ಚುನಾವಣೆ 2023 | ನಾಮಪತ್ರ ಹಿಂಪಡೆಯದಂತೆ ಕೃಷ್ಣೇಗೌಡ ಬೆಂಬಲಿಗರ ಒತ್ತಾಯ

Date:

Advertisements

ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಸೋಮವಾರ (ಏ.24) ಕಡೆಯ ದಿನ. ರಾಜ್ಯಾದ್ಯಂತ ಹಲವು ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದುಕೊಂಡಿದ್ದಾರೆ. ಈ ನಡುವೆ, ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ಕಾಂಗ್ರೆಸ್‌ ವಿರುದ್ಧ ಬಂಡೆದ್ದಿರುವ ಪಕ್ಷೇತರ ಅಭ್ಯರ್ಥಿ ಎಂ.ಟಿ ಕೃಷ್ಣೇಗೌಡ ನಾಮಪತ್ರವನ್ನು ಹಿಂಪಡೆಯದಂತೆ ಒತ್ತಾಯಿಸಿ ಅವರ ಬೆಂಬಲಿಗರು ಮೆರವಣಿಗೆ ನಡೆಸಿದ್ದಾರೆ.

ಕಾಂಗ್ರೆಸ್‌ನಲ್ಲಿ ತೊಡಗಿಸಿಕೊಂಡಿದ್ದ ಮತ್ತು ಕ್ಷೇತ್ರದಲ್ಲಿ ಪಕ್ಷ ಕಟ್ಟಲು ದುಡಿದಿದ್ದ ಕೃಷ್ಣೇಗೌಡ, ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ, ಕೈ ನಾಯಕರು ಅವರಿಗೆ ಟಿಕೆಟ್ ನೀಡದ ಹಿನ್ನೆಲೆ, ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.

ಕಾಂಗ್ರೆಸ್‌ ವಿರುದ್ಧ ಬಂಡೆದ್ದು ನಾಮಪತ್ರ ಸಲ್ಲಿಸಿದ್ದವರನ್ನು ಕೆಕೆಪಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮನವೊಲಿಸಲು ಪ್ರಯತ್ನಿಸಿದ್ದರು. ಹಲವು ಬಂಡಾಯಗಾರರು ತಮ್ಮ ನಾಮಪತ್ರ ವಾಪಸ್ ಪಡೆಯುತ್ತಾರೆಂದು ಹೇಳಿದ್ದರು. ಈ ನಡುವೆ, ಅರಕಲಗೂಡಿನಲ್ಲಿ ಕೃಷ್ಣೇಗೌಡ ತಮ್ಮ ನಾಮಪತ್ರವನ್ನು ಹಿಂಪಡೆಯಬಾರದೆಂದು ಅವರು ಬೆಂಬಲಿಗರು ರ್‍ಯಾಲಿ ನಡೆಸಿದ್ದಾರೆ. ತಮ್ಮನ್ನು ಬೆಂಬಲಿಸುವಂತೆ ಕೃಷ್ಣೇಗೌಡ ಕೂಡ ತಮ್ಮ ಮನವಿ ಮಾಡಿದ್ದಾರೆ.

Advertisements

ಈ ವರದಿ ಓದಿದ್ದೀರಾ?: ಚುನಾವಣೆ 2023 | ಈದಿನ.ಕಾಮ್‌ ಸಮೀಕ್ಷೆ-3: ಭ್ರಷ್ಟಾಚಾರ, ಅಸಮರ್ಥತೆಯೇ ತಿರಸ್ಕಾರಕ್ಕೆ ಪ್ರಧಾನ ಕಾರಣ

ನಗರದಲ್ಲಿ ಮೆರವಣಿಗೆ ನಡೆಸಿದ ಬೆಂಬಲಿಗರು, “ನಿಮ್ಮೊಂದಿಗೆ ನಾವಿದ್ದೇವೆ. ನಿಮ್ಮನ್ನೇ ಗೆಲ್ಲಿಸುತ್ತೇವೆ, ನಾಮಪತ್ರ ಹಿಂಪಡೆಯಬೇಡಿ” ಎಂದು ಒತ್ತಾಯಿಸಿದ್ದಾರೆ. ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಕೃಷ್ಣೇಗೌಡ, “ತಾಲೂಕಿನಲ್ಲಿ ಕಾಂಗ್ರೆಸ್‌ ಬಲಗೊಳಿಸಲು ಸಾಕಷ್ಟು ಶ್ರಮಿಸಿದ್ದೇನೆ. ಆದರೂ, ಪಕ್ಷ ನನಗೆ ಅನ್ಯಾಯ ಮಾಡಿದೆ. ಟಿಕೆಟ್‌ ನೀಡುವುದಾಗಿ ಹೇಳಿದ್ದ ಕೆಪಿಸಿಸಿ ಅಧ್ಯಕ್ಷರು ತಮ್ಮ ಮಾತು ಉಳಿಸಿಕೊಳ್ಳಲಿಲ್ಲ. ಅವರು ನನ್ನ ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದಾರೆ. ನನ್ನ ಕ್ಷೇತ್ರದ ಮತದಾರರೇ ನನಗೆ ಹೈಕಮಾಂಡ್‌. ನೀವೇ ನನ್ನನ್ನು ಗೆಲ್ಲಿಸಬೇಕು” ಎಂದು ಮನವಿ ಮಾಡಿದ್ದಾರೆ.

“ತಾಲೂಕಿನಲ್ಲಿ ಕಾಂಗ್ರೆಸ್‌ ನೆಲ ಕಚ್ಚಿತ್ತು. ಪಕ್ಷವನ್ನು ನನ್ನ ಸೋದರ ಕೃಷ್ಣೇಗೌಡ ತಳಮಟ್ಟದಿಂದ ಮತ್ತೆ ಕಟ್ಟಿ, ಬೆಳೆಸಿದರು. ಆದರೆ, ಕಾಂಗ್ರೆಸ್‌ ನಾಯಕರು ಅವರಿಗೆ ವಂಚಿಸಿದ್ದಾರೆ” ಎಂದು ಕೃಷ್ಣೇಗೌಡರ ಸಹೋದರ, ನಿವೃತ್ತ ಐಎಎಸ್ ಅಧಿಕಾರಿ ರಾಮೇಗೌಡ ಕಿಡಿಕಾರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X