ಚುನಾವಣೆ 2023 | ಕೈ ತಪ್ಪಿದ ಬಿಜೆಪಿ ಟಿಕೆಟ್; ಜೆಡಿಎಸ್‌ನತ್ತ ಸೂರ್ಯಕಾಂತ ನಾಗಮಾರಪಳ್ಳಿ?

Date:

ಬೀದರ್ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ 4 ಕ್ಷೇತ್ರಗಳಿಗೆ ಬಿಜೆಪಿ ಮೊದಲ ಪಟ್ಟಿಯಲ್ಲೇ ಟಿಕೆಟ್ ಘೋಷಿಸಿತು. ಆದರೆ ಭಾಲ್ಕಿ ಹಾಗೂ ಬೀದರ್ ಉತ್ತರ ಕ್ಷೇತ್ರದ ಟಿಕೆಟ್ ಘೋಷಿಸದೆ ಬಾಕಿ ಉಳಿಸಿಕೊಂಡಿತು. ಬುಧವಾರ ರಾತ್ರಿ ಬಿಡುಗಡೆಯಾದ ಬಿಜೆಪಿ ಎರಡನೇ ಪಟ್ಟಿಯಲ್ಲಿ ಬೀದರ್ ಹಾಗೂ ಭಾಲ್ಕಿ ಎರಡು ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿದೆ. ಬೀದರ್ ಕ್ಷೇತ್ರದಲ್ಲಿ ಈಶ್ವರಸಿಂಗ್ ಠಾಕೂರ್ ಅವರಿಗೆ ಟಿಕೆಟ್‌ ನೀಡಿದೆ. ಇದು ಸೂರ್ಯಕಾಂತ ನಾಗಮಾರಪಳ್ಳಿ ಸೇರಿದಂತೆ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳಲ್ಲಿ ಅಸಮಾಧಾನ ಹುಟ್ಟುಹಾಕಿದೆ.

ಬೀದರ್ ಉತ್ತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸೂರ್ಯಕಾಂತ ನಾಗಮಾರಪಳ್ಳಿ, ರಘುನಾಥರಾವ ಮಲ್ಕಾಪುರೆ, ಈಶ್ವರಸಿಂಗ್ ಠಾಕೂರ್, ಗುರುನಾಥ ಕೊಳ್ಳೂರು ಸೇರಿದಂತೆ ಹಲವರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಇವರೆಲ್ಲರ ಪೈಕಿ ಸೂರ್ಯಕಾಂತ ನಾಗಮಾರಪಳ್ಳಿ ಪ್ರಬಲ ಆಕಾಂಕ್ಷಿಯಾಗಿದ್ದರು. ಅವರು 2009ರ ಉಪಚುನಾವಣೆ ಹಾಗೂ 2018ರ ಸಾರ್ವತ್ರಿಕ ಚುನಾವಣೆಯಲ್ಲಿಯೂ ಸ್ಪರ್ಧಿಸಿ ಸೋಲುಂಡಿದ್ದರು. ಈ ಬಾರಿಯೂ ತಮಗೆ ಟಿಕೆಟ್‌ ನೀಡಬೇಕೆಂದು ಒತ್ತಾಯಿಸಿದ್ದರು. ಆದರೆ, ಹಿಂದುತ್ವವಾದಿ ಎಂದೇ ಗುರುತಿಸಿಕೊಂಡಿದ್ದ ಈಶ್ವರಸಿಂಗ್ ಠಾಕೂರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇದು, ಕ್ಷೇತ್ರದ ಬಿಜೆಪಿ ಪಾಳಯದಲ್ಲಿ ಬಂಡಾಯ ಭುಗಿಲೇಳುವಂತೆ ಮಾಡಿದೆ.

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಸೂರ್ಯಕಾಂತ ನಾಗಮಾರಪಳ್ಳಿ ಮಾಜಿ ಸಚಿವ, ದಿವಂಗತ ಗುರುಪಾದಪ್ಪ ನಾಗಮಾರಪಳ್ಳಿ ಅವರ ಪುತ್ರ, 2018ರಲ್ಲಿ ಕಾಂಗ್ರೆಸ್ಸಿನ ರಹೀಂ ಖಾನ್ ವಿರುದ್ಧ ಸ್ಪರ್ಧಿಸಿ ಕಡಿಮೆ ಅಂತರದಲ್ಲಿ ಸೋಲು ಅನುಭವಿಸಿದ್ದರು. ಆದರೂ, ಕ್ಷೇತ್ರದಲ್ಲಿ ಸಕ್ರಿಯವಾಗಿದ್ದರು. ಈ ಬಾರಿ ಮತ್ತೆ ಬಿಜೆಪಿಯಿಂದ ಸ್ಪರ್ಧಿಸುವ ನಿರೀಕ್ಷೆಯಲ್ಲಿದ್ದ ನಾಗಮಾರಪಳ್ಳಿಗೆ ಬಿಜೆಪಿ ಕೈಕೊಟ್ಟಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಿಂದುತ್ವವಾದಿ, ಸಂಘ ಪರಿವಾರದ ಈಶ್ವರಸಿಂಗ್ ಠಾಕೂರ್‌ಗೆ ಟಿಕೆಟ್ ನೀಡಬೇಕೆಂದು ಕೆಲವರು ಒತ್ತಾಯಿಸಿದರು. ಇನ್ನೂ ಕೆಲವು ಬಿಜೆಪಿ ಕಾರ್ಯಕರ್ತರು ಬೀದರ್‌ನಲ್ಲಿ ರ್‍ಯಾಲಿ ನಡೆಸಿ, ಲಿಂಗಾಯತ ಸಮುದಾಯದ ಬೇರೆ ನಾಯಕನಿಗೆ ಟಿಕೆಟ್ ನೀಡಬೇಕು. ಸೂರ್ಯಕಾಂತ ನಾಗಮಾರಪಳ್ಳಿ ಸ್ಥಳೀಯವಾಗಿ ಲಭ್ಯವಿರುವುದಿಲ್ಲ ಎಂಬ ಸಂದೇಶ ರವಾನಿಸಿದ್ದರು.

ಬೀದರ್ ಉತ್ತರದಲ್ಲಿ ಲಿಂಗಾಯತ ಹಾಗೂ ಮುಸ್ಲಿಂ ಮತಗಳೇ ಅಧಿಕವಾಗಿವೆ. 1967ರಲ್ಲಿ ನಡೆದ ಚುನಾವಣೆಯಲ್ಲಿ ಜನಸಂಘದ ಅಭ್ಯರ್ಥಿ ಗೆದಿದ್ದ ಏಕೈಕ ಕ್ಷೇತ್ರವೂ ಇದಾಗಿದೆ. ಆ ಬಳಿಕ, 1989 ಮತ್ತು 1999ರಲ್ಲಿ ಕ್ಷೇತ್ರದಲ್ಲಿ ಗೆಲುವು ಕಂಡಿದ್ದ ಬಿಜೆಪಿ ಕಳೆದ ಎರಡು ದಶಕಗಳಲ್ಲಿ ಮತ್ತೆ ಗೆಲ್ಲಲಾಗಿಲ್ಲ. ಹೀಗಾಗಿ, ಈ ಬಾರಿ, ಲಿಂಗಾಯತ ಸಮುದಾಯ ಮುಖಂಡರಿಗೆ ಟಿಕೆಟ್‌ ನೀಡದರೆ, ಗೆಲ್ಲಬಹುದು ಎಂದು ಹೇಳಲಾಗಿತ್ತು. ಆದರೂ, ಬಿಜೆಪಿ ಟಿಕೆಟ್ ನೀಡಿಲ್ಲ. ಬದಲಾಗಿ, ಹೊಸ ಮುಖ ಹಾಗೂ ಹಿಂದುತ್ವದ ದಾಳ ಉರುಳಿಸಿದರೆ ಯಶಸ್ಸು ಸಾಧಿಸಬಹುದೆಂಬ ಲೆಕ್ಕಾಚಾರದಲ್ಲಿ ಈಶ್ವರಸಿಂಗ್‌ಗೆ ಟಿಕೆಟ್ ನೀಡಿದೆ.

ನಾಳೆ ಕಾರ್ಯಕರ್ತರ ಸಭೆ, ಸ್ಫರ್ಧೆ ತೀರ್ಮಾನ

ಬಿಜೆಪಿ ಟಿಕೆಟ್ ಕೈತಪ್ಪಿದಕ್ಕೆ ಸೂರ್ಯಕಾಂತ ನಾಗಮಾರಪಳ್ಳಿ ಪಕ್ಷ ತೊರೆಯುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಅವರು ಪಕ್ಷೇತರರಾಗಿ ಸ್ಪರ್ಧಿಸುವ ಬದಲು ಜೆಡಿಎಸ್‌ನಿಂದ ಸ್ಪರ್ಧಿಸಿದರೆ ಗೆಲುವು ಸುಗಮವಾಗಬಹುದು ಎನ್ನುವ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬರುತ್ತಿವೆ.

ಈ ಸುದ್ದಿ ಓದಿದ್ದೀರಾ?: ಚುನಾವಣೆ 2023 | ಔರಾದ್‌ನಲ್ಲಿ ‘ಪ್ರಭು’ ಮಣಿಸಲು ಕಾಂಗ್ರೆಸ್ ಕಸರತ್ತು; ಬಗೆಹರಿಯದ ಟಿಕೆಟ್ ಕಗ್ಗಂಟು

“ಟಿಕೆಟ್ ಕೈತಪ್ಪಿದಕ್ಕೆ ಯಾವುದೇ ಬೇಸರವಿಲ್ಲ. ಎಲ್ಲರಿಗೂ ಒಳ್ಳೆಯದಾಗಲಿ. ಈ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಶತಸಿದ್ಧ, ಪಕ್ಷ ಕೈಕೊಟ್ಟರು ಕ್ಷೇತ್ರದ ಜನತೆ ಕೈಬಿಡುವುದಿಲ್ಲ ಎಂಬ ಭರವಸೆ ನನಗಿದೆ. ಹೀಗಾಗಿ ನಾಳೆ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ” ಎಂದು ಸೂರ್ಯಕಾಂತ ಹೇಳಿದ್ದಾರೆ.

ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ

ಸೂರ್ಯಕಾಂತ ನಾಗಮಾರಪಳ್ಳಿ ಜೆಡಿಎಸ್‌ನಿಂದ ಸ್ಪರ್ಧಿಸಿದರೆ ಬೀದರ್ ಉತ್ತರ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ. ಕಾಂಗ್ರೆಸ್ಸಿನ ಹಾಲಿ ಶಾಸಕ ರಹೀಂ ಖಾನ್, ಬಿಜೆಪಿಯಿಂದ ಈಶ್ವರಸಿಂಗ್ ಹಾಗೂ ನಾಗಮಾರಪಳ್ಳಿ ಮಧ್ಯೆ ನೇರ ಪೈಪೋಟಿ ನಡೆಯಲಿದೆ. ಎರಡು ಬಾರಿ ಸೋಲುಂಡ ಸೂರ್ಯಕಾಂತ ನಾಗಮಾರಪಳ್ಳಿ ಈ ಬಾರಿ ಯಾವುದೇ ಪಕ್ಷದಿಂದ ಸ್ಪರ್ಧಿಸಿದರೂ ಗೆಲ್ಲುತ್ತಾರೆ ಎಂದೂ ಚರ್ಚೆಯಾಗುತ್ತಿದೆ. ಕ್ಷೇತ್ರದ ರಾಜಕೀಯ ರಂಗದಲ್ಲಿ ಏನೆಲ್ಲ ಆಗಬಹುದು ಕಾದು ನೋಡೋಣ ಎನ್ನುತ್ತಿದ್ದಾರೆ ಮತದಾರರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ...