ಚುನಾವಣೆ 2023 | ಬಿಎಸ್‌ವೈ ಪುತ್ರ ವಿಜಯೇಂದ್ರ ಘೋಷಿತ ಆಸ್ತಿ ಮೌಲ್ಯ ₹126 ಕೋಟಿ

Date:

Advertisements

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಶಿವಮೊಗ್ಗದ ಶಿಕಾರಿಪುರ ಕ್ಷೇತ್ರದಿಂದ ಕಣಕ್ಕಿಳಿದಿರುವ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ, ತಮ್ಮ ಆಸ್ತಿಯನ್ನು ಘೋಷಿಸಿದ್ದು, ಅವರು ಮತ್ತು ಅವರ ಪತ್ನಿ ಪ್ರೇಮಾ ಬಳಿ ಒಟ್ಟು 126.18 ಕೋಟಿ ರೂ. ಮೌಲ್ಯದ ಆಸ್ತಿ ಇರುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲದೆ, ತಮ್ಮ ಬಳಿಕ ಒಂದು ಸ್ವಂತ ಕಾರು ಕೂಡ ಇಲ್ಲವೆಂದು ಘೋಷಿಸಿದ್ದಾರೆ.

2019ರ ಉಪಚುನಾವಣೆಯ ಸಮಯದಲ್ಲಿ ವಿಜಯೇಂದ್ರ ಅವರ ಹೆಸರು ಮುನ್ನೆಲೆಯಲ್ಲಿತ್ತು. ಅದರಲ್ಲೂ ಕೆ.ಆರ್‌ ಪೇಟೆ ಕ್ಷೇತ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಸಚಿವ ನಾರಾಯಣಗೌಡ ಅವರ ಗೆಲುವಿನಲ್ಲಿ ವಿಜಯೇಂದ್ರ ಪಾತ್ರ ಪ್ರಮುಖವಾಗಿತ್ತು. ಅವರು ಕೆ.ಆರ್‌ ಪೇಟೆಯ ಪ್ರಥಮ ದರ್ಜೆ ಗುತ್ತಿಗೆದಾರರೊಬ್ಬರ ತೋಟದ ಮನೆಯಲ್ಲಿಯೇ ನೆಲೆಸಿ, ಚುನಾವಣಾ ತಂತ್ರ ರೂಪಿಸಿದ್ದರು. ಮಾತ್ರದಲ್ಲದೆ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ನಡೆಯುತ್ತಿರುವ ಹಲವಾರು ಗುತ್ತಿಗೆಗಳ ಡೀಲ್‌ಗಳಲ್ಲಿ ವಿಜಯೇಂದ್ರ ನೇರವಾಗಿ ತಲೆ ಹಾಕುತ್ತಿದ್ದರು ಮತ್ತು ಶೇಕಡಾವಾರು ಕಮಿಷನ್ ಪಡೆಯುತ್ತಿದ್ದರು ಎಂಬ ಆರೋಪಗಳನ್ನು ಅವರು ಎದುರಿಸುತ್ತಿದ್ದಾರೆ.

ಇದೀಗ ಅವರು ತಮ್ಮ ಆಸ್ತಿಯ ವಿವರನ್ನು ಘೋಷಿಸಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಘೋಷಿಸಿರುವಂತೆ, ಅವರು 46.82 ಕೋಟಿ ರೂ. ಮತ್ತು ಅವರ ಪತ್ನಿ 7.85 ಕೋಟಿ ಮೌಲ್ಯದ ಚರಾಸ್ತಿಯನ್ನು ಹೊಂದಿದ್ದಾರೆ. ಇಬ್ಬರ ಬಳಿ ಒಟ್ಟು 70.11 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ, ಒಟ್ಟು 2.29 ಕೋಟಿ ರೂ. ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ವಸ್ತುಗಳಿವೆ. ವಿಜಯೇಂದ್ರ 1.34 ಕೆಜಿ ಚಿನ್ನ ಹೊಂದಿದ್ದರೆ, ಅವರ ಪತ್ನಿ 1.25 ಕೆಜಿ ಚಿನ್ನಾಭರಣಗಳನ್ನು ಹೊಂದಿದ್ದಾರೆ. ವಿಜಯೇಂದ್ರ ಬಳಿ 1.75 ಲಕ್ಷ ರೂ. ಮೌಲ್ಯದ ಟ್ರ್ಯಾಕ್ಟರ್ ಮತ್ತು ಟ್ರೇಲರ್‌ಗಳಿವೆ.

Advertisements

ಈ ಸುದ್ದಿ ಓದಿದ್ದೀರಾ?: ಚುನಾವಣೆ 2023 | ಸಚಿವರ ಸಂಪತ್ತು ಹಲವು ಪಟ್ಟು ಹೆಚ್ಚಳ

ಮಾತ್ರವಲ್ಲದೆ, ಶಿಕಾರಿಪುರದಲ್ಲಿ ಕೃಷಿ ಭೂಮಿ, ದೊಡ್ಡಬಳ್ಳಾಪುರ, ರಾಮನಗರ, ಶಿಕಾರಿಪುರ, ಶಿವಮೊಗ್ಗ, ಕಲಬುರಗಿ ಮತ್ತು ಬೆಂಗಳೂರಿನಲ್ಲಿ ಕೃಷಿಯೇತರ ಭೂಮಿ ಹೊಂದಿದ್ದಾರೆ. ಹಾಗೇ ಏಳು ಮನೆಗಳಿವೆ ಎಂದು ಅವರು ಘೋಷಿಸಿದ್ದಾರೆ.

ವಿಜಯೇಂದ್ರ ವಿರುದ್ಧ ಎರಡು ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಆ ಪೈಕಿ, ಲಂಚ ಆರೋಪದ ಬಗ್ಗೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣವನ್ನೂ ಅವರು ಎದುರಿಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X