ಚುನಾವಣೆ 2023 | ಸಿಂಧನೂರಿನಲ್ಲಿ ಪತ್ನಿ-ಪತಿ ನಡುವೆ ಪೈಪೋಟಿ?

Date:

ರಾಯಚೂರು ಜಿಲ್ಲೆಯ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಪತ್ನಿ-ಪತಿ ಇಬ್ಬರೂ ಚುನಾವಣಾ ಕಣಕ್ಕಿಳಿದಿದ್ದು, ಇಬ್ಬರೂ ನಾಮಪತ್ರ ಸಲ್ಲಿಸಿದ್ದಾರೆ. ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಕಟ್ಟಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ನೆಕ್ಕಂಟಿ ನಾಮಪತ್ರ ಸಲ್ಲಿಸಿದ್ದರೆ, ಅವರ ಪತ್ನಿ ಎನ್ ರಮ್ಯಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಪತ್ನಿ-ಪತಿ ಇಬ್ಬರೂ ನಾಮಪತ್ರ ಸಲ್ಲಿಸಲು ಸಿಂಧನೂರು ತಹಶೀಲ್ದಾರ್ ‌ಕಚೇರಿಗೆ ಒಟ್ಟಿಗೆ ಬಂದಿದ್ದಾರೆ. ಮಲ್ಲಿಕಾರ್ಜುನ ಮೊದಲು ನಾಮಪತ್ರ ಸಲ್ಲಿಸಿದ್ದು, ಅವರ ಬಳಿಕ ರಮ್ಯಾ ಅವರು ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೆ, ನಾಮಪತ್ರ ಸಲ್ಲಿಕೆಗೂ ಮುನ್ನ ಇಬ್ಬರೂ ಜೊತೆಯಾಗಿಯೇ ರ್‍ಯಾಲಿ ನಡೆಸಿದ್ದಾರೆ.

ಹೀಗಾಗಿ, ಇಬ್ಬರೂ ಪರಸ್ಪರ ಎದುರಾಳಿಗಳಾಗಿ ಸ್ಪರ್ಧಿಸಿದ್ದಾರೆಯೇ ಅಥವಾ ಒಂದು ವೇಳೆ ಒಬ್ಬರ ನಾಮಪತ್ರ ರಿಜೆಕ್ಟ್‌ ಆದರೆ, ಮತ್ತೊಬ್ಬರು ಕಣದಲ್ಲಿರಲಿ ಎಂದು ಇಬ್ಬರೂ ನಾಮಪತ್ರ ಸಲ್ಲಿಸಿದ್ದಾರೆಯೇ ಎಂಬ ಅನುಮಾನವನ್ನು ಕ್ಷೇತ್ರದ ಜನರು ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಿಂಧನೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ವೆಂಟರಾವ ನಾಡಗೌಡ, ಕಾಂಗ್ರೆಸ್‌ ಅಭ್ಯರ್ಥಿ ಹಂಪನಗೌಡ ಬಾದರ್ಲಿ, ಬಿಜೆಪಿ ಅಭ್ಯರ್ಥಿ ಕೆ ಕಾರಿಯಪ್ಪ, ಎಎಪಿ ಅಭ್ಯರ್ಥಿ ಸಂಗ್ರಾಮ ನಾರಾಯಣ ಕಣದಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕುಡಿಯುವ ನೀರಿಗಾಗಿ ಜನರ ಪರದಾಟ; ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ

ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಬೇಸಿಗೆ ಆರಂಭದ ಹಿನ್ನೆಲೆಯಲ್ಲಿ...

ವಿಜಯಪುರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ; ಚಿಕಿತ್ಸೆಗಾಗಿ ಸ್ಥಳೀಯರ ಪರದಾಟ

ಸರ್ಕಾರ ಸುಸಜ್ಜಿತ ಆರೋಗ್ಯ ಉಪಕೇಂದ್ರಗಳನ್ನು ನಿರ್ಮಿಸಿದ್ದರೂ, ವೈದ್ಯರು ಲಭ್ಯವಿಲ್ಲದ ಕಾರಣ ಹುಣಶ್ಯಾಳ...

ಮಂಡ್ಯದಲ್ಲಿ ಕಾಂಗ್ರೆಸ್ ಪರ ಪ್ರಚಾರ; ‘ಏನೇನೋ ಅಂದ್ಕೊಬೇಡಿ’ ಎಂದ ನಟ ದರ್ಶನ್

ಸದ್ಯ ಲೋಕಸಭಾ ಚುನಾವಣೆ ರಂಗೇರಿದ್ದು, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಮಂಡ್ಯದ...