ದೊಡ್ಡಬಳ್ಳಾಪುರ | ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ನಗರಸಭೆಯ 8 ಸದಸ್ಯರು

Date:

Advertisements

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಹವಾ ಜೋರಾಗಿದೆ. ತಮಗೆ ಅಥವಾ ತಮ್ಮ ನೆಚ್ಚಿನವರಿಗೆ ಟಿಕೆಟ್ ಸಿಗಲಿಲ್ಲವೆಂದು ಪಕ್ಷ ತೊರೆದು ಮತ್ತೊಂದು ಪಕ್ಷ ಸೇರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೇ ವೇಳೆ, ದೊಡ್ಡಬಳ್ಳಾಪುರ ನಗರಸಭೆಯ ಎಂಟು ಬಿಜೆಪಿ ಸದಸ್ಯರು ‘ಕೈ’ ಹಿಡಿದಿದ್ದಾರೆ.

ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ಬಿಜೆಪಿಯಲ್ಲಿ ಬಂಡಾಯದ ಬಿಸಿ ಜೋರಾಗಿದೆ. ಪ್ರತಿದಿನವೂ ಒಬ್ಬಲ್ಲ ಒಬ್ಬ ನಾಯಕ ಕಾಂಗ್ರೆಸ್ ಸೇರುತ್ತಿದ್ದಾರೆ.

ದೊಡ್ಡ ಬಳ್ಳಾಪುರದ ನಗರಸಭೆ ಸದಸ್ಯರಾದ ಶಿವಶಂಕರ್, ನಾಗರಾಜ್, ಶಂಕರ್, ಶಿವರಾಜು ಸೇರಿದಂತೆ ಪ್ರಮುಖರು ಬಿಜೆಪಿ ತೊರೆದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ರಾಷ್ಟ್ರೀಯ ಪಕ್ಷಗಳು ಲಿಂಗಾಯತ ನಾಯಕನನ್ನು ಸಿಎಂ ಮಾಡುತ್ತೇವೆ ಎಂದು ಘೋಷಿಸಲಿ: ಮೃತ್ಯುಂಜಯ ಸ್ವಾಮೀಜಿ

ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿರುವ ಡಿ.ಕೆ ಶಿವಕುಮಾರ್, “ಇಂದು ದೊಡ್ಡಬಳ್ಳಾಪುರದ 8 ಹಾಲಿ ನಗರಸಭಾ ಸದಸ್ಯರು ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ. ನೀವು ಇಂದು ಕಾಂಗ್ರೆಸ್ ಸೇರುತ್ತಾ ದೇಶದ ತ್ರಿವರ್ಣ ಧ್ವಜವನ್ನು ನಿಮ್ಮ ಮೇಲೆ ಹಾಕಿಕೊಳ್ಳುವ ಪವಿತ್ರವಾದ ಅವಕಾಶ ಸಿಕ್ಕಿದೆ” ಎಂದಿದ್ದಾರೆ.

“ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಪುಟ್ಟಣ್ಣ ಸೇರಿದಂತೆ ಪ್ರಮುಖ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಿನ್ನೆ ಬೈಂದೂರಿನಲ್ಲಿ ಒಂದೂವರೆ ಸಾವಿರ ಜನ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ಇಂದು ನಿಮ್ಮನ್ನು ಬಹಳ ತುಂಬುಹೃದಯದಿಂದ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಂ ರೇವಣ್ಣ, ಶಾಸಕ ವೆಂಕಟರಮಣಯ್ಯ, ಲಗ್ಗೆರೆ ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X