ಬೇರೆ ಯಾವ ಸಂದರ್ಭವೂ ಉದಯಿಸುವುದಿಲ್ಲ, ಎಲ್ಲರೂ ನನಗೆ ಸಹಕಾರ ಕೊಟ್ಟು, ಆಶೀರ್ವಾದ ಮಾಡುತ್ತಾರೆ: ಡಿಕೆಶಿ

Date:

Advertisements

‘ಕಾಂಗ್ರೆಸ್‌ ಪಕ್ಷಕ್ಕೆ ಏನು ಮಾಡಬೇಕೋ ಎಲ್ಲವನ್ನೂ ಮಾಡಿರುವೆ. ಕಷ್ಟ ಕಾಲದಲ್ಲಿ ಶ್ರಮ ಹಾಕಿ ದುಡಿದಿದ್ದೇನೆ. ಈಗ ಬೇರೆ ಯಾವ ಸಂದರ್ಭವೂ ಉದಯಿಸುವುದಿಲ್ಲ. ಎಲ್ಲರೂ ನನಗೆ ಸಹಕಾರ ಕೊಟ್ಟು, ಆಶೀರ್ವಾದ ಮಾಡುತ್ತಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಸಂಕಷ್ಟದ ಸಮಯದಲ್ಲಿ ಪಕ್ಷ ಮುನ್ನಡೆಸಿದ್ದೇನೆ.ಕೆಪಿಸಿಸಿ ಅಧ್ಯಕ್ಷ ಆದಾಗಿನಿಂದ ನಿದ್ದೆ ಇಲ್ಲದೇ ಪಕ್ಷ ಬಲಪಡಿಸಿದ್ದೇನೆ” ಎಂದರು.

“ದಿನೇಶ್‌ ಗುಂಡೂರಾವ್‌ ಅವರು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದಾಗ ಸೋನಿಯಾ ಗಾಂಧಿ ಅವರು ನನಗೆ ಅಧಿಕಾರ ವಹಿಸಿದರು. ಉಪ ಚುನಾವಣೆ ಫಲಿತಾಂಶ ಬಳಿಕ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವುದಾಗಿ ಮುಂದೆ ಬಂದರು.ಈಗ ಹಿರಿಯರು ಮತ್ತು ಕಿರಿಯರು ನನಗೆ ಸಹಕಾರ ಕೊಡುತ್ತಾರೆ” ಎಂದು ಭರವಸೆ ವ್ಯಕ್ತಪಡಿಸಿದರು.

“ಸದ್ಯ ಯಾವುದೇ ರೀತಿಯ ಅಧಿಕಾರ ಹಂಚಿಕೆ ಚರ್ಚೆ ನಡೆದಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಏನು ತೀರ್ಮಾನ ಮಾಡುತ್ತಾರೋ ಅದೇ ಅಂತಿಮ” ಎಂದು ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಕೀಯ ವಿಕೃತಿ | ಖರ್ಗೆ ಅವರ ಅನಾರೋಗ್ಯ – ನಂಜು ಕಾರುತ್ತಿರುವ ಬಿಜೆಪಿಗರು

ಖರ್ಗೆ ಅವರು ದಲಿತ ಸಮುದಾಯದಿಂದ ಬಂದವರು. ಆ ಕಾರಣಕ್ಕಾಗಿಯೇ ಬಿಜೆಪಿ ಮತ್ತು...

ಚಿತ್ರದುರ್ಗ | ನಿಗಮ ಮಂಡಳಿಗೆ ಪರಿಗಣಿಸದೇ ಅನ್ಯಾಯ: ಕಾಂಗ್ರೆಸ್ಸಿನ ಆರ್ ಕೆ ಸರ್ದಾರ್ ಬೆಂಬಲಿಗರ ಆಕ್ರೋಶ

ʼʼಕರ್ನಾಟಕ ಪ್ರದೇಶ ಕಾಂಗ್ರೆಸ್ಸಿನ ಹಾಗೂ ಚಿತ್ರದುರ್ಗದ ಹಿರಿಯ ಮುಖಂಡರು ಮುಸ್ಲಿಂ ನಾಯಕರಾದ...

ಮಳೆ ಹಾನಿ ಪ್ರದೇಶಗಳಿಗೆ ಸಚಿವರು, ಅಧಿಕಾರಿಗಳು ಭೇಟಿ ನೀಡುತ್ತಿಲ್ಲ: ಪ್ರತಿಪಕ್ಷ ನಾಯಕ ಆರ್‌ ಅಶೋಕ

ಮಳೆ ಹಾನಿ ಪ್ರದೇಶಗಳಿಗೆ ಸಚಿವರು, ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಎಲ್ಲರೂ ಜಾತಿ...

ಈದಿನ ಗ್ರೌಂಡ್‌ ರಿಪೋರ್ಟ್‌ | ಪ್ರವಾಹ ಇಳಿದುಹೋದ ಮೇಲೆ… ಬದುಕೆಲ್ಲ ಬರಿದಾಗಿದೆ!

ಕಲಬುರಗಿ ಜಿಲ್ಲೆಯಲ್ಲಿ ಭೀಮಾ ನದಿಯ ಪ್ರವಾಹ ತಗ್ಗಿದೆ. ಇಷ್ಟು ದಿನ ಆರ್ಭಟಿಸಿದ...

Download Eedina App Android / iOS

X