ಚುನಾವಣೆ 2023 | ಸಮಗ್ರ ಮಾಹಿತಿಯ ಆ್ಯಪ್‌, ಚುನಾವಣಾ ಜಾಗೃತಿ ಗೀತೆ ಬಿಡುಗಡೆ

Date:

Advertisements
  • ವಿಜಯ್ ಪ್ರಕಾಶ್ ಸಂಗೀತ ಸಂಯೋಜನೆ ಜಾಗೃತಿ ಗೀತೆ
  • 2023ರ ಚುನಾವಣೆ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ

ಮತದಾನದಲ್ಲಿ ತಪ್ಪದೇ ಭಾಗವಹಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್ ಮೀನಾ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ. ಮತದಾರರಿಗೆ ಅನುಕೂಲವಾಗಲು ಚುನಾವಣಾ ಆ್ಯಪ್‌ ಬಿಡುಗಡೆ ಮಾಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು, ಚುನಾವಣಾ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.

ಮುಖ್ಯ ಚುನಾವಣಾಧಿಕಾರಿಗಳು ಅಂಚೆ ಇಲಾಖೆ ಮೂಲಕ ಹೊರತಂದಿರುವ ವಿಶೇಷ ಅಂಚೆ ಲಕೋಟೆ, ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು ಸಂಗೀತ ಸಂಯೋಜಿಸಿ ಹಾಡಿರುವ ಚುನಾವಣಾ ಜಾಗೃತಿ ಗೀತೆ ಹಾಗೂ ಮತದಾರರ ಸಹಾಯಕ್ಕಾಗಿ ಅಭಿವೃದ್ಧಿ ಪಡಿಸಿರುವ ಚುನಾವಣಾ ಆ್ಯಪ್‌ ಬಿಡುಗಡೆ ಮಾಡಿದ್ದಾರೆ.

Advertisements

ಚುನಾವಣಾ ಆಯೋಗ ಅಭಿವೃದ್ಧಿಪಡಿಸಿರುವ ಆ್ಯಪ್‌ನ ಸದುಪಯೋಗ ಪಡಿಸಿಕೊಳ್ಳುವಂತೆ ಮನೋಜ್‌ ಕುಮಾರ್ ಹೇಳಿದ್ದಾರೆ.

“ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸಲು ಸಾರ್ವಜನಿಕರ ಸಹಕಾರವೂ ಅತ್ಯಗತ್ಯ. ಚುನಾವಣಾ ಅಕ್ರಮಗಳನ್ನು ನಿಯಂತ್ರಿಸಿ, ನೈತಿಕ ಚುನಾವಣೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಹೊರತಂದಿರುವ ಸಿ-ವಿಜಿಲ್, ಸುವಿಧಾ ಆ್ಯಪ್ ಗಳಿಗೆ ಉತ್ತಮ ಜನಸ್ಪಂದನೆ ದೊರೆಯುತಿದೆ” ಎಂದು ಹೇಳಿದ್ದಾರೆ.

“ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ವಿಕಲಚೇತನರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿರುವ ಚುನಾವಣಾ ಆಯೋಗದ ಈ ಕ್ರಮವನ್ನು ಅನೇಕ ಹಿರಿಯ ಜೀವಗಳು ಶ್ಲಾಘಿಸಿದ್ದು, ವೃದ್ಧರಾದರೂ ಮತದಾನದ ಜವಾಬ್ದಾರಿಯನ್ನು ಮೆರೆದ ಹಿರಿಯ ನಾಗರಿಕರು ಎಲ್ಲ ಯುವ ಮತದಾರರಿಗೆ ಸ್ಪೂರ್ತಿಯಾಗಿದ್ದಾರೆ” ಎಂದಿದ್ದಾರೆ.

ಮತದಾರರ ಅನುಕೂಲಕ್ಕಾಗಿ ಭಾರತ ಚುನಾವಣಾ ಆಯೋಗ ಹಲವು ಆ್ಯಪ್‌ಗಳನ್ನು ಹೊರ ತಂದಿದೆ ಮತ್ತು ಸಹಾಯವಾಣಿ 1950 ಕಾರ್ಯನಿರ್ವಹಿಸುತ್ತಿದೆ. ಮತದಾನದ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶವನ್ನು ಸಾಕಾರಗೊಳಿಸಲು ಮುಖ್ಯ ಚುನಾವಣಾಧಿಕಾರಿಗಳ ವತಿಯಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

“ಚುನಾವಣೆಗೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ಆ್ಯಪ್ ಒದಗಿಸಲಿದೆ. ಮತದಾರರ ಮತಗಟ್ಟೆಯ ವಿವರ, ಅಭ್ಯರ್ಥಿಗಳ ವಿವರ, ಚುನಾವಣಾ ವೇಳಾ ಪಟ್ಟಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗೆ ವೀಲ್ ಚೇರ್ ವ್ಯವಸ್ಥೆ, ಮತದಾನದ ಪ್ರಮಾಣ, ಮತಗಟ್ಟೆಯ ಸುತ್ತಮುತ್ತಲಿನ ಆಸ್ಪತ್ರೆ, ಪೊಲೀಸ್ ಠಾಣೆ ವಿವರ ಸೇರಿದಂತೆ ಎಲ್ಲ ಉಪಯುಕ್ತ ಮಾಹಿತಿಗಳನ್ನು ಒಂದೇ ಆ್ಯಪ್ ನಲ್ಲಿ ದೊರೆಯಲಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿ ಸುಟ್ಟ ಈಶ್ವರಪ್ಪ ವಿರುದ್ಧ ʼಕೈʼ ನಾಯಕರು ಕಿಡಿ

ವಿಶೇಷ ಅಂಚೆ ಲಕೋಟೆ

“ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆಯನ್ನು ಹೊರತರಲಾಗಿದೆ, ಅದೇ ರೀತಿಯಲ್ಲಿ ಯುವ ಮತದಾರರನ್ನು ಪ್ರೇರೇಪಿಸಲು ಖ್ಯಾತ ಗಾಯಕರಾದ ವಿಜಯಪ್ರಕಾಶ್ ಅವರ ಗಾಯನ ಹಾಗೂ ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯದಲ್ಲಿ ಮೂಡಿಬಂದಿರುವ ಚುನಾವಣಾ ಜಾಗೃತಿ ಗೀತೆ ಸುಂದರವಾಗಿ ಮೂಡಿಬಂದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಮತಗಟ್ಟೆಯತ್ತ ಸೆಳೆಯಲಿದೆ” ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ರಾಜೇಂದ್ರ ಕುಮಾರ್, ಪೋಸ್ಟ್ ಮಾಸ್ಟರ್ ಜನರಲ್ ಎಲ್ ಕೆ ದಾಶ್, ನಿರ್ದೇಶಕರು ಪೋಸ್ಟ್‌ಲ್ ಸರ್ವೀಸ್‌ ಕಿಯಾ ಅರೋರ್, ಖ್ಯಾತ ಗಾಯಕರು ವಿಜಯಪ್ರಕಾಶ್ (ಆನ್ಲೈನ್ ಉಪಸ್ಥಿತಿ), ಸಿನಿಮಾ ಸಾಹಿತಿ ವಿ ನಾಗೇಂದ್ರ ಪ್ರಸಾದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X