ಚುನಾವಣೆ 2023 | ಇಂದಿನಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಶುರು

Date:

  • ನಾಮಪತ್ರ ಸಲ್ಲಿಕೆಗೆ ಏಳು ದಿನಗಳ ಕಾಲಾವಕಾಶ
  • ಮೇ 10ಕ್ಕೆ ಮತದಾನ, ಮೇ 13ಕ್ಕೆ ಫಲಿತಾಂಶ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಇಂದಿನಿಂದ (ಏ.13) ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ.

- Advertisement -

ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರದಿಂದಲೇ ಆರಂಭವಾಗಲಿದ್ದು, ಒಟ್ಟು ಏಳು ದಿನ ಅವಕಾಶ ಇರುತ್ತದೆ. ಏ.20 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಏ.21ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಾಸು ಪಡೆಯಲು ಏ.24ರಂದು ಕೊನೆಯ ದಿನವಾಗಿದೆ. ಮೇ 10ಕ್ಕೆ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟವಾಗಲಿದೆ.

ಜೆಡಿಎಸ್‌ ಈಗಾಗಲೇ 93 ಕ್ಷೇತ್ರಕ್ಕೆ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಕಾಂಗ್ರೆಸ್‌ ಎರಡು ಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 165 ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದೆ. ಹಾಗೆಯೇ ಬಿಜೆಪಿ ಎರಡು ಪಟ್ಟಿ ಬಿಡುಗಡೆ ಮಾಡಿದ್ದು, 212 ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಿದೆ

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಅವಧಿ ಇದ್ದರೂ ಬಿಜೆಪಿ ತೊರೆಯುತ್ತಿರುವ ಸಾಲು ಸಾಲು ಎಂಎಲ್‌ಸಿಗಳು

ಗುರುವಾರದಿಂದ ಮತ್ತಷ್ಟು ಚುನಾವಣೆ ಬೆಳವಣಿಗೆಗಳು ಗರಿಗೆದರಲಿದ್ದು, ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಫೈನಲ್‌ ಮಾಡಲು ಪ್ರಮುಖವಾಗಿ ಮೂರು ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸಿವೆ.

ಬಿಜೆಪಿಯೊಳಗೆ ಬಂಡಾಯ ಮತ್ತಷ್ಟು ಭುಗಿಲೆದ್ದಿದ್ದು, ಅನೇಕ ನಾಯಕರು ಉಳಿದ ಪಕ್ಷಗಳಿಗೆ ಹಾರುತ್ತಾರಾ ಅಥವಾ ಪಕ್ಷೇತರವಾಗಿ ನಿಲ್ಲುತ್ತಾರಾ ಎಂಬ ಪ್ರಶ್ನೆಗೆ ಈ ಏಳು ದಿನದಲ್ಲಿ ಉತ್ತರ ಸಿಗಲಿದೆ.

16ನೇ ವಿಧಾನಸಭೆ ಚುನಾವಣೆಗೆ ರಾಜ್ಯದಲ್ಲಿ ಒಟ್ಟು 5.24 ಕೋಟಿ ಮತದಾರರಿದ್ದು ಇದರಲ್ಲಿ ಪುರುಷರು 2.63 ಕೋಟಿ ಹಾಗೂ ಮಹಿಳೆಯರು 2.60 ಕೋಟಿ ಇದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...

ಅಕ್ಟೋಬರ್ 10ರ ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ಧರಣಿಯಲ್ಲಿ ಮಮತಾ ಬ್ಯಾನರ್ಜಿ ಭಾಗಿ ಸಾಧ್ಯತೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...