ಶಿವಮೊಗ್ಗ | ಬಿಜೆಪಿ ಸಮಾವೇಶದಲ್ಲಿ ತಮಿಳು ನಾಡಗೀತೆ; ಅರ್ಧಕ್ಕೆ ತಡೆದ ಈಶ್ವರಪ್ಪ

Date:

ಶಿವಮೊಗ್ಗದಲ್ಲಿ ಅಣ್ಣಾಮಲೈ ನೇತೃತ್ವದಲ್ಲಿ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ತಮಿಳುನಾಡಿನ ನಾಡಗೀತೆ ಪ್ರಸಾರ ಮಾಡಲಾಗಿದೆ. ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಅದನ್ನು ಅರ್ಧಕ್ಕೆ ತಡೆದು, ಕನ್ನಡ ನಾಡಗೀತೆ ಹಾಕಿಸಿದ್ದಾರೆ.

- Advertisement -

ನಗರದ ಎನ್‌ಇಎಸ್ ಮೈದಾನದಲ್ಲಿ ಗುರುವಾರ ಮಧ್ಯಾಹ್ನ ತಮಿಳು ಮಾತನಾಡು ಸಮುದಾಯದ ಜನರನ್ನು ಸೇರಿಸಿ ಬಿಜೆಪಿ ಸಮಾವೇಶ ಆಯೋಜಿಸಿತ್ತು. ತಮಿಳುನಾಡು ಬಿಜೆಜೆ ಅಧ್ಯಕ್ಷ, ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಸಮಾವೇಶದ ನೇತೃತ್ವ ವಹಿಸಿದ್ದರು. ಅವರೇ ಸಮಾವೇಶದಲ್ಲಿ ತಮಿಳುನಾಡಿನ ನಾಡಗೀತೆ ಹಾಕಿಸಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸಮಾವೇಶದ ಆರಂಭದ ವೇಳೆ ತಮಿಳು ನಾಡಗೀತೆ ಪ್ರಸಾರವಾಗುತ್ತಿದ್ದಂತೆ ಅಲ್ಲಿ ನೆರೆದಿದ್ದ ಮುಖಂಡರು, ಕಾರ್ಯಕರ್ತರು ಎದ್ದುನಿಂತು ಗೌರವ ಸಲ್ಲಿಸಿದ್ದಾರೆ. ಆದರೆ, ಅದು ತಮಿಳು ನಾಡಗೀತೆಯೆಂದು ಅರಿತ ಈಶ್ವರಪ್ಪ, ತಮಿಳು ನಾಡಗೀತೆಯನ್ನು ಅರ್ಧಕ್ಕೆ ತಡೆದಿದ್ದಾರೆ.

ಕ್ಯಾಸೆಟ್‌ನಲ್ಲಿ ತಮಿಳು ನಾಡಗೀತೆ ಹಾಕುವುದು ಬೇಡ. ಬೇಕಿದ್ದರೆ ತಮಿಳು ಹೆಣ್ಣುಮಕ್ಕಳು ವೇದಿಕೆ ಮೇಲೆ ಹಾಡಲಿ ಎಂದು ಈಶ್ವರಪ್ಪ ಹೇಳಿದ್ದಾರೆ. ಆದರೆ, ಯಾರೂ ಮುಂದೆಬರದಿದ್ದಾಗ, ತನಿಳು ನಾಡಗೀತೆ ಹಾಕಿದ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಈಶ್ವರಪ್ಪ, ರಾಜ್ಯದ ನಾಡಗೀತೆಯನ್ನು ಹಾಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಶೇ. 75ಕ್ಕೆ ಹೆಚ್ಚಳ: ಸಿದ್ದರಾಮಯ್ಯ

ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡಲು ಪಕ್ಷವು ತನ್ನ ರಾಷ್ಟ್ರ ನಾಯಕರು ಮತ್ತು ವಿವಿಧ ರಾಜ್ಯಗಳ ನಾಯಕರನ್ನು ರಾಜ್ಯಕ್ಕೆ ಕರೆತರುತ್ತಿದೆ. ಅದೇ ರೀತಿಯಲ್ಲಿ ರಾಜ್ಯಕ್ಕೆ ಬಂದಿದ್ದ ಅಣ್ಣಾಮಲೈ, ತಮಿಳು ನಾಡಗೀತೆ ಹಾಕಿಸಿ, ಯಡವಟ್ಟು ಮಾಡಿದ್ದಾರೆ.

ಸಮಾವೇಶದಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪಕೂಡ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ...

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...