ಚುನಾವಣೆ 2023 | ಕೊನೆ ಕ್ಷಣದಲ್ಲಿ ಕನಕಪುರದಿಂದ ಡಿಕೆ ಸುರೇಶ್‌ ನಾಮಪತ್ರ ಸಲ್ಲಿಕೆ

Date:

ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಶಿವಕುಮಾರ್‌ ಅವರು ರಾಜ್ಯ ವಿಧಾನಸಭಾ ಚುನಾವಣೆಗೆ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಲು ಗುರುವಾರ ನಾಮಪತ್ರ ಸಲ್ಲಿಸಿದರು.

- Advertisement -

ಕೆಪಿಸಿಸಿ ಅಧ್ಯಕ್ಷ, ಕಾಂಗ್ರೆಸ್‌ನ ಪ್ರಬಲ ನಾಯಕ ಡಿ ಕೆ ಶಿವಕುಮಾರ್‌ ಅವರು ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದರು. ಈಗ ಅವರ ಸಹೋದರ ಡಿ ಕೆ ಸುರೇಶ್‌ ಕೂಡ ನಾಮಪತ್ರ ಸಲ್ಲಿಸಿ ಅಚ್ಚರಿ ಹುಟ್ಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಕನಕಪುರ ಕ್ಷೇತ್ರವನ್ನು ಡಿ ಕೆ ಶಿವಕುಮಾರ್‌ ಪ್ರತಿನಿಧಿಸುತ್ತಾ ಬಂದಿದ್ದಾರೆ. ಏಪ್ರಿಲ್ 17ರಂದು ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದರು.

ಡಿ ಕೆ ಸುರೇಶ್ ಸಹ ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಡಿ ಕೆ ಸುರೇಶ್‌ ನಾಮಪತ್ರ ಸಲ್ಲಿಸಿದ್ದೇಕೆ?

ಡಿ ಕೆ ಶಿವಕುಮಾರ್​ ಅವರು ಸಲ್ಲಿಸಿರುವ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಡಿ ಕೆ ಸುರೇಶ್ ಸಹ ಕನಕಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಂತೋಷ್‌ಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಡಿ ಕೆ ಸುರೇಶ್ ಅವರು ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿತ್ತು. ಆರ್ ಅಶೊಕ್ ಅವರನ್ನು ಬಿಜೆಪಿ ಕನಕಪುರದಿಂದ ಕಣಕ್ಕಿಳಿಸಿದ್ದು, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್​ ಸಹ ಅಶೋಕ್​ ವಿರುದ್ಧ ಡಿ ಕೆ ಸುರೇಶ್ ಅವರನ್ನು ಪದ್ಮನಾಭನಗರದಲ್ಲಿ ಸ್ಪರ್ಧಿಸುವ ಬಗ್ಗೆ ಚರ್ಚೆ ನಡೆಸಿತ್ತು. ಆದರೆ, ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ರಘುನಾಥ್ ನಾಯ್ಡು ಅವರು ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಕುತಂತ್ರ: ಡಿ ಕೆ ಸುರೇಶ್

ಡಿ ಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಸರ್ಕಾರ ಕುತಂತ್ರ ನಡೆಸಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ನಾನು ಸಹ ಕನಕಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಕನಕಪುರದಲ್ಲಿ ಗುರುವಾರ ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳಿಗೆ ಡಿ ಕೆ ಸುರೇಶ್‌ ತಿಳಿಸಿದರು.

“ಚುನಾವಣಾ ಆಯೋಗದ ಅಧಿಕಾರಿಗಳೂ ಸಹ ಸರ್ಕಾರಿ ಅಧಿಕಾರಿಗಳೇ ಆಗಿದ್ದಾರೆ‌. ಅವರು ಸರ್ಕಾರದ ಸೂಚನೆಯಂತೆ ಏನು ಬೇಕಾದರೂ ಮಾಡಬಹುದು. ಹೀಗಾಗಿ ನಾವು ಸಹ ಎಚ್ಚರಿಕೆ ಇಟ್ಟಿದ್ದೇವೆ. ಮುಂದಿನ ಬೆಳವಣಿಗೆಗಳನ್ನು ನೀವೇ ಕಾದು ನೋಡಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...