ಚುನಾವಣೆ 2023 | ಬಿಜೆಪಿಗೆ ಮಾಜಿ ಸಿಎಂ ಜಗದೀಶ್‌ ಶೆಟ್ಟರ್ ರಾಜೀನಾಮೆ

Date:

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದಾರೆ. ಇದೀಗ, ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದ್ದಾರೆ.

ಶೆಟ್ಟರ್‌ ಅವರಿಗೆ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ನೀರಾಕರಿಸಿದೆ. ತಮಗೆ ಟಿಕೆಟ್ ನೀಡುವಂತೆ ಒತ್ತಾಯಿಸಲು ಶೆಟ್ಟರ್‌ ದೆಹಲಿವರೆಗೂ ಹೋಗಿದ್ದರು. ಆದರೂ, ಟಿಕೆಟ್‌ ಪಡೆಯುವಲ್ಲಿ ಅವರು ವಿಫಲರಾಗಿದ್ದರು. ಅವರು ಈ ಚುನಾವಣೆಯಲ್ಲಿ ಖಂಡಿತಾ ಸ್ಪರ್ಧಿಸುತ್ತೇನೆಂದು ಹೇಳಿದ್ದರು. ಅವರ ಮನವೊಲಿಸಲು ಬಿಜೆಪಿ ನಾಯಕರು ಭಾರೀ ಕಸರತ್ತು ಮಾಡಿದ್ದರು. ಆದರೂ, ಶೆಟ್ಟರ್‌ ತಮ್ಮ ನಿರ್ಧಾರದಿಂದ ಹೆಂದೆ ಸರಿಯಲಿಲ್ಲ. ಇದೀಗ, ಬಿಜೆಪಿ ರಾಜೀನಾಮೆ ನೀಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರವನ್ನು ಜಗದೀಶ್‌ ಶೆಟ್ಟರ್ ಪ್ರತಿನಿಧಿಸುತ್ತಿದ್ದರು. ಅವರಿಗೆ ಟಿಕೆಟ್‌ ಸಿಗದ ಕಾರಣ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಅವರು ಬೇರೊಂದು ಪಕ್ಷವನ್ನು ಸೇರುತ್ತಾರೆಯೇ ಅಥವಾ ಪಕ್ಷೇತರವಾಗಿಯೇ ಸ್ಪರ್ಧಿಸುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು...

ಲೋಕಸಭಾ ಚುನಾವಣೆ | ಏ.26ರಂದು ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ವ್ಯತ್ಯಯ ಸಾಧ್ಯತೆ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ...

ಲೋಕಸಭಾ ಚುನಾವಣೆ | ಏಪ್ರಿಲ್ 26 ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 26ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ...

ಕರಗ ಮಹೋತ್ಸವ: ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ; ಓರ್ವ ಸಾವು

ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ...