ಚುನಾವಣೆ 2023 | ಚಾಮರಾಜನಗರದಲ್ಲಿ ವಾಟಾಳ್‌ ಸ್ಪರ್ಧೆ; ಸೋಮಣ್ಣಗೆ ಮತ್ತೊಂದು ಸವಾಲು!

Date:

ಚಾಮರಾಜನಗರ ವಿಧಾನಸಭಾ ಕ್ಷೇತ್ರ ಈಗ ‘ಹೈ-ವೋಲ್ಟೇಜ್‌’ ಕ್ಷೇತ್ರವಾಗಿ ಮಾರ್ಪಟ್ಟಿದೆ. ವರುಣಾ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಒಂದೊಂದು ಕಾಲಿಟ್ಟಿರುವ ಸಚಿವ ವಿ ಸೋಮಣ್ಣ, ಎರಡಲ್ಲಿ ಒಂದಾದರೂ ಗೆಲ್ಲಬೇಕೆಂದು ಯತ್ನಿಸುತ್ತಿದ್ದಾರೆ. ಚಾಮರಾಜನಗರದಲ್ಲಿ ಸೋಮಣ್ಣಗೆ ಕಾಂಗ್ರೆಸ್‌ ಪ್ರಬಲ ಪೈಪೋಟಿ ನೀಡಿದೆ. ಇದೀಗ, ಮತ್ತಷ್ಟು ಪೈಪೋಟಿ ನೀಡಲು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಭ್ಯರ್ಥಿಯಾಗಿ ವಾಟಾಳ್‌ ನಾಗರಾಜ್ ಕಣಕ್ಕಿಳಿಸಿದ್ದಾರೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

- Advertisement -

ಬುಧವಾರ, ತನ್ನ ಬೆಂಬಲಿಗರೊಂದಿಗೆ ಚುನಾವಣಾಧಿಕಾರಿ ಕಚೇರಿಗೆ ತೆರಳಿದ ವಾಟಾಳ್‌ ನಾಗರಾಜ್‌ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೆ, ಇದು ತಮ್ಮ ಕೊನೆ ಚುನಾವಣೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಾಮಪತ್ರ ಸಲ್ಲಿಸಿ ಮಾತನಾಡಿದ ವಾಟಾಳ್, “ಮತದಾರರು ಯಾವುದೇ ಆಸೆ, ಆಮಿಷಗಗಳಿಗೆ ಒಳಗಾಗಬಾರದು. ಕ್ಷೇತ್ರದ ಅಭಿವೃದ್ಧಿಗಾಗಿ ನನಗೆ ಮತ ನೀಡುವ ಮೂಲಕ ಅವಕಾಶ ನೀಡಬೇಕು” ಎಂದು ಹೇಳಿದರು.

“ಬಿಜೆಪಿ, ಆರ್‌ಎಸ್‌ಎಸ್ ವಿರುದ್ಧ ಹೋರಾಟ ಮಾಡಲು ನಾನು ಸಮರ್ಥನಾಗಿದ್ದೇನೆ. ಚಾಮರಾಜನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕಣದಲ್ಲಿಲ್ಲ. ಹಾಗಾಗಿ, ಜೆಡಿಎಸ್‌ ನನ್ನನ್ನು ಬೆಂಬಲಿಸಬೇಕು. ಕಾಂಗ್ರೆಸ್‌ಗೆ ನಿಜವಾಗಲೂ ಜಾತ್ಯತೀತ ವಾದದ ಮೇಲೆ ನಂಬಿಕೆ ಇದ್ದರೆ, ಪ್ರಚಂಡ ಹೋರಾಟ ಮಾಡಬೇಕು. ಕ್ಷೇತ್ರದಲ್ಲಿ ನನ್ನ ವಿರುದ್ಧ ಅಭ್ಯರ್ಥಿ ಹಾಕಬಾರದು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...