ಚುನಾವಣೆ 2023 | ನಗದು ಸೇರಿ ₹300 ಕೋಟಿ ಮೌಲ್ಯದ ವಸ್ತುಗಳ ವಶ

Date:

  • ಬೆಂಗಳೂರಿನಲ್ಲಿ ₹82 ಕೋಟಿಗೂ ಹೆಚ್ಚು ಮೌಲ್ಯದ ವಸ್ತು ವಶ
  • 52 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿದ ಬಿಬಿಎಂಪಿ ಆಯುಕ್ತರು

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷವೊಡ್ಡಲು ಸಂಗ್ರಹಿಸಿದ್ದ ಸುಮಾರು ₹300 ಕೋಟಿ ಮೌಲ್ಯದ ವಸ್ತುಗಳು ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ತಿಳಿಸಿದೆ.

- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ 10 ದಿನಗಳು ಮಾತ್ರ ಬಾಕಿ ಉಳಿದಿವೆ. ರಾಜಕೀಯ ಪಕ್ಷಗಳು ಹಣ ಮತ್ತು ವಸ್ತುಗಳನ್ನು ನೀಡುವ ಮೂಲಕ ಮತದಾರರನ್ನು ಸೆಳೆಯಲು ಯತ್ನಿಸುತ್ತಿವೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ದಾಖಲೆಗಳಿಲ್ಲದ ನಗದು ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ರಾಜ್ಯ ರಾಜಧಾನಿ ಬೆಂಗಳೂರು ಒಂದರಲ್ಲೇ ಚುನಾವಣಾ ಆಯೋಗ ₹82 ಕೋಟಿಗೂ ಹೆಚ್ಚು ಮೌಲ್ಯದ ನಗದು ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಂಡಿದೆ.

ಈ ಕುರಿತು ಮಾತನಾಡಿರುವ ಮುಖ್ಯ ಚುನಾವಣಾ ಅಧಿಕಾರಿ ಮನೋಜ್‌ ಕುಮಾರ್ ಮೀನಾ, “ತಮಗೆ ಬಂದಿರುವ ಗುಪ್ತಚರ ಮಾಹಿತಿಯ ಪ್ರಕಾರ, ಮತದಾನದ ದಿನ ಸಮೀಪಿಸುತ್ತಿದ್ದಂತೆ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಮತದಾರರಿಗೆ ಲಂಚ ನೀಡುವ ಪ್ರಯತ್ನಗಳು ಹೆಚ್ಚಾಗುತ್ತವೆ” ಎಂದು ತಿಳಿಸಿದ್ದಾರೆ.

“ಇಂತಹ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವುದು ಮತ್ತು ಮುಕ್ತ ಮತ್ತು ನ್ಯಾಯಸಮ್ಮತ ಮತದಾನವನ್ನು ಖಚಿತಪಡಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ಜಾಗರೂಕತೆಯನ್ನು ಹೆಚ್ಚಿಸಲು ಮತ್ತು ಕಣ್ಗಾವಲು ತಂಡಗಳ ಸಂಖ್ಯೆಯನ್ನು ಹೆಚ್ಚಿಸಲು ಎಲ್ಲ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚಿಸಿದ್ದೇವೆ” ಎಂದು ಹೇಳಿದ್ದಾರೆ

“ರಾಜ್ಯಾದ್ಯಂತ ಸುಮಾರು ₹100 ಕೋಟಿಗೂ ಅಧಿಕ ನಗದು ವಶಪಡಿಸಿಕೊಳ್ಳಲಾಗಿದೆ. ಈ ಪೈಕಿ ಶೇ.10ರಷ್ಟು ಬೆಂಗಳೂರಿನಲ್ಲಿಯೇ ವಶಪಡಿಸಿಕೊಂಡಿದ್ದೇವೆ. ಮಾದಕ ವಸ್ತುಗಳು, ಚಿನ್ನ ಹಾಗೂ ಬೆಳ್ಳಿ ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದೇವೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣಾ ಸಮೀಕ್ಷೆ | ಮುಕ್ತ ಚರ್ಚೆ ನಡೆಸಲು ಬಿ.ಎಲ್‌ ಸಂತೋಷ್‌ಗೆ ‘ಈದಿನ.ಕಾಮ್‌’ ಆಹ್ವಾನ

“ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬೆಂಗಳೂರು ಒಂದರಲ್ಲೇ ಸುಮಾರು 52 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿದ್ದಾರೆ” ಎಂದು ಕರ್ನಾಟಕ ಹೆಚ್ಚುವರಿ ಸಿಇಒ ಕೆ ವೆಂಕಟೇಶ್ ಕುಮಾರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...