ಚುನಾವಣೆ 2023 | ಬಿಜೆಪಿ ತೊರೆದ ರೌಡಿಶೀಟರ್ ಫೈಟರ್ ರವಿ; ಪಕ್ಷೇತರನಾಗಿ ಸ್ಪರ್ಧೆ

Date:

ಇತ್ತೀಚೆಗೆ ಪ್ರಧಾನಿ ಮೋದಿ ಜೊತೆ ಕಾಣಿಸಿಕೊಂಡು ಬಿಜೆಪಿ ಟ್ರೋಲ್‌ ಆಗುವುದಕ್ಕೆ ಕಾರಣನಾಗಿದ್ದ ಫೈಟರ್‌ ರವಿ (ಮಲ್ಲಿಕಾರ್ಜುನ) ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ಫೈಟರ್‌ ರವಿ ಮುಂದಾಗಿದ್ದರು. ಕಳೆದ ತಿಂಗಳು ಪ್ರಧಾನಿ ಮೋದಿ ಮಂಡ್ಯಕ್ಕೆ ಭೇಟಿ ನೀಡಿದ್ದಾಗ, ಹೆಲಿಪ್ಯಾಡ್‌ ಬಳಿಯೇ ಹೋಗಿ ಮೋದಿ ಅವರನ್ನು ರವಿ ಸ್ವಾಗತಿಸಿದ್ದರು. ಮೋದಿ ಮತ್ತು ರವಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ನೆಟ್ಟಿಗರು ಬಿಜೆಪಿ ಮತ್ತು ಮೋದಿ ಅವರನ್ನು ವ್ಯಂಗ್ಯವಾಗಿ ಟ್ರೋಲ್‌ ಮಾಡಿದ್ದರು.

ಈ ನಡುವೆ ನಾಗಮಂಗಲದ ಟಿಕೆಟ್‌ಗಾಗಿ ಬಿಜೆಪಿಯಲ್ಲಿ ರವಿ ಬೇಡಿಕೆ ಇಟ್ಟಿದ್ದರು. ಆದರೆ, ಅವರಿಗೆ ಟಿಕೆಟ್‌ ನಿರಾಕರಿಸಿರುವ ಬಿಜೆಪಿ, ಶಿವರಾಮೇಗೌಡರ ಪತ್ನಿ ಸುಧಾ ಅವರಿಗೆ ಟಿಕೆಟ್‌ ನೀಡಿದೆ. ಇದರಿಂದ ಅಸಮಾಧಾನಗೊಂಡಿದ್ದ ರವಿ ಪಕ್ಷ ತೊರೆದು, ಪಕ್ಷೇತರನಾಗಿ ಸ್ಪರ್ಧಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಂಗಳವಾರ ತಮ್ಮ ಬೆಂಬಲಿಗರೊಂದಿಗೆ ನಾಗಮಂಗಲ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಆ ಸಮಯದಲ್ಲಿಯೂ ಕೆಲವರು ಬಿಜೆಪಿ ಬಾವುಟ ಹಿಡಿದುಕೊಂಡು ಫೈಟರ್ ರವಿಗೆ ಜೈಕಾರ ಕೂಗಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಇಡೀ ಬಿಜೆಪಿ ಬಿ ಎಲ್ ಸಂತೋಷ್ ಕಪಿಮುಷ್ಠಿಯಲ್ಲಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಕ್ರಿಕೆಟ್ ಬೆಟ್ಟಿಂಗ್ ಅವ್ಯವಹಾರ ಸೇರಿದಂತೆ ರವಿ ಹಲವಾರು ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅಲ್ಲದೆ, ಕ್ರಿಕೆಟ್‌ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರವಿ, ಜಾಮೀನು ಪಡೆದು ಹೊರಬಂದಿದ್ದಾರೆ. ಅವರು ಇತ್ತೀಚೆಗೆ ಬಿಜೆಪಿ ಸೇರಿದ್ದರು. ಆತನಿಗೆ ಬಿಜೆಪಿ ಟಿಕೆಟ್‌ ನೀಡುವುದು ಬಹುತೇಕ ಖಚಿತ ಎನ್ನಲಾಗಿತ್ತು.

ನಾಗಮಂಗಲದಲ್ಲಿ ನಡೆದಿದ್ದ ಬಿಜೆಪಿ ವಿಜಯಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ನಾಗಮಂಗಲ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಲ್ಲಿಕಾರ್ಜುನ್ (ಫೈಟರ್ ರವಿ) ಗೆಲುವು ನಿಶ್ಚಿತವೆಂದು ಹೇಳಿದ್ದರು. ಆದರೆ, ಈಗ ಟಿಕೆಟ್ ನಿರಾಕರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ವಿಜಯಪುರ | ಅನುಭವಿ ಆಲಗೂರರ ಜಯದಿಂದ ಜಿಲ್ಲೆ ಅಭಿವೃದ್ಧಿ: ಶಾಸಕ ಯಶವಂತರಾಯಗೌಡ

ಸಜ್ಜನ ಹಾಗೂ ಅನುಭವಿಯಾದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರರಿಗೆ ಮತ ನೀಡಿದರೆ...

ಹಾವೇರಿ | ವಿದ್ಯಾರ್ಥಿನಿಯರನ್ನು ಚುಡಾಯಿಸುವ ಕಾಮುಕ ಕಿಡಿಗೇಡಿಗಳ ಮೇಲೆ ಕ್ರಮಕ್ಕೆ ಆಗ್ರಹ

ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಚುಹಾವೇರಡಾಯಿಸುವ, ಲೈಂಗಿಕವಾಗಿ ಪ್ರಚೋದಿಸುವ ಕಾಮುಕ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಲು...