ಧರ್ಮಸ್ಥಳದಲ್ಲಿ ಡಿಕೆಶಿ ಹೆಲಿಕಾಪ್ಟರ್ ತಪಾಸಣೆ : ಚುನಾವಣಾಧಿಕಾರಿ ಜೊತೆ ಪೈಲೆಟ್ ವಾಗ್ವಾದ

Date:

Advertisements
  • ಮಂಜನಾಥನ ದರ್ಶನಕ್ಕೆ ಬಂದಿದ್ದ ಡಿಕೆಶಿ ಕುಟುಂಬ
  • ಹೆಲಿಕಾಪ್ಟರ್ ಪರಿಶೀಲಿಸಿದ ಚುನಾವಣಾಧಿಕಾರಿಗಳು

ಕರಾವಳಿ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸಿದ್ದರಾಗುತ್ತಿದ್ದಾರೆ.

ಈ ಕಾರ್ಯಕ್ರಮ ಆರಂಭಕ್ಕೂ ಮುನ್ನ ಶಿವಕುಮಾರ್ ಕುಟುಂಬ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿ ದರ್ಶನ ಪಡೆದುಕೊಂಡಿತು.

ಡಿಕೆಶಿ ಕುಟುಂಬ ದೇವಸ್ಥಾನಕ್ಕೆ ತೆರಳಿದ್ದ ಸಂದರ್ಭದಲ್ಲಿ ಚುನಾವಣಾಧಿಕಾರಿ ಹಾಗೂ ಕೆಪಿಸಿಸಿ ಅಧ್ಯಕ್ಷರನ್ನು ಕರೆತಂದಿದ್ದ ಹೆಲಿಕಾಪ್ಟರ್ ಪೈಲೆಟ್ ನಡುವೆ ಮಾತಿನ ಚಕಮಕಿಯಾಗಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

Advertisements

ಇಂತಹ ಸನ್ನಿವೇಶ ಸೃಷ್ಟಿಗೆ ಕಾರಣವಾಗಿದ್ದು ಡಿಕೆ ಶಿವಕುಮಾರ್ ಆಗಮಿಸಿದ್ದ ಚಾಪರ್ ಪರಿಶೀಲನೆಗೆ ಚುನಾವಣಾಧಿಕಾರಿಗಳು ಮುಂದಾಗಿದ್ದು.

ಧರ್ಮಸ್ಥಳಕ್ಕೆ ಶಿವಕುಮಾರ್ ಚಾಪರ್ ನಲ್ಲಿ ಬಂದಿಳಿಯವ ಅಧಿಕೃತ ಮಾಹಿತಿ ಹಿನ್ನೆಲೆಯಲ್ಲಿ ಹೆಲಿಪ್ಯಾಡ್ ಗೆ ಬಂದಿಳಿದ ಚುನಾವಣಾಧಿಕಾರಿಗಳು ನೀತಿ ಸಂಹಿತೆಯಂತೆ ಚಾಪರ್ ಪರಿಶೀಲನೆಗೆ ಮುಂದಾದರು.

ಆದರೆ ಇದು ಖಾಸಗಿ ಹೆಲಿಕಾಪ್ಟರ್, ಇದನ್ನು ತಪಾಸಣೆ ಮಾಡಲು ಅವಕಾಶವಿಲ್ಲ ಎಂದು ಪೈಲೆಟ್ ರಾ‌ಮ್‌ದಾಸ್‌ ಹೇಳಿದ್ದಾರೆ. ಈ ವೇಳೆ ಚುನಾವಣಾ ಅಧಿಕಾರಿ ಹಾಗೂ ಪೈಲೆಟ್ ನಡುವೆ ಮಾತಿನ ಚಕಮಕಿ ನಡೆದಿದೆ.

ಇಷ್ಟಾದರೂ ತಮ್ಮ ಕರ್ತವ್ಯ ನಿಷ್ಠೆ ಪ್ರದರ್ಶಿಸಿದ ಚುನಾವಣಾಧಿಕಾರಿಗಳು ಹೆಲಿಕಾಪ್ಟರ್ ಜೊತೆಗೆ ಶಿವಕುಮಾರ್‌ ಕುಟುಂಬ ತೆರಳುತ್ತಿದ್ದ ಕಾರನ್ನೂ ತಪಾಸಣೆ ಮಾಡಿ ನಿಯಮ ಉಲ್ಲಂಘನೆಯಾಗದಿದ್ದನ್ನು ಖಾತರಿಪಡಿಸಿಕೊಂಡು ತೆರಳಿದ್ದಾರೆ.

ಅಂದಹಾಗೆ ಮಂಜುನಾಥನ ದರ್ಶನಕ್ಕಾಗಿ ಶಿವಕುಮಾರ್‌ ಪತ್ನಿ ಉಷಾ, ಮಗಳು ಮತ್ತು ಅಳಿಯ ಹಾಗೂ ಮಗ ಚಾಪರ್‌ನಲ್ಲಿ ಬಂದಿದ್ದರು. ಅಲ್ಲಿಂದ ದೇವಸ್ಥಾನ ತಲುಪಲು ಅವರು ಕಾರ್ ಬಳಸಿದ್ದರು.

ಈ ಸುದ್ದಿ ಓದಿದ್ದೀರಾ?:ನಮ್ಮ ಕುಟುಂಬ ಯಾವತ್ತೂ ಪ್ರಚಾರಕ್ಕೆ ಬಂದಿಲ್ಲ, ನಮಗೆ ಸೋಲಿನ ಭಯವಿಲ್ಲ: ಯತೀಂದ್ರ

ಸದ್ಯ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಡಿ ಕೆ ಶಿವಕುಮಾರ್ ಬಳಿಕ ಚಿಕ್ಕಮಗಳೂರಿಗೆ ಭೇಟಿ ನೀಡಿ ಎರಡು ದಿನ ಶೃಂಗೇರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇಲ್ಲಿ ಕುಟುಂಬಸ್ಥರ ಜೊತೆ ಶಾರದಾ ಮಠದ ಯಾಗ ಶಾಲೆಯಲ್ಲಿ ಚಂಡಿಕಾ ಯಾಗ ನಡೆಸಲಿದ್ದಾರೆ.

ಶನಿವಾರ ಸಂಜೆ ಚಂಡಿಕಾ ಯಾಗದ ಸಂಕಲ್ಪ ಮಾಡಲಿರುವ ಡಿ ಕೆ ಶಿವಕುಮಾರ್‌, ಭಾನುವಾರ ಬೆಳಗ್ಗೆ ಶಾರದೆಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಯಾಗದ ಪೂರ್ಣಾಹುತಿ ನೆರವೇರಿಸಲಿದ್ದಾರೆ. ಚಂಡಿಕಾ ಯಾಗ ಪೂರ್ಣಗೊಂಡ ಬಳಿಕ ಅವರು ಬೆಂಗಳೂರಿಗೆ ತೆರಳಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X