ಚುನಾವಣೆ 2023 | ಗಡಿ ವಿವಾದ: ಕರ್ನಾಟಕದಲ್ಲಿ ಎಂಇಎಸ್ ಪರ ಪ್ರಚಾರಕ್ಕೆ ಮಹಾರಾಷ್ಟ್ರದ ಎಲ್ಲ ಪಕ್ಷಗಳಿಗೆ ಕರೆ

Date:

Advertisements

ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಬಿಜೆಪಿ ಮತ್ತು ಜೆಡಿಎಸ್‌ ಭಾರೀ ಕಸರತ್ತು ನಡೆಸುತ್ತಿವೆ. ಈ ಎಲ್ಲ ಪಕ್ಷಗಳಿಗೆ ಬೆಳಗಾವಿಯಲ್ಲಿ ಪೈಪೋಟಿ ನೀಡಲು ಬೆಳಗಾವಿಯನ್ನು ಮಹಾರಾಷ್ಟಕ್ಕೆ ಸೇರಿಸಬೇಕೆಂದು ಒತ್ತಾಯಿಸುತ್ತಲೇ ಇರುವಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಂದಾಗಿದೆ. ಅದಕ್ಕಾಗಿ, ತನ್ನ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಮಹಾರಾಷ್ಟ್ರದ ಪ್ರಮುಖ ರಾಜಕೀಯ ಪಕ್ಷಗಳ ನಾಯಕರನ್ನು ಆಹ್ವಾನಿಸಲು ನಿರ್ಧರಿಸಿದೆ.

ಗಡಿ ಜಿಲ್ಲೆ ಬೆಳಗಾವಿ ಮತ್ತು ಕರ್ನಾಟಕದ ಇತರ ಎರಡು ಜಿಲ್ಲೆಗಳಲ್ಲಿ ಮುಖ್ಯವಾಗಿ ಹೆಚ್ಚು ಮರಾಠಿಗರು ಇರುವ 865 ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಎಂಇಎಸ್ ಒತ್ತಾಯಿಸುತ್ತಿದೆ. ಆ ಭಾಗಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಎಂಇಎಸ್‌ ಕಣಕ್ಕಿಳಿಸುತ್ತಿದೆ. ಅಲ್ಲದೆ, ತಮ್ಮ ಬೆಂಬಲಕ್ಕಾಗಿ ಎಲ್ಲ ರಾಜಕೀಯ ಪಕ್ಷಗಳಿಗೆ ಆಹ್ವಾನ ಕಳುಹಿಸುವುದಾಗಿ ಮತ್ತು ವಿವಿಧ ಪಕ್ಷಗಳ ಮುಖಂಡರನ್ನು ಸಂಪರ್ಕಿಸುವುದಾಗಿ ಎಂಇಎಸ್ ಹೇಳಿದೆ.

“ಮಹಾರಾಷ್ಟ್ರದ ರಾಜಕೀಯ ಪಕ್ಷಗಳು (ಶಿವಸೇನೆ, ಎನ್‌ಸಿಪಿ, ಬಿಜೆಪಿ, ಕಾಂಗ್ರೆಸ್‌) ಬೆಳಗಾವಿ ಹಾಗೂ ಬೀದರ್ ಮತ್ತು ಕಾರವಾರದಲ್ಲಿ ವಾಸಿಸುವ ಮರಾಠಿ ಮಾತನಾಡುವ ಜನರ ಪರವಾಗಿ ಯಾವಾಗಲೂ ನಿಂತಿವೆ. ಭಾಷೆಯ ಹೆಸರಿನಲ್ಲಿ ಕರ್ನಾಟಕ ಸರ್ಕಾರದ ನಿರಂತರ ಕಿರುಕುಳ ಮತ್ತು ದೌರ್ಜನ್ಯದಿಂದಾಗಿ ನಾವು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸಬೇಕೆಂದು ಒತ್ತಾಯಿಸುತ್ತಿದ್ದೇವೆ,” ಎಂದು ಎಂಇಎಸ್‌ನ ಖಜಾಂಚಿ ಪ್ರಕಾಶ ಮಾರ್ಗಾಳೆ ಹೇಳಿದ್ದಾರೆ.

Advertisements

“1956ರಲ್ಲಿ ಮಹಾರಾಷ್ಟ್ರದ ಗಡಿ ಪ್ರದೇಶಗಳನ್ನು ಕರ್ನಾಟಕಕ್ಕೆ ಸೇರಿಸಿದ ನಂತರ, ಮಹಾರಾಷ್ಟ್ರದ ಉನ್ನತ ನಾಯಕರಾದ ಆಚಾರ್ಯ ಅತ್ರೆ ಮತ್ತು ಮೃಣಾಲ್ ಗೋರ್ ಯಾವಾಗಲೂ ನಮ್ಮ ಅಭ್ಯರ್ಥಿಗಳನ್ನು ಬೆಂಬಲಿಸಿದರು. ಈ ಹಿಂದೆ ಮಹಾರಾಷ್ಟ್ರ ಕಾಂಗ್ರೆಸ್‌ನ ನಾಯಕರು ನಮ್ಮನ್ನು ಬೆಂಬಲಿಸುತ್ತಿದ್ದರು. ಆದರೆ, 2008ರಿಂದ ಕಾಂಗ್ರೆಸ್ ಮತ್ತು ಬಿಜೆಪಿಯ ಮುಖಂಡರು ಎಂಇಎಸ್ ಅಭ್ಯರ್ಥಿಗಳ ವಿರುದ್ಧ ಪ್ರಚಾರ ನಡೆಸಿದ್ದಾರೆ. ಮಹಾರಾಷ್ಟ್ರದಲ್ಲಿ ಒಂದೇ ದನಿಯಲ್ಲಿ ಮಾತನಾಡಿದ ಅವರು ಗಡಿ ಜಿಲ್ಲೆಗಳಿಗೆ ಬಂದಾಗ ಬೇರೆ ಬೇರೆ ಧ್ವನಿಯಲ್ಲಿ ಮಾತನಾಡಿದ್ದಾರೆ. ಅವರು ನಿಜವಾಗಿಯೂ ನಮ್ಮ ಹೋರಾಟಕ್ಕೆ ಬೆಂಬಲ ನೀಡಿದರೆ ಗಡಿ ಜಿಲ್ಲೆಗೆ ಬಂದು ಎಂಇಎಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಬೇಕು,” ಎಂದು ಮಾರ್ಗಳೆ ಆಗ್ರಹಿಸಿದ್ದಾರೆ.

“ನಾವು ಇಡೀ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಲು ಒತ್ತಾಯಿಸುವುದಿಲ್ಲ. ಮರಾಠಿ ಮಾತನಾಡುವ ಜನರು ಹೆಚ್ಚಿನ ಜನಸಂಖ್ಯೆಯಲ್ಲಿರುವ ಜಿಲ್ಲೆಯ 550 ಹಳ್ಳಿಗಳನ್ನು ಮತ್ತು ಇತರ ಎರಡು ಗಡಿ ಜಿಲ್ಲೆಗಳ 300ಕ್ಕೂ ಹೆಚ್ಚು ಹಳ್ಳಿಗಳನ್ನು ಮಾತ್ರ ಕೇಳುತ್ತಿದ್ದೇವೆ,” ಎಂದು ಅವರು ಹೇಳಿದ್ದಾರೆ.

“ಮರಾಠಿ ಮಾತನಾಡುವ ಜನರು ಹೆಚ್ಚಿರುವ ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಬೆಳಗಾವಿ ಗ್ರಾಮಾಂತರ ಮತ್ತು ಖಾನಾಪುರ – ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಎಂಇಎಸ್ ನಿರ್ಧರಿಸಿದೆ. ನಮ್ಮ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ,” ಎಂದು ಕಿನೇಕರ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಚುನಾವಣೆ 2023 | ಕಿತ್ತೂರು ಕರ್ನಾಟಕ: ಬಿಜೆಪಿ ಅಭ್ಯರ್ಥಿಗಳಿಗೆ ಬಿಸಿ ತಟ್ಟಲಿರುವ ಬಂಡಾಯ

ಶಿವಸೇನೆ (ಉದ್ಧವ್‌ ಠಾಕ್ರೆ ಬಣ) ಮತ್ತು ಎನ್‌ಸಿಪಿ ನಾಯಕರು ತಮ್ಮ ಪಕ್ಷಗಳ ಮುಖಂಡರೊಂದಿಗೆ ಚರ್ಚಿಸಿ, ಬೆಂಬಲ ನೀಡುವ ಬಗ್ಗೆ ನಿರ್ಧರಿಸುವುದಾಗಿ ಹೇಳಿವೆ. ಆದರೆ, ಕಾಂಗ್ರೆಸ್‌ ಮತ್ತು ಬಜೆಪಿ ನಾಯಕರು ಎಂಇಎಸ್‌ ಪರವಾಗಿ ಪ್ರಚಾರಕ್ಕೆ ಬರಲು ನಿರಾಕರಿಸಿವೆ.

“ಗಡಿ ಜಿಲ್ಲೆಗಳಲ್ಲಿ ನಮ್ಮದೇ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಿರುವಾಗ ನಾವು ಎಂಇಎಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಸಾಧ್ಯವಾಗುವುದಿಲ್ಲ. ನಾವು ದೇಶದಲ್ಲಿ ಅಸ್ತಿತ್ವವನ್ನು ಹೊಂದಿರುವ ರಾಷ್ಟ್ರೀಯ ಪಕ್ಷ. ನಾವು ಎಂಇಎಸ್ ಉದ್ದೇಶವನ್ನು ಬೆಂಬಲಿಸುತ್ತೇವೆ. ಆದರೆ, ಅವರ ಅಭ್ಯರ್ಥಿಗಳನ್ನು ಬೆಂಬಲಿಸಲು ಸಾಧ್ಯವಿಲ್ಲ,” ಎಂದು ಮಹಾರಾಷ್ಟ್ರ ಕಾಂಗ್ರೆಸ್ ವಕ್ತಾರ ಅತುಲ್ ಲೋಂಧೆ ಹೇಳಿದ್ದಾರೆ.

“ಎಂಇಎಸ್ ತನ್ನ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ನಮಗೆ ಆಹ್ವಾನ ನೀಡಿದರೆ, ನಾವು ಅದನ್ನು ನಮ್ಮ ಕೇಂದ್ರ ನಾಯಕತ್ವದ ಮುಂದೆ ಇಡುತ್ತೇವೆ. ಹೈಕಮಾಂಡ್‌ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ,” ಎಂದು ಬಿಜೆಪಿ ರಾಜ್ಯ ವಕ್ತಾರ ಮಾಧವ್ ಭಂಡಾರಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X