಿಟ್ಟು ಸಮುದಾಯದ ವ್ಯಕ್ತಿಯಾಗಿ ಹೋರಾಟ ಮಾಡುತ್ತೇನೆ” ಎಂದು ಡಿ.ಕೆ ಶಿವಕುಮಾರ್ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ವಿಧಾನ ಪರಿಷತ್ ಸ್ಥಾನಕ್ಕೆ ಚಿಂಚನಸೂರ್ ರಾಜೀನಾಮೆ

ಗುರುಮಠಕಲ್ ಮತಕ್ಷೇತ್ರದ ಬಿಜೆಪಿ ನಾಯಕ ಬಾಬುರಾವ್ ಚಿಂಚನಸೂರ್ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ಅಂಗೀಕರಿಸಿದ್ದಾರೆ.

ಮೊದಲು ಕಾಂಗ್ರೆಸ್‌ನಲ್ಲಿದ್ದ ಬಾಬುರಾವ್ ಚಿಂಚನಸೂರ್ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಬಿಜೆಪಿ ಸೇರಿದ್ದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅವರು ಬಿಜೆಪಿ ಟಿಕೆಟ್‌ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಆದರೆ, ವಿಧಾನ ಪರಿಷತ್ ಸ್ಥಾನದ ನೆಪವೊಡ್ಡಿರುವ ಬಿಜೆಪಿ ಟಿಕೆಟ್‌ ನೀಡಲು ಹಿಂದೇಟು ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು ಮೂಲ ಪಕ್ಷಕ್ಕೆ ಮರಳುವ ಸಿದ್ಧತೆಯಲ್ಲಿದ್ದಾರೆ ಎನ್ನಲಾಗುತ್ತಿದೆ.

ಈ ಕುರಿತು ಆದಿಚುಂಚನಗಿರಿ ಮಠದಲ್ಲಿ ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್, “ನಾನು ಬಾಬುರಾವ್ ಚಿಂಚನಸೂರ್ ಅವರ ಜೊತೆಗೆ ಚರ್ಚಿಸಿದ್ದೇನೆ. ಚಿಂಚನಸೂರ್ ಪಕ್ಷದ ಆಸ್ತಿ ಆಗುತ್ತಾರೆ ಎನ್ನುವ ನಂಬಿಕೆ ಇದೆ. ಈ ಹಿಂದೆಯೂ ಚಿಂಚನಸೂರ್ ಅವರಿಗೆ ಕಾಂಗ್ರೆಸ್‌ ಎಲ್ಲ ಸ್ಥಾನಮಾನ ನೀಡಿದೆ” ಎಂದು ಹೇಳಿದ್ದಾರೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿಗ್ಗಾವಿ | ವಿದ್ಯಾರ್ಥಿ ನಿಲಯದ ಬಾಡಿಗೆ ಕಟ್ಟಡ ಸ್ಥಳಾಂತರಕ್ಕೆ ಒತ್ತಾಯ

ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ಬಾಡಿಗೆ...

ಚಿಕ್ಕಬಳ್ಳಾಪುರ | ಅಂತರ್ಜಾತಿ ಪ್ರೇಮಿಗಳು ಕಾಣೆ; ಸಹೋದರನ ಆಟೋಗೆ ಬೆಂಕಿ ಹಚ್ಚಿದ ಸವರ್ಣೀಯರು

ಅಂತರ್ಜಾತಿಯ ಯುವಕ ತಮ್ಮ ಮಗಳನ್ನು ಪ್ರೀತಿಸಿ ಕರೆದುಕೊಂಡು ಹೋಗಿದ್ದಾನೆಂದು ಕುಪಿತಗೊಂಡ ಯುವತಿಯ...

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...

ಬೆಳಗಾವಿ | ಇಂಗ್ಲಿಷ್‌ ಬ್ಯಾನರ್ ಹರಿದು ಕರವೇ ಕಾರ್ಯಕರ್ತರ ಆಕ್ರೋಶ; ವಶಕ್ಕೆ ಪಡೆದ ಪೊಲೀಸರು

ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 4ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮುನ್ನ...